NEWSನಮ್ಮಜಿಲ್ಲೆನಮ್ಮರಾಜ್ಯ

ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ

ಬಯೋಮೆಟ್ರಿಕ್ ಜತೆಗೆ ಗೃಹಲಕ್ಷ್ಮಿ ಸೊಸೈಟಿಗೆ ಸದಸ್ಯತ್ವವನ್ನ ಕೂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಡಿಕೊಳ್ಳುತ್ತಿದೆ. ಈ ಸದಸ್ಯತ್ವ ಬಯಸುವ ಫಲಾನುಭವಿಗಳು 1,250 ರೂ. ಪಾವತಿ ಮಾಡಬೇಕು. ಒಂದು ವೇಳೆ ಗೃಹಲಕ್ಷ್ಮಿ ಸೊಸೈಟಿ ಸದಸ್ಯತ್ವ ಬೇಡ ಎಂದಾದರೆ ಬಯೋಮೆಟ್ರಿಕ್ ಅಷ್ಟೇ ಮಾಡಿಸಿಕೊಳ್ಳಬಹುದು.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೃತ ಮಹಿಳೆಯರ ಹೆಸರಿನಲ್ಲಿ ಗೃಹಲಕ್ಷ್ಮಿ ಹಣ ಪಡೆಯುವ ಮೂಲಕ ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಸಿದ್ದತೆ ನಡೆಸಿದ್ದು, ಬಯೋಮೆಟ್ರಿಕ್ ಜಾರಿಗೆ ತರಲು ಸರ್ಕಾರ ನಿರ್ಧರಿಸಿ ಮುಂದಿನ ತಿಂಗಳಿನಿಂದ ಬಯೋಮೆಟ್ರಿಕ್ ಜಾರಿಗೆ ಬರಲಿದೆ.

ಇನ್ನು ಈ ಬಯೋಮೆಟ್ರಿಕ್‌ಗೆ ಗೃಹಲಕ್ಷ್ಮಿ ಫಲಾನುಭವಿಗಳು ಶುಲ್ಕ ಪಾವತಿ ಮಾಡಬೇಕಿದೆ. ಬಯೋಮೆಟ್ರಿಕ್ ಆಗದೇ ಇದ್ದರೆ 2 ಸಾವಿರ ರೂ. ಅಮೌಂಟ್ ಬರುವುದಿಲ್ಲ. ಹೀಗಾಗಿ ಬಯೋಮೆಟ್ರಿಕ್ ಮಾಡಿಸಿಕೊಳ್ಳಲು ಪ್ರತಿ ಫಲಾನುಭವಿಯೂ 5 ರೂ. ಶುಲ್ಕ ಪಾವತಿಮಾಡಬೇಕಿದೆ.

ಬಯೋಮೆಟ್ರಿಕ್ ಜತೆಗೆ ಗೃಹಲಕ್ಷ್ಮಿ ಸೊಸೈಟಿಗೆ ಸದಸ್ಯತ್ವವನ್ನ ಕೂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಡಿಕೊಳ್ಳುತ್ತಿದೆ. ಈ ಸದಸ್ಯತ್ವ ಬಯಸುವ ಫಲಾನುಭವಿಗಳು 1,250 ರೂ. ಪಾವತಿ ಮಾಡಬೇಕು. ಒಂದು ವೇಳೆ ಗೃಹಲಕ್ಷ್ಮಿ ಸೊಸೈಟಿ ಸದಸ್ಯತ್ವ ಬೇಡ ಎಂದಾದರೆ ಬಯೋಮೆಟ್ರಿಕ್ ಅಷ್ಟೇ ಮಾಡಿಸಿಕೊಳ್ಳಬಹುದು. ಇದಕ್ಕೂ ಅವಕಾಶವಿದೆ.

ಇನ್ನು ಬರುವ ತಿಂಗಳಿನಿಂದ ಜಾರಿಗೆ ಬರಲಿದ್ದು, ಈ ತಿಂಗಳೇ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹೀಗಾಗಿ ಈಗಾಗಲೇ ಗೃಹಲಕ್ಷ್ಮಿ ಬಯೋಮೆಟ್ರಿಕ್‌ಗಾಗಿ ಆಪ್ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಬಯೋಮೆಟ್ರಿಕ್ ಮಾಡಿಸೋದು ಎಲ್ಲಿ ಹೇಗೆ?: ಗೃಹಲಕ್ಷ್ಮಿ ದುರಪಯೋಗ ತಡೆಗೆ ಬಯೋಮೆಟ್ರಿಕ್ ಜಾರಿ ಮಾಡುತ್ತಿದ್ದು, ಇದನ್ನು ಬೆಂಗಳೂರಿನಲ್ಲಿ ವಾಸವಾಗಿರುವವರು ಬೆಂಗಳೂರು ಒನ್‌ನಲ್ಲಿ ಮಾಡಿಸಬಹುದು. ಇನ್ನು ಗ್ತಾಮಾಂತ ಪ್ರದೇಶದಲ್ಲಿ ವಾಸವಾಗಿರುವ ಗೃಹಿಣಿಯರು ಗ್ರಾಮ ಒನ್‌ಗಳಲ್ಲಿ ಬಯೋಮೆಟ್ರಿಕ್‌ ಮಾಡಿಕೊಳ್ಳುವುದಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ.

ಇನ್ನು ಇದು ಒನ್ ಟೈಂ ಬಯೋಮೆಟ್ರಿಕ್ ಆಗಿದ್ದು, ಇದನ್ನು ಒಮ್ಮೆ ಬಯೋಮೆಟ್ರಿಕ್ ನೀಡಿದರೆ ವ್ಯಕ್ತಿಯ ಖಚಿತತೆಯಿಂದ 2 ಸಾವಿರ ರೂಪಾಯಿಯನ್ನು ಗೃಹಲಕ್ಷ್ಮಿಯರ ಬ್ಯಾಂಕ್‌ ಖಾತೆಗೆ ನೇರವಾಗಿ ಪಾವತಿ ಮಾಡಲಾಗುವುದು.

ಗ್ರಾಮ ಒನ್, ಬೆಂಗಳೂರು ಒನ್, ಸೇವಾಸಿಂಧು ಕೇಂದ್ರಗಳಿಗೆ ತೆರಳಿ ಬಯೋಮೆಟ್ರಿಕ್ ನೀಡಬೇಕು. ಗೃಹಲಕ್ಷ್ಮಿ ಬಯೋಮೆಟ್ರಿಕ್‌ಗೆ 5 ರೂ. ಶುಲ್ಕವನ್ನು ಮಹಿಳಾ ಇಲಾಖೆ ನಿಗದಿ ಮಾಡಲಿದ್ದು ಅದನ್ನು ಫಲಾನುಭವಿಗಳೇ ಪಾವತಿ ಮಾಡಬೇಕಿದೆ.

ಇನ್ನು ಈ ಬಯೋಮೆಟ್ರಿಕ್‌ಗೆ ಫಲಾನುಭವಿಗಳು ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು ಎಂದು ಸದ್ಯದ ಮಾಹಿತಿ ಲಭ್ಯವಾಗಿದೆ.

Deva
the authorDeva

Leave a Reply

error: Content is protected !!
Latest news
ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ ಇದುವರೆಗೂ ನಡೆಸಿರುವ ಹೋರಾಟ ವ್ಯರ್ಥವಾಗಲು ಬಿಡುವುದಿಲ್ಲ: ಕೇಂದ್ರ ಸರ್ಕಾರದ ವಿರುದ್ಧ EPS ನಿವೃತ್ತರು ಆಕ್ರೋಶ ರಾತ್ರಿ ಘಟಕದ ಹೊರಗೆ ರಸ್ತೆ ಬದಿ ನಿಲ್ಲಿಸಿದ್ದ KSRTC ಬಸ್‌ ಕದ್ದು ಅಪಘಾತ ಎಸಗಿ 1.5 ಕಿಮೀ ದೂರದಲ್ಲಿ ಬಿಟ್ಟು ಪರಾರಿಯಾ... KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ- ಸಣ್ಣಪುಟ್ಟ ಗಾಯದೊಂದಿಗೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು KKRTC: ಜೂ.14ರೊಳಗೆ ಡ್ಯೂಟಿ ರೋಟಾ ಬ್ಲಾಕ್ ಪ್ರದರ್ಶಿಸಿ, ಜೂ.18ರೊಳಗೆ ಜೇಷ್ಠತಾ ಪಟ್ಟಿ ಅಂತಿಮಗೊಳಿಸಿ-ಡಿಸಿಗಳಿಗೆ ಸೂಚನ...