NEWSನಮ್ಮರಾಜ್ಯರಾಜಕೀಯವಿಜ್ಞಾನ

ರಸ್ತೆಗಿಳಿದ ಬಸ್‌ಗಳ ಮೇಲೆ ಕಲ್ಲು ತೂರಾಟ-ಹಾನಿ, ಚಾಲಕನ ತಲೆಗೂ ಪೆಟ್ಟು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆಗೆ ಇಳಿದಿದ್ದು, ಇದರ ಮಧ್ಯೆ ಬಸ್‌ಗಳನ್ನು ಬೆರಳೆಣಿಕೆಯ ಬಸ್‌ಗಳು ರಸ್ತೆಗೆ ಇಳಿದ್ದರಿಂದ ಬಸ್‌ ಕಿಟಕಿಯ ಗಾಜುಗಳು ಪುಡಿಪುಡಿಗಿರುವ ಮತ್ತು ಚಾಲಕರು ಗಾಯಗೊಂಡಿರುವ ಘಟನೆಗಳು ನಡೆದಿವೆ.

ಆನೇಕಲ್‌ ಬಳಿ ಬಿಎಸ್‌ಟಿಸಿ ಬಸ್‌ ಮೇಲೆ ಕಲ್ಲು ತೂರಿದ್ದು ಚಾಲಕನ ತಲೆಗೆ ಪೆಟ್ಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ರಾಮನಗರದಲ್ಲಿ ಸಂಚರಿಸುತ್ತಿದ್ದ ಬಸ್‌ ಮೇಲೆ ಕಲ್ಲು ತೂರಿ ಪರಾರಿಯಾಗಿದ್ದಾರೆ. ಅದೇರೀತಿ ಕೋಲಾರದ ಬಂಗಾರಪೇಟೆಯಲ್ಲೂ ಬಸ್‌ ಮೇಲೆ ಕಲ್ಲು ತೂರಿ ಮುಂದಿನ ಗ್ಲಾಸ್‌ ಪುಡಿಪುಡಿ ಮಾಡಲಾಗಿದೆ.

ಕಲಬುರಗಿಯ ಕೋರ್ಟ್‌ ಬಳಿ ಕಲ್ಲು ತೂರಾಟ ಮಾಡಿದ್ದು ಬಸ್‌ ಜಖಂಗೊಂಡಿದೆ. ಇದನ್ನು ಪ್ರತಿಭಟನಾ ನಿರತರು ಮಾಡುತ್ತಿದ್ದಾರೋ ಇಲ್ಲ ಕಿಡಿಗೇಡಿಗಳು ಮಾಡುತ್ತಿದ್ದಾರೋ ಎಂಬುವುದು ಮಾತ್ರ ತಿಳಿದು ಬಂದಿಲ್ಲ. ಒಟ್ಟಾರೆ ಸಾರಿಗೆ ನೌಕರರ ಮುಷ್ಕರದಿಂದ ಕೆಲ ಅಹಿತಕರ ಘಟನೆಗಳು ನಡೆಯುತ್ತಿವೆ. ಇನ್ನೊಂದೆಡೆ ಕೆಲ ಆಟೋ ಚಾಲಕರು ಪ್ರಯಾಣಿಕರ ಜೇಬಿಗೆ ನೇರವಾಗಿಯೇ ಕತ್ತರಿಯಾಕುತ್ತಿದ್ದು, ದುಪ್ಪಟ್ಟು ವಸೂಲಿಗೆ ಇಳಿದಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ.

1 Comment

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ