CRIMENEWS

ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ವಿದ್ಯಾರ್ಥಿ ಶಾಲಾ ಕಟ್ಟಡದಿಂದ  ಹಾರಿ ಬಿದ್ದ ವಿಷಯವನ್ನು ಪಾಲಕರಿಗೆ ಮುಂಚಿತವಾಗಿ ತಿಳಿಸದೆ ಶಾಲಾ ಸಿಬ್ಬಂದಿ, ಮೃತದೇಹವನ್ನು ನೇರವಾಗಿ ಬ್ರಿಮ್ಸ್ (BRIMS) ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಬೀದರ್: ಖಾಸಗಿ ಶಾಲೆಯೊಂದರ ಮುಖ್ಯ ಶಿಕ್ಷಕರ ಮಾನಸಿಕ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಪ್ರತಾಪ್ ನಗರದಲ್ಲಿ ನಡೆದಿದೆ.

ಬೀದರ್‌ ನಗರದ ನಿವಾಸಿ 16 ವರ್ಷದ ಸಮೀರ್ ಎಂಬ ವಿದ್ಯಾರ್ಥಿಯೇ ಆತ್ಮಹತ್ಯೆ ಮಾಡಿಕೊಂಡಿರುವವರು. ಬುಧವಾರ (ಜೂನ್ 10) ಮುಂಜಾನೆ ಎಂದಿನಂತೆ ಶಾಲೆಗೆ ಹೋದ ಸಮೀರ್, ಏಕಾಕೇಕಿ ಈ ನಿರ್ಧಾರ ಕೈಗೊಂಡಿದ್ದು, ಶಿಕ್ಷಕರ ಕಿರುಕುಳದಿಂದ ನೊಂದು ಎಂದು ಪಾಲಕರು ಆರೋಪಿಸಿದ್ದಾರೆ.

ಪಾಲಕರಿಗೆ ವಿಷಯ ತಿಳಿಸದೆ ಶವಗಾರಕ್ಕೆ ಬಾಡಿ ಸಾಗಿಸಿದ ಆಡಳಿತ ಮಂಡಳಿಯ ದುರುಳರು: ತೀವ್ರ ಅನುಮಾನ ಹುಟ್ಟುಹಾಕುವ ಘಟನೆ ನಡೆದ ಬೆನ್ನಲ್ಲೇ ಶಾಲಾ ಆಡಳಿತ ಮಂಡಳಿಯ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಿದ್ಯಾರ್ಥಿ ಶಾಲಾ ಕಟ್ಟಡದಿಂದ  ಹಾರಿ ಬಿದ್ದ ವಿಷಯವನ್ನು ಪಾಲಕರಿಗೆ ಮುಂಚಿತವಾಗಿ ತಿಳಿಸದೆ ಶಾಲಾ ಸಿಬ್ಬಂದಿ, ಮೃತದೇಹವನ್ನು ನೇರವಾಗಿ ಬ್ರಿಮ್ಸ್ (BRIMS) ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.

ಹೆತ್ತವರಿಗೆ ಮಾಹಿತಿ ನೀಡದೆ, ರಹಸ್ಯವಾಗಿ ಶವವನ್ನು ಆಸ್ಪತ್ರೆಗೆ ಸಾಗಿಸಿರುವುದು ಸಾರ್ವಜನಿಕ ವಲಯದಲ್ಲಿ ಹಾಗೂ ಕುಟುಂಬಸ್ಥರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇಂಥ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವುದು ಹೇಗೆ ಇಲ್ಲಿನ ವಾತಾವರಣ ನೋಡಿದರೆ ಶಾಲೆಯಲ್ಲಿ ಶಿಕ್ಷಕರ ಬದಲಿಗೆ ರಾಕ್ಷಸರು ಇದ್ದಾರೆ ಎಂದು ಕಿಡಿದ್ದಾರೆ.

ಕುಟುಂಬಸ್ಥರ ಆಕ್ರಂದನ: ವಿಷಯ ತಿಳಿಯುತ್ತಿದ್ದಂತೆ ಬ್ರಿಮ್ಸ್ ಆಸ್ಪತ್ರೆಯ ಶವಗಾರದ ಮುಂದೆ ಜಮಾಯಿಸಿದ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ನಮ್ಮ ಮಗನ ಸಾವಿಗೆ ಶಾಲೆಯ ಮುಖ್ಯ ಶಿಕ್ಷಕರೇ ನೇರ ಕಾರಣ ಎಂದು ಕುಟುಂಬಸ್ಥರು ಕಣ್ಣೀರಿಡುತ್ತಾ ಆರೋಪಿಸಿದ್ದಾರೆ.

ನಮ್ಮ ಮಗನಿಗೆ ನಿತ್ಯ ಕಿರುಕುಳ ನೀಡುತ್ತಿದ್ದರು, ಶಾಲೆ ಕೊಠಡಿಗಳ ಕಸ ಗುಡಿಸುವಂತೆ ಹೇಳುತ್ತಿದ್ದರು ಆ ಕೆಲಸವನ್ನು ನಮ್ಮ ಮಗ ಮಾಡುತ್ತಿದ್ದ ಅಲ್ಲದೆ ನಿಂದಿಸುತ್ತಿದ್ದರು, ಈ ಶಿಕ್ಷಕರಿಂದಲೇ ನಮ್ಮ ಮಗ ಈ ರೀತಿ ಮಾಡಿಕೊಂಡಿದ್ದಾನೆ ಅವರಿಗೆ ಶಿಕ್ಷೆ ಆಗಲೇಬೇಕು ಎಂದು ಪಾಲಕರು ಒತ್ತಯಿಸಿದ್ದಾರೆ.

ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೃತನ ಪೋಷಕರು ನೀಡಿದ ದೂರಿನನ್ವಯ ಬೀದರ್‌ನ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯ ಶಿಕ್ಷಕರ ವಿರುದ್ಧ ತನಿಖೆ ಆರಂಭವಾಗಿದ್ದು, ಸತ್ಯಾಸತ್ಯತೆ ಹೊರಬರಬೇಕಿದೆ.

Deva
the authorDeva

Leave a Reply

error: Content is protected !!
Latest news
ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ