NEWSಕೃಷಿರಾಜಕೀಯ

ಕೃಷಿ ಕಾಯ್ದೆ ವಿಚಾರದಲ್ಲಿ ನಿರ್ಮಲಾ ಸೀತಾರಾಮನ್- ಮೋದಿ; ಇವರಲ್ಲಿ ಯಾರು ಸುಳ್ಳು ಹೇಳುತ್ತಿದ್ದಾರೆ: ಸಿದ್ದರಾಮಯ್ಯ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಒಂದೆಡೆ ದೇಶದ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದು ಎಪಿಎಂಸಿ ಗಳನ್ನು ಮುಚ್ಚಲು ಸಕಾಲ ಎನ್ನುತ್ತಾರೆ, ಇನ್ನೊಂದೆಡೆ ಪ್ರಧಾನಿ ಮೋದಿಯವರು ಎಪಿಎಂಸಿ ಗಳನ್ನು ಮುಚ್ಚಲ್ಲ, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಮುಂದೆಯೂ ಸಿಗುತ್ತೆ ಅಂತಾರೆ. ಇವರಿಬ್ಬರಲ್ಲಿ ಯಾರು ಸತ್ಯ ಹೇಳ್ತಿದ್ದಾರೆ? ಯಾರು ಸುಳ್ಳು ಹೇಳ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕೃಷಿ ಕಾಯ್ದೆ ವಿರುದ್ಧ ಇಂದು ನಡೆದ ಭಾರತ ಬಂದ್‌ ಬೆಂಬಲಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ  ಪ್ರತಿಭಟನೆಯಲ್ಲಿ ಕಪ್ಪು ಬಾವುಟ ಪ್ರ ದರ್ಶಿಸಿ  ಮಾತನಾಡಿದರು.

ಸರ್ಕಾರ ಜಾರಿಗೊಳಿಸುವ ಕಾನೂನುಗಳು, ನೀತಿ ನಿಯಮಗಳು ಸಕಾರಾತ್ಮಕ ಬದಲಾವಣೆ ತರುವಂತಿರಬೇಕೇ ಹೊರತು ಸರ್ವನಾಶಕ್ಕೆ ದಾರಿಮಾಡಿಕೊಂಡುವಂತೆ ಇರಬಾರದು. ರೈತರೇ ತಮಗೆ ಈ ಮಸೂದೆ ಬೇಡವೆಂದರೂ, ಏನಾದರೂ ಆಗಲಿ ಮಸೂದೆ ಜಾರಿ ಮಾಡಿಯೇ ತೀರುತ್ತೇವೆ ಎಂದು ಹೊರಟಿರಲು ಕಾರಣವೇನು ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ನೈಜ ಕಾಳಜಿಯಿದೆಯೇ ಎಂದು ಪ್ರಶ್ನಿಸಿದ್ದಾರೆ.

ಕೃಷಿಗೆ ಮಾರಕವಾದ ಮಸೂದೆಗಳ ವಿರುದ್ಧ ರೈತ ಸಮುದಾಯ ನಡೆಸುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ನಿರಂತವಾಗಿ ಇರಲಿದೆ. ರೈತರ ಪಾಲಿಗೆ ಮರಣ ಶಾಸನವಾದ ಕಾನೂನುಗಳು ಜಾರಿಯಾಗದಂತೆ ತಡೆಯಲು ಸದನದ ಒಳಗೆ ಮತ್ತು ಹೊರಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...