ಗೃಹಲಕ್ಷ್ಮಿಯೋಜನೆಗೆ ಮತ್ತೆ ಹೊಸದಾಗಿ ಅರ್ಜಿ ಸ್ವೀಕರಿಸುವ ಚಿಂತನೆಯಲ್ಲಿ ಸರ್ಕಾರ!
ಸದ್ಯ ಈಗ 2000 ರೂ. ಪಡೆಯಲು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಬೇಕಾ ಎನ್ನುವ ಆತಂಕ ಗೃಹಲಕ್ಷ್ಮಿಯರಲ್ಲಿ ಮನೆ ಮಾಡಿದೆ. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯಾವುದೇ ಕಾರಣಕ್ಕೂ ಯೋಜನೆಯ ಅರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಕೈ ಬಿಡೋದಿಲ್ಲ ಅಂತ ಹೇಳಿದ್ದಾರೆ. ಆದರೆ, ತಾಂತ್ರಿಕ ದೋಷದಿಂದ ಹೆಸರು ಕೈಬಿಟ್ಟರೆ ಅರ್ಹರು ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಹೊಸದಾಗಿ ಅರ್ಜಿ ಸ್ವೀಕರಿಸಲು ಸರ್ಕಾರದ ಚಿಂತನೆ ನಡೆಸಿದೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿದ್ದು, ಇದಕ್ಕೆ ಮುಖ್ಯ ಕಾರಣ ಸತ್ತವರ ಹೆಸರಿನಲ್ಲಿ 2000 ರೂ. ಜಮೆ ಆಗುತ್ತಿರುವುದಾಗಿದೆ.
ಹೀಗಾಗಿ ಫಲಾನುಭವಿಗಳು ಮತ್ತೆ ಅರ್ಜಿಸಲ್ಲಿಸಬೇಕಾದ ಆನಿವಾರ್ಯತೆ ಬರಬಹುದು ಎಂದು ಬಲ್ಲಮೂಗಳು ತಿಳಿಸಿವೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಬಡಮಹಿಳೆಯರ ಪಾಲಿಗೆ ವರದಾನವಾಗಿದೆ. ಆದರೆ, ಇದೀಗ ಸರ್ಕಾರ ಈ ಯೋಜನೆ ಪರಿಷ್ಕರಣೆ ಮಾಲಾಗುತ್ತಿದ್ದು, ಅರ್ಹ ಫಲಾನುಭವಿಗಳಲ್ಲೂ ಕೂಡ ಯೋಜನೆಯಿಂದ ಹೊರಬರುವ ಆತಂಕ ಹೆಚ್ಚಿದೆ.
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು ಈ ಆತಂಕಕ್ಕೆ ಕಾರಣವಾಗಿದೆ. ಇನ್ನು ಫಲಾನುಭವಿಗಳ ಮಾಹಿತಿ ಸಂಗ್ರಹಣೆ ವೇಳೆ ಭಾರಿ ಪ್ರಮಾಣದಲ್ಲಿ ಅಕ್ರಮ ನಡೆದಿರೋದು ಬೆಳಕಿಗೆ ಬಂದಿದೆ. ಸತ್ತ ಅನೇಕರ ಅಕೌಂಟ್ಗೆ 5 ತಿಂಗಳಿಂದ ಗೃಹಲಕ್ಷ್ಮಿ ಹಣ ಪಾವತಿಯಾಗಿದೆ. ಜತೆಗೆ ಯೋಜನೆಯ ಫಲಾನುಭವಿಗಳಲ್ಲಿ ಅನರ್ಹರ ಸಂಖ್ಯೆ ಕೂಡ ಹೆಚ್ಚಿದೆ. ಅಂದರೆ ಆದಾಯ ತೆರಿಗೆ ವ್ಯಾಪ್ತಿಗೆ ಬರುವವವರು ಇದರ ಫಲಾನುಭವಿಗಳಾಗಿದ್ದಾರೆ. ಹೀಗಾಗಿ ಮತ್ತೆ ಗೃಹಲಕ್ಷ್ಮಿ ಹಣಕ್ಕಾಗಿ ಹೊಸದಾಗಿ ಅರ್ಜಿ ಸ್ವೀಕರಿಸಲು ಸರ್ಕಾರದ ಚಿಂತನೆ ನಡೆಸಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಯಾರಿಗೂ ಸಿಗುವುದಲ್ಲವಾ 2000 ರೂ?: ಸದ್ಯ ಈಗ 2000 ರೂ. ಪಡೆಯಲು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಬೇಕಾ ಎನ್ನುವ ಆತಂಕ ಗೃಹಲಕ್ಷ್ಮಿಯರಲ್ಲಿ ಮನೆ ಮಾಡಿದೆ. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯಾವುದೇ ಕಾರಣಕ್ಕೂ ಯೋಜನೆಯ ಅರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಕೈ ಬಿಡೋದಿಲ್ಲ ಅಂತ ಹೇಳಿದ್ದಾರೆ. ಆದರೆ, ತಾಂತ್ರಿಕ ದೋಷದಿಂದ ಹೆಸರು ಕೈಬಿಟ್ಟರೆ ಅರ್ಹರು ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಸರ್ಕಾರ “ಆಪರೇಷನ್ ಗೃಹಲಕ್ಷ್ಮಿ” ಹೆಸರಿನಲ್ಲಿ ನಿಜವಾದ ಫಲಾನುಭವಿಗಳನ್ನು ಪತ್ತೆಹಚ್ಚುವ ಕೆಲಸ ಮಾಡಲಾಗುತ್ತಿದೆ. ಇನ್ನು ಬಡವರಿರುವ ಪ್ರತಿ ಕುಟುಂಬದ ಯಜಮಾನಿಗೆ 2000 ರೂ. ಆರ್ಥಿಕ ನೆರವು ನೀಡುವ ಯೋಜನೆಯೇ ಈ ಗೃಹಲಕ್ಷ್ಮಿ. ಆದರೆ ಶ್ರೀಮಂತರು (ಅನರ್ಹರು) ಕೂಡ ಈ ಯೋಜನೆಯ ಲಾಭ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಪರಿಷ್ಕರಣೆಗೆ ಮುಂದಾಗಿದೆ.
4.30 ಲಕ್ಷ ಫಲಾನುಭವಿಗಳ ಹೆಸರು ಡಿಲೀಟ್!: ಗೃಹಲಕ್ಷ್ಮಿ ಯೋಜನೆಯಡಿ ಈವರೆಗೂ 1.20 ಕೋಟಿಗೂ ಅಧಿಕ ಫಲಾನುಭವಿಗಳಿದ್ದು, ಮೃತಪಟ್ಟವರನ್ನು ಕೈಬಿಡಲಾಗುತ್ತಿದೆ. ಅದರಲ್ಲಿ ಸದ್ಯ 4.30 ಲಕ್ಷ ಫಲಾನುಭವಿಗಳ ಹೆಸರನ್ನು ಡಿಲೀಟ್ ಮಾಡಲಾಗಿದೆ. ಈ ಮೂಲಕ ನೂರಾರು ಕೋಟಿ ರೂ. ಸರ್ಕಾರದ ಬೊಕ್ಕಸದಲ್ಲೇ ಉಳಿತಾಯ ಆಗಿದೆ.
ಮರುಪರಿಶೀಲನೆಗೆ ಅರ್ಜಿ: ಇದೇ ವೇಳೆ, ಅರ್ಹರಾಗಿದ್ದರೂ ತಾಂತ್ರಿಕ ಕಾರಣಗಳಿಂದ ಹೆಸರು ಕೈಬಿಟ್ಟಿಹೋಗಿದ್ದರೆ ಅವರು ಸಂಬಂಧಿತ ಇಲಾಖೆಯನ್ನು ಸಂಪರ್ಕಿಸಿ ದಾಖಲೆಗಳೊಂದಿಗೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ನೀವೂ ಕೂಡ ಫಲಾನುಭವಿಗಳಾಗಿದ್ದರೆ ನಿಮ್ಮ ಹೆಸರು ಡಿಲೀಟ್ ಆಗಿದ್ಯಾ ಅಂತ ಬೆಂಗಳೂರು ಒನ್, ಗ್ರಾಮಒನ್, ಸೇವಾ ಕೇಂದ್ರ, ಬಾಪೂಜಿ ಸೇವಾ ಕೇಂದ್ರ ಗಳಲ್ಲಿ ಪರೀಕ್ಷಿಸಬಹುದಾಗಿದೆ.
ಬಯೋಮೆಟ್ರಿಕ್ ಕಡ್ಡಾಯ: ಇನ್ನು ಈ ಅಕ್ರಮವಾಗಿ ಹಣ ಸಂದಾಯವಾಗುತ್ತಿರುವುದನ್ನು ತಡೆಗಟ್ಟಲು ಇನ್ಮುಂದೆ ‘ಒನ್-ಟೈಮ್ ಬಯೋಮೆಟ್ರಿಕ್’ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ, ಮೊಬೈಲ್ ಸಂಖ್ಯೆ ಹಾಗೂ ಬಯೋಮೆಟ್ರಿಕ್ ಮಾಹಿತಿಯನ್ನು ಒಂದು ಬಾರಿ ನವೀಕರಿಸಬೇಕು. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ ಮುಂದಿನ ಕಂತುಗಳ ಪಾವತಿಯಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ದಿನಗಳಲ್ಲಿ ‘ಒನ್-ಟೈಮ್ ಬಯೋಮೆಟ್ರಿಕ್’ ವ್ಯವಸ್ಥೆ ಅಳವಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಿಳಿಸಿದೆ.
Related









