NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿಸುವ ಪ್ರಸ್ತಾಪ ಇಲ್ಲ: ಸಚಿವ ಲಕ್ಷ್ಮಣ ಸವದಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಹಣಕಾಸಿನ ಸಮಸ್ಯೆ ಎದುರಿಸುತ್ತಿರುವುದರಿಂದ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಬಿ. ಹರ್ಷವರ್ಧನ್ ಕಳೆದ 3-4 ತಿಂಗಳಿಂದ ಸಾರಿಗೆ ನೌಕರರಿಗೆ ವೇತನ ನೀಡಿಲ್ಲ ಎಂಬ ಆರೋಪವಿದೆ, ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಸಾರಿಗೆ ಇಲಾಖೆಯ 1.30 ಲಕ್ಷ ನೌಕರರ ನವೆಂಬರ್ ವರೆಗಿನ ವೇತನವನ್ನು ನೀಡಲಾಗಿದೆ ಎಂದು ಉತ್ತರಿಸಿದರು.

ಸಾರಿಗೆ ನೌಕರರ ನವೆಂಬರ್ ವರೆಗಿನ ಎಲ್ಲಾ ವೇತನ ಬಿಡುಗಡೆ ಮಾಡಲಾಗಿದೆ. ಸಾರಿಗೆ ಇಲಾಖೆಯ ನೌಕರರನ್ನು ಸರ್ಕಾರಿ ನೌಕರರನ್ನಾಗಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಈಗ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕೊರೊನಾ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ 4 ನಿಗಮಗಳು ಸಂಕಷ್ಟದಲ್ಲಿದ್ದಾಗ ನೌಕರರ ವೇತನ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆವು, ಅದರಂತೆ ಮುಖ್ಯಮಂತ್ರಿ ಹಣಕಾಸು ಸೌಲಭ್ಯ ಒದಗಿಸಿಕೊಟ್ಟಿದ್ದಾರೆ. ಅದರಂತೆ ಹಣಕಾಸು ಇಲಾಖೆ 7 ತಿಂಗಳ ಸಂಬಳವನ್ನು ನೀಡಿದೆ. 2 ತಿಂಗಳ ವೇತನ ಶೇಕಡಾ 100ರಷ್ಟು, 4 ತಿಂಗಳ ವೇತನ 25-75ರ ಅನುಪಾತದಲ್ಲಿ, ಮತ್ತೆ ಎರಡು ತಿಂಗಳ ವೇತನ 50-50 ಅನುಪಾತದಲ್ಲಿ ಸರ್ಕಾರ ಕೊಟ್ಟಿದೆ. ನವೆಂಬರ್‌ವರೆಗೆ ಎಲ್ಲರ ವೇತನ ನೀಡಲಾಗಿದೆ, ಡಿಸೆಂಬರ್ ತಿಂಗಳ ವೇತನ 8-10 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು. ಯಾರಿಗೂ ವೇತನ ಬಾಕಿ ಇಲ್ಲ” ಎಂದು ಸ್ಪಷ್ಟಪಡಿಸಿದರು.

1.25 ಲಕ್ಷ ನೌಕರರನ್ನು ಸರ್ಕಾರಿ ನೌಕರಿ ಮಾಡುವಂತೆ ಒತ್ತಾಯಿಸುತ್ತಿದ್ದಾರೆ, ನಾಳೆ ಅವರು ಧರಣಿ ನಡೆಸುತ್ತಿದ್ದಾರೆ, ಅವರನ್ನು ಕರೆದು ಮಾತುಕತೆ ಮಾಡಿ ಎಂದು ಸದಸ್ಯ ಜಿ.ಟಿ.ದೇವೇಗೌಡ ಸಲಹೆ ನೀಡಿದರು.

ಅದಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮಣ ಸವದಿ, “ಈ ಹಿಂದೆ ಸ್ವಾಮೀಜಿಯೊಬ್ಬರ ನೇತೃತ್ವದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದಾಗ, ಸ್ವತಃ ತಾವು ಅಲ್ಲಿಗೆ ಭೇಟಿ ನೀಡಿ ಮನವಿ ಸ್ವೀಕರಿಸಿದ್ದ, ಕೋವಿಡ್ ಹಿನ್ನೆಲೆಯಲ್ಲಿ ಹಣಕಾಸು ಸಮಸ್ಯೆ ಇರುವುದರಿಂದ ಈಗ ಈ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ನಿರ್ಣಯ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಮಾಡಿದರೆ, ಉಳಿದ ನಿಗಮಗಳಲ್ಲಿ ಅನೇಕ ಮಂದಿ ಇದೇ ಬೇಡಿಕೆ ಇಡಬಹುದು. ಆದ್ದರಿಂದ ಸದ್ಯಕ್ಕೆ ಸರ್ಕಾರದ ಮುಂದೆ ಅವರನ್ನು ಸರ್ಕಾರಿ ನೌಕರರಾಗಿ ಮಾಡುವ ಪ್ರಸ್ತಾಪ ಇಲ್ಲ ಎಂದರು.

ಸಾರಿಗೆ ನೌಕರರ ನಡಿಗೆ- ಸರ್ಕಾರಿ ನೌಕರರಾಗುವ ಕಡೆಗೆ
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಗುರುವಾರ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ಹೀಗಾಗಿ ಗುರುವಾರ ರಾಜ್ಯದಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿ ವಿವಿಧ ವಿಭಾಗಗಳ ಸಾರಿಗೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಈ ಸಾರಿಗೆ ನೌಕರರ ಜಾಥಾ ನಾಳೆ ಬೆಳಗ್ಗೆ 10 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭವಾಗಲಿದೆ. ಅಲ್ಲಿಂದ ವಿಧಾನಸೌಧಧವರೆಗೆ ಸಾರಿಗೆ ನೌಕರರು ಜಾಥಾ ಹೊರಡಲಿದ್ದಾರೆ. ಸಾರಿಗೆ ನೌಕರರ ನಡಿಗೆ- ಸರ್ಕಾರಿ ನೌಕರರಾಗುವ ಕಡೆಗೆ ಎಂಬ ಘೋಷಣೆಯೊಂದಿಗೆ ಹೋರಾಟ ನಡೆಸಲಿದ್ದಾರೆ. ಈ ಕಾಲ್ನಡಿಗೆ ಜಾಥಾದಲ್ಲಿ ಸಾರಿಗೆ ನೌಕರರು ಅವರ ಕುಟುಂಬದವರು ಭಾಗಿಯಾಗಲಿದ್ದಾರೆ ಎಂದು ನೌಕರರ ಸಂಘದ ಪದಾಧಿಕಾರಿ ಸುಧಾಕರ್‌ ರೆಡ್ಡಿ ತಿಳಿಸಿದ್ದಾರೆ.

ಕೆಎಸ್ ಆರ್ ಟಿಸಿ, ಬಿಎಂಟಿಸಿ ಹಾಗೂ ಎನ್‌ಇಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಸೇರಿ ರಾಜ್ಯದಲ್ಲಿ 1.35 ಲಕ್ಷ ಸಾರಿಗೆ ನೌಕರರು ಇದ್ದಾರೆ. ಈ ಜಾಥಾದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ನಂಜಾವಧೂತ ಸ್ವಾಮೀಜಿ ಹಾಗೂ ಚಂದ್ರಶೇಖರ ಸ್ವಾಮೀಜಿಗಳು ಸೇರಿ ವಿವಿಧ ಕನ್ನಡಪರ ಸಂಘಟನೆಗಳು ಭಾಗಿಯಾಗಲಿವೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...