ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಕಿಂಗ್ ಪಿನ್ ಎಂದೇ ಹೇಳಲಾಗುತ್ತಿರುವ ಕವಿರಾಜ್‌ನನ್ನು ತಮಿಳುನಾಡಿನಲ್ಲಿ ಬಂಧನಕ್ಕೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕವಿರಾಜ್ ವರ್ತೂರ್ ಪ್ರಕಾಶ್ ಪರಿಚಯಸ್ಥ ಎಂದು ಹೇಳಲಾಗುತ್ತಿದೆ. ಕವಿರಾಜ್ ಬಂಧನದ ಬಗ್ಗೆ ಕೇಂದ್ರ ವಲಯದ ಐಜಿಪಿ ಸೀಮಂತ್ ಕುಮಾರ್ ಮಾಹಿತಿ ನೀಡಿದ್ದಾರೆ.
ನ.25ರಂದು ಸಂಜೆ 7 ಗಂಟೆ ಸುಮಾರಿಗೆ ಕೋಲಾರದ ಬೆಗ್ಲಿಹೊಸಹಳ್ಳಿ ಗ್ರಾಮದ ಬಳಿ ಇರುವ ನನ್ನ ಫಾರಂ ಹೌಸ್‌ನಿಂದ ಕಾರಿನಲ್ಲಿ ನಗರಕ್ಕೆ ವಾಪಸ್ ಆಗುತ್ತಿದ್ದೆ. ಕಾರು ಚಾಲಕ ಸುನೀಲ್ ಕಾರು ಚಾಲನೆ ಮಾಡುತ್ತಿದ್ದ. ಫಾರಂಹೌಸ್‌ನಿಂದ ಒಂದು ಕಿ.ಮೀ. ದೂರದಲ್ಲಿ ಎರಡು ಕಾರಿನಲ್ಲಿ ಬಂದ ದುಷ್ಕರ್ಮಿಗಳು ನಮ್ಮ ಕಣ್ಣಿಗೆ ಬಟ್ಟೆಕಟ್ಟಿ ಕಾರಿನಲ್ಲಿ ಅಪಹರಣ ಮಾಡಿದ್ದರು. ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೂ.30 ಕೋಟಿ ರೂ. ಬೇಡಿಕೆ ಇಟ್ಟಿದ್ದರು. ಅದರಲ್ಲಿ 50 ಲಕ್ಷ ರೂ. ಕೊಟ್ಟು ಹೇಗೋ ತಪ್ಪಿಸಿಕೊಂಡು ಬಂದೆ ಎಂದು ಪೊಲೀಸರಿಗೆ ವರ್ತೂರ್ ದೂರು ನೀಡಿದ್ದರು.