CrimeNEWSನಮ್ಮರಾಜ್ಯ

ಮಾಜಿ ಸಿಎಂ ಎಸ್.ಆರ್. ಕಂಠಿ ಅವರ ಪತ್ನಿ ಮರಿಬಸಮ್ಮ ನಿಧನ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಆರ್. ಕಂಠಿ ಅವರ ಪತ್ನಿ, ಸ್ವಾತಂತ್ರ್ಯ ಹೋರಾಟಗಾರ್ತಿ, ಮರಿಬಸಮ್ಮ ಕಂಠಿ (103) ಇಂದು ನಿಧನರಾದರು.

ಹತ್ತು ವಿವಿಧ ಭಾಷೆಗಳಲ್ಲಿ ಸರಾಗವಾಗಿ ಮಾತನಾಡುತ್ತಿದ್ದರು. ಮಾಜಿ ಸಿಎಂ ಎಸ್.ಆರ್. ಕಂಠಿ ಬೆಳಗಾವಿಯ ಕಿತ್ತೂರಿನಲ್ಲಿ ಸ್ಥಾಪಿಸಿರುವ ಸೈನಿಕ ಶಾಲೆಯಲ್ಲಿ ಮಗನೊಂದಿಗೆ ವಾಸವಿದ್ದ ಮರಿಬಸಮ್ಮ ವಯೋಸಹಜ ಕಾಯಿಕೆಯಿಂದ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.

ಮರಿಬಸಮ್ಮ ಅವರಿಗೆ ಇಬ್ಬರು ಪುತ್ರರು. ಒಬ್ಬ ಪುತ್ರ ಈ ಹಿಂದೆಯೇ ನಿಧನವಾಗಿದ್ದರೆ ಇನ್ನೊಬ್ಬರು ಮಹೇಂದ್ರ ಕಂಠಿ ಸೈನಿಕ ಶಾಲೆ ಚೇರ್ ಮನ್ ಆಗಿದ್ದಾರೆ.

ಮರಿಬಸಮ್ಮ ಅವರ ಪಾರ್ಥಿವ ಶರೀರವನ್ನು ಸೈನಿಕ ಶಾಲೆ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಟ್ಟ ನಂತರ ಇಂದು ಸಂಜೆ ಬಾಗಲಕೋಟೆಯ ಇಳಕಲ್‌ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಎಸ್ ಆರ್ ಕಂಠಿ (ಶಿವಲಿಂಗಪ್ಪ ರುದ್ರಪ್ಪ ಕಂಠಿ )ಯವರು ಬಾಗಲಕೋಟ (ಹಳೆಯ ವಿಜಯಪುರ) ಜಿಲ್ಲೆಯ ಹುನಗುಂದ ತಾಲೂಕಿನ ಇಳಕಲ್‌ ನಗರದವರು. 1962ರ 14 ಮಾರ್ಚ್ ನಿಂದ 20 ಜೂನ್ ವರೆಗೆ ಬಿ.ಡಿ.ಜತ್ತಿಯವರ ನಂತರ ಅಲ್ಪಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಇವರು ರಾಜಕೀಯದಲ್ಲಿ ಆಧುನಿಕ ಭರತ ಎಂದೇ ಕರೆಸಿಕೊಂಡಿದ್ದು ರಾಜ್ಯ ವಿಧಾನಸಭೆಯ ಸದಸ್ಯರಾಗಿರುವಾಗಲೇ, 1969 ಡಿಸೆಂಬರ್ 25ರಂದು ನಿಧನ ಹೊಂದಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...