ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು: ಸಿಎಂ ಡಿಕೆಶಿ
ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಪ್ರತಿಯೊಬ್ಬ ನಾಗರಿಕನ ದೈನಂದಿನ ಬದುಕನ್ನು ಸುಗಮಗೊಳಿಸಿ, ಇಡೀ ನಗರವನ್ನು ಬೆಸೆಯುವಂತಹ ದೂರದೃಷ್ಟಿಯುಳ್ಳ ಯೋಜನೆಗಳಲ್ಲೇ ನಮ್ಮ ಬೆಂಗಳೂರಿನ ಭವಿಷ್ಯ ಅಡಗಿದೆ. ಈ ನಿಟ್ಟಿನಲ್ಲಿ ನಮ್ಮ ಮೆಟ್ರೋ ಮಹತ್ತರ ಪಾತ್ರ ವಹಿಸುತ್ತಿದೆ -ಡಿಕೆಶಿ

ಬೆಂಗಳೂರು: ಇಂದು ನನ್ನೂರು ಕನಕಪುರಕ್ಕೆ ಹೋಗುವಾಗ, ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ಬೆಂಗಳೂರಿನ ನಾಗರಿಕರ ಮುಖದಲ್ಲಿನ ನೆಮ್ಮದಿಯನ್ನು ಕಂಡಾಗ, ಸುರಕ್ಷಿತ, ಜನಸ್ನೇಹಿ ಹಾಗೂ ಕೈಗೆಟುಕುವ ಸಾರ್ವಜನಿಕ ಸಾರಿಗೆ ನಮ್ಮ ಕರ್ನಾಟಕದ ಜನತೆಗೆ ಎಷ್ಟು ಮುಖ್ಯ ಎಂಬುದು ಮತ್ತೊಮ್ಮೆ ಮನವರಿಕೆಯಾಯಿತು ಎಂದು ತಿಳಿಸಿದ್ದಾರೆ.
ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಪ್ರತಿಯೊಬ್ಬ ನಾಗರಿಕನ ದೈನಂದಿನ ಬದುಕನ್ನು ಸುಗಮಗೊಳಿಸಿ, ಇಡೀ ನಗರವನ್ನು ಬೆಸೆಯುವಂತಹ ದೂರದೃಷ್ಟಿಯುಳ್ಳ ಯೋಜನೆಗಳಲ್ಲೇ ನಮ್ಮ ಬೆಂಗಳೂರಿನ ಭವಿಷ್ಯ ಅಡಗಿದೆ. ಈ ನಿಟ್ಟಿನಲ್ಲಿ ನಮ್ಮ ಮೆಟ್ರೋ ಮಹತ್ತರ ಪಾತ್ರ ವಹಿಸುತ್ತಿದೆ ಎಂದು ಶ್ಲಾಘಿಸಿದರು.
ಪ್ರಯಾಣದುದ್ದಕ್ಕೂ ಪ್ರೀತಿಯಿಂದ ಮಾತನಾಡಿಸಿ, ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ಧನ್ಯವಾದಗಳು. ಸಾರ್ವಜನಿಕ ಸೇವೆ ಎಂದರೆ ಕೇವಲ ಅಧಿಕಾರವಲ್ಲ, ಅದು ಜನರ ಆಶೋತ್ತರಗಳಿಗೆ ಕಿವಿಯಾಗುವುದು, ಸದಾ ಕಲಿಯುವುದು ಮತ್ತು ಜನರೊಂದಿಗೆ ಸದಾ ಸಂಪರ್ಕದಲ್ಲಿರುವುದು ಎಂಬುದನ್ನು ಇಂದಿನ ಒಡನಾಟ ನನಗೆ ಮತ್ತೊಮ್ಮೆ ನೆನಪಿಸಿಕೊಟ್ಟಿದೆ ಎಂದರು.
ಇನ್ನು ಬನ್ನಿ, ನಾವೆಲ್ಲರೂ ಕೈಜೋಡಿಸಿ ಇನ್ನಷ್ಟು ಸಮೃದ್ಧ, ಬಲಿಷ್ಠ ಮತ್ತು ಜನಸ್ನೇಹಿ ಕರ್ನಾಟಕವನ್ನು ಕಟ್ಟೋಣ ಎಂದು ಕರೆ ನೀಡಿದ್ದಾರೆ.
Related









