NEWSನಮ್ಮಜಿಲ್ಲೆ

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ

ಬಡತನ ಹಾಗೂ ಅನಕ್ಷರತೆಯಿಂದ ಬಾಲಕಾರ್ಮಿಕ ಪದ್ದತಿ ಹೆಚ್ಚಾಗುತ್ತಿದೆ. ಪ್ರತಿಯೊಂದು ಮಗುವಿಗೆ ಶಿಕ್ಷಣ ಕಡ್ಡಾಯ ಶಿಕ್ಷಣವನ್ನು ಪೋಷಕರು ಕೊಡಿಸಬೇಕು. ಇದರಿಂದ ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗುವ ಜತೆಗೆ ಬಾಲಕಾರ್ಮಿಕ ಪದ್ದತಿ ಸಂಪೂರ್ಣ ನಿರ್ಮೂಲನೆ ಮಾಡಲು ಸಹಕಾರಿಯಾಗುತ್ತದೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಮಾಜದಿಂದ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಶಿಕ್ಷಣ ಬಲವಾದ ಆಯುಧ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲ್ ಭೀಮಸೇನ ಬಾಗಡಿ ಅಭಿಪ್ರಾಯಪಟ್ಟರು.

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ದೊಡ್ಡಬಳ್ಳಾಪುರ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ, ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಡತನ ಹಾಗೂ ಅನಕ್ಷರತೆಯಿಂದ ಬಾಲಕಾರ್ಮಿಕ ಪದ್ದತಿ ಹೆಚ್ಚಾಗುತ್ತಿದೆ. ಪ್ರತಿಯೊಂದು ಮಗುವಿಗೆ ಶಿಕ್ಷಣ ಕಡ್ಡಾಯ ಶಿಕ್ಷಣವನ್ನು ಪೋಷಕರು ಕೊಡಿಸಬೇಕು. ಇದರಿಂದ ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗುವ ಜತೆಗೆ ಬಾಲಕಾರ್ಮಿಕ ಪದ್ದತಿ ಸಂಪೂರ್ಣ ನಿರ್ಮೂಲನೆ ಮಾಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಕಾರ್ಖಾನೆ ಮಾಲಿಕರು ಅಡ್ಡದಾರಿಯಲ್ಲಿ ಬಾಲಕ ಕಾರ್ಮಿಕರ ಆಧಾರ್ ಕಾರ್ಡ್ ನಲ್ಲಿ ವಯಸ್ಸು ತಿದ್ದುಪಡಿ ಮಾಡಿ, ದುಡಿಮೆಗೆ ಪಡೆಯುತ್ತಿರುವುದು ಕಾನೂನು ಬಾಹಿರ. ಕಾರ್ಖಾನೆಗಳಲ್ಲಿ ಮಹಿಳಾ ಸುರಕ್ಷತೆ, ದೌರ್ಜನ್ಯ ನಡೆಯದಂತೆ ಆಂತರಿಕ ದೂರ ಸಮಿತಿ ಕಡ್ಡಾಯವಾಗಿ ಇರಬೇಕು. ಆಂತರಿಕ ದೂರ ಸಮಿತಿ ಇರದ ಕಾರ್ಖಾನೆ ವಿರುದ್ಧ ದೂರು ದಾಖಲಿಸಲಾಗುವುದು ಎಂದರು.

ವಿದ್ಯಾರ್ಥಿಗಳು ಬಾಲಕಾರ್ಮಿಕ ನಿಷೇಧ ಕಾಯ್ದೆ ಕುರಿತು ಅರಿತು ತಮ್ಮ ಸುತ್ತಮುತ್ತಲಿನ ನಾಗರಿಕರಿಗೆ ಜಾಗೃತಿ ಮೂಡಿಸಿ, ಬಾಲಕಾರ್ಮಿಕರ ರಕ್ಷಣೆಗಾಗಿ ಶಾಲಾ ಶಿಕ್ಷಕರು/ಪೋಲಿಸರಿಗೆ ಇಲ್ಲವೇ ಇಲಾಖೆ ಸಹಾಯವಾಣಿಗೆ ತಿಳಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಮಾತನಾಡಿ, 14 ವರ್ಷದೊಳಗಿನ ಬಾಲಕಾರ್ಮಿಕರನ್ನು ದುಡಿಮೆಗೆ ತೆಗೆದುಕೊಳ್ಳಬಾರದು. ಅಪಾಯಕಾರಿ ಕಾರ್ಖಾನೆಗಳಲ್ಲಿ ದುಡಿಯುವ 18 ವರ್ಷದೊಳಗಿನ ಬಾಲಕಾರ್ಮಿಕರ ರಕ್ಷಣೆಗೆ ಅಧಿಕಾರಿಗಳು ಮುಂದಾಗಿ, ಬಾಲಕಾರ್ಮಿಕ ಕಾಯ್ದೆಯ ಜಾಗೃತಿ ಮೂಡಿಸಬೇಕು. ಯಾವುದೇ ಮಗು ಶಾಲೆಯಿಂದ ಹೊರಗುಳಿಯಬಾರದು. ಪ್ರತಿಯೊಂದು ಮಗುವಿಗೆ ಕಡ್ಡಾಯವಾಗಿ ಶಿಕ್ಷಣ ಸಿಗುವಂತೆ ಪೋಷಕರು ಜವಬ್ದಾರಿ ವಹಿಸಬೇಕು ಎಂದು ಹೇಳಿದರು.

ಮಕ್ಕಳ ದೌರ್ಜನ್ಯ ಹಾಗೂ ಬಾಲಕಾರ್ಮಿಕ ದುಡಿಮೆ ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ 1098 ನೆನಪಿನಲ್ಲಿಟ್ಟುಕೊಂಡು ವಿದ್ಯಾರ್ಥಿಗಳು ಮಾಹಿತಿ ತಿಳಿಸಬೇಕು. ಜಿಲ್ಲೆಯಲ್ಲಿ 120 ವಸತಿಶಾಲೆ ಹಾಗೂ ಹಾಸ್ಟೆಲ್ ಗಳಿದ್ದು, ಬಡ ಪೋಷಕರು ತಮ್ಮ ಮಕ್ಕಳಿಗೆ ಸೇರಿಸಿ, ಶೈಕ್ಷಣಿಕ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಚಟವಾಗಿ ರೂಡಿಸಿಕೊಳ್ಳದೇ ಅವಶ್ಯಕ ವಿದ್ಯಾಭ್ಯಾಸಕ್ಕಾಗಿ ಬಳಸಿಕೊಂಡು ಜ್ಞಾನಾರ್ಜನೆ ವೃದ್ದಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಕಿವಿ ಮಾತು ಹೇಳಿದರು.

ಈ ಸಂದರ್ಭದಲ್ಲಿ ಕಾನೂನು ಪ್ರಾಧಿಕಾರ ಸೇವಾ ಅಧಿಕಾರೇತರ ಸದಸ್ಯರಾದ ವೆಂಕಟೇಶ್ ಅವರು ಮಾತನಾಡಿ, ಮಕ್ಕಳು ದೇಶದ ಸಂಪತ್ತು, ಆ ಸಂಪತ್ತು ಬೆಳೆಸುವ ಕೆಲಸ ಪ್ರತಿಯೊಬ್ಬ ಪೋಷಕರು ಮಾಡಬೇಕು. ಬಾಲಕಾರ್ಮಿಕ ಪದ್ಧತಿ ತಡೆಯುವಲ್ಲಿ ನಮ್ಮೆಲ್ಲರ ಜವಬ್ದಾರಿಯು ಮಹತ್ವದ್ದು, ಪಂಚಾಯತ ಮಟ್ಟದಿಂದಲೇ ಮಕ್ಕಳ ಹಕ್ಕುಗಳು, ಬಾಲಕಾರ್ಮಿಕ ಪದ್ಧತಿ ನಿಷೇಧ ಹಾಗೂ ಬಾಲ್ಯವಿವಾಹ ತಡೆ ಬಗ್ಗೆ ನಿರಂತರ ಅರಿವು ಮೂಡಿಸಬೇಕು ಎಂದರು.

ಇದಕ್ಕೂ ಮುನ್ನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್ ನಿಂದ ಸರ್ಕಾರಿ ಪ್ರೌಢಶಾಲೆ ವರೆಗೂ ವಿದ್ಯಾರ್ಥಿಗಳಿಂದ “ಜಾಗೃತಿ ಜಾಥಾ ಕಾರ್ಯಕ್ರಮ” ನಡೆಯಿತು. ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಕೆ. ಚಿತ್ರಾವತಿ ಅವರು ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.

ಕಾರ್ಯಕ್ರಮದಲ್ಲಿ ವೋವ್ಯೂ ಇಂಡಿಯಾ ಕಂಪನಿಯ ಜಿ.ವಿ. ರಾವ್, ದೊಡ್ಡಬಳ್ಳಾಪುರ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಡಿ. ಕ್ರಾಂತಿ ಕಿರಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮುದ್ದಣ್ಣ ಎಂ., ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಅನಿತಾಲಕ್ಷ್ಮೀ ಎಸ್., ಬೆಂಗಳೂರು ಗ್ರಾಮಾಂತರ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಮುಕುಂದ ಕೆ. ಜಿ., ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಟಿ.ಆರ್. ಮಂಜುನಾಥ್, ತಹಸೀಲ್ದಾರ್ ಮಲ್ಲಪ್ಪ ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ ನ್ಯಾಯಾಲಯದ ಆದೇಶ ಪಾಲಿಸದ KKRTC: ಮೃತರ ಕುಟುಂಬಕ್ಕೆ 36 ಲಕ್ಷ ರೂ. ಪರಿಹಾರ ನೀಡದಕ್ಕೆ ಔರಾದ್ ಘಟಕದ 2ಬಸ್‌ಗಳ ಜಪ್ತಿ ಸರ್ಕಾರದಿಂದ ಹೊರಬಿತ್ತು ಮಹತ್ವದ ಆದೇಶ: ಇನ್ನುಮುಂದೆ ಸರ್ಕಾರಿ ಪುರುಷ ನೌಕರರು ಪಡೆಯಬಹುದು 6ತಿಂಗಳ ಶಿಶುಪಾಲನಾ ರಜೆ KSRTC: ಇಂದಿನಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಣೆಗೆ ಸರ್ಕಾರದ ಆದೇಶ ಬಿಡದಿ ಟೌನ್ ಶಿಪ್‌: ರೈತರ ವಿರೋಧದ ನಡುವೆಯೂ ಎಕರೆಗೆ 2.14 ಕೋಟಿ ರೂ. ದರ ನಿಗದಿ- ಭೂಸ್ವಾಧೀನಕ್ಕೆ ಮುಂದಾದ ಸರ್ಕಾರ ಕರೆಂಟ್‌ ಬಿಲ್‌: ವಿದ್ಯುತ್ ವಿತರಣಾ ಕಂಪನಿಗಳ ಅನ್ಯಾಯದ ಬಿಲ್ಲಿಂಗ್ ಪದ್ಧತಿಗೆ ಬ್ರೇಕ್‌- KERC ಆದೇಶ ಪಾಲನೆಗೆ ಗ್ರಾಹಕರ... ಗೃಹಲಕ್ಷ್ಮಿಯೋಜನೆಗೆ ಮತ್ತೆ ಹೊಸದಾಗಿ ಅರ್ಜಿ ಸ್ವೀಕರಿಸುವ ಚಿಂತನೆಯಲ್ಲಿ ಸರ್ಕಾರ! ಮೂರು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ನಿರ್ಧಾರ: ಸಾರಿಗೆ ಸಚಿವ ಬೈರತಿ ...