NEWSನಮ್ಮಜಿಲ್ಲೆರಾಜಕೀಯ

ಬಿಬಿಎಂಪಿ ಅಧಿಕಾರ ಕಸಿದು ನೇರ ಲೂಟಿಗೆ ಮುಂದಾಗುತ್ತಿದೆ ಸರ್ಕಾರ : ಮೋಹನ್ ದಾಸರಿ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರ ತಂದಿರುವ ಬಿಬಿಎಂಪಿ ನೂತನ ವಿಧೇಯಕ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರವನ್ನು ಅಡಗಿಸುವ ಹಾಗೂ ನಿಧಾನಕ್ಕೆ ಕಸಿಯುವ ಹುನ್ನಾರವಾಗಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಕಿಡಿಕಾರಿದ್ದಾರೆ.

ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅನೇಕ ದೇಶಗಳು ತಮ್ಮ ಒಟ್ಟು ಬಜೆಟ್ಟಿನ ಶೇ. 27 ರಷ್ಟು ಹಣವನ್ನು ಮೀಸಲಿಟ್ಟು ಸ್ಥಳೀಯ ಸಂಸ್ಥೆಗಳ ಮೂಲಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತವೆ. ಆದರೆ ಈ ದೂರ್ತ ಬಿಜೆಪಿ ಸರ್ಕಾರ ಸ್ಥಳೀಯ ಸಂಸ್ಥೆಗಳ ಅಧಿಕಾರವನ್ನೇ ಕಿತ್ತುಕೊಂಡು ಇಲ್ಲೂ ವ್ಯಾಪಕವಾದ ಲೂಟಿಗೆ ದಾರಿ ಮಾಡಿಕೊಟ್ಟಿದೆ ಎಂದು ದೂರಿದರು.

ಪಾಲಿಕೆ ಸದಸ್ಯರ ಆಸ್ತಿ ವಿವರವನ್ನು ಮೇಯರ್‌ಗೆ ಸಲ್ಲಿಸಬೇಕು ಎಂದು ಹೇಳಿ ಸದಸ್ಯರನ್ನು ರಕ್ಷಿಸುವ ಹುನ್ನಾರ ಅಡಗಿದೆ. ಲೋಕಾಯುಕ್ತ, ಸರ್ಕಾರದ ಮುಖ್ಯ ಪ್ರಧಾನ ಕಾರ್ಯದರ್ಶಿಗಳಿಗೆ ಆಸ್ತಿ ವಿವರವನ್ನು ಪ್ರತಿ ವರ್ಷ ಕಡ್ಡಾಯವಾಗಿ ಸಲ್ಲಿಸದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎನ್ನುವ ಅಂಶವನ್ನು ಸೇರಿಸಬೇಕು. ಕಳೆದ ಬಾರಿ 120 ಕ್ಕೂ ಹೆಚ್ಚು ಸದಸ್ಯರು ಆಸ್ತಿ ವಿವರ ಸಲ್ಲಿಸದೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.

ಶಾಸಕರ, ಸಂಸದರ ಚೇಲಾಗಳು, ಪಕ್ಷದಗಳಲ್ಲಿ ಇರುವ ಅತೃಪ್ತರನ್ನು ತೃಪ್ತಿ ಪಡಿಸಲು 15 ವಲಯಗಳಾಗಿ ವಿಂಗಡಿಸಿ ವ್ಯಾಪಕ ಭ್ರಷ್ಟಾಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವಲಯ ಉಸ್ತುವಾರಿಗಳಿಗೆ ಪ್ರತ್ಯೇಕ ಕಚೇರಿ, ಸಿಬ್ಬಂದಿ ಎಂದು ಹೇಳಿ ಜನರ ದುಡ್ಡನ್ನ ವ್ಯರ್ಥವಾಗಿ ಖರ್ಚು ಮಾಡಲು ಸರ್ಕಾರ ಹೊರಟಿದೆ. ಆದ ಕಾರಣ ಈ ವಲಯಗಳನ್ನು 8 ಕ್ಕೆ ಇಳಿಸಬೇಕು ಎಂದರು.

ಎರಡು ಹುದ್ದೆಗಳಲ್ಲಿ ಇರುವವರು ಯಾವ ಸ್ಥಾನವನ್ನು ಉಳಿಸಿಕೊಳ್ಳಬೇಕು ಎನ್ನುವುದನ್ನು 3 ದಿನಗಳಲ್ಲಿ ತಿಳಿಸಬೇಕು ಎಂದು ಆಯ್ಕೆ ಕೊಟ್ಟಿರುವುದು ನೋಡಿದರೆ ಚುನಾವಣೆ ಎನ್ನುವುದು ಮಕ್ಕಳಾಟವೇ ಮುಖ್ಯಮಂತ್ರಿ ಯಡಿಯೂರಪ್ಪನವರೇ, ಈ ಬಾಲಿಶ ತಿದ್ದುಪಡಿಯನ್ನು ತೆಗೆದು ಹಾಕಿ ಒಬ್ಬ ವ್ಯಕ್ತಿ ಒಂದೇ ಕಡೆ ಮಾತ್ರ ಸ್ಪರ್ಧಿಸಬೇಕು ಎಂದು ಹೇಳಿದರು.

ಬೆಂಗಳೂರು ಉಪಾಧ್ಯಕ್ಷ ಸುರೇಶ್ ರಾಥೋಡ್ ಮಾತನಾಡಿ, ಕಸ ನಿರ್ವಹಣೆ ಹಾಗೂ ಇತರೆ ಪ್ರಾಥಮಿಕ ಜವಾಬ್ದಾರಿಗಳಿಂದ ಬಿಬಿಎಂಪಿಯನ್ನು ಹೊರಗಿಡಲಾಗುತ್ತಿದೆ ಇದನ್ನು ಹಿಂಪಡೆದು, ಕಸ ನಿರ್ವಹಣೆಯಂತಹ ಪ್ರಮುಖ ಜವಾಬ್ದಾರಿಗಳನ್ನು ಪ್ರಮುಖ ಕರ್ತವ್ಯಗಳೆಂದು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...