ಲಾರಿ ಓವರ್ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು
ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ದಂಪತಿ ಮೈಸೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದರು.
Megha14.06.2026

ಮಂಡ್ಯ: ಲಾರಿ ಓವರ್ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿಯಾದ ಘಟನೆ ಮಂಡ್ಯದ ಹನಕೆರೆ ಬಳಿಯ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಇಂದು ನಡೆದಿದೆ.
ಈ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ದಂಪತಿ ಮೈಸೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಲಾರಿ ಓವರ್ಟೇಕ್ ಮಾಡಲು ಯತ್ನಿಸಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಅಪಘಾತದ ತೀವ್ರತೆಗೆ ಕಾರು ಡಿವೈಡರ್ ದಾಟಿ ಮತ್ತೊಂದು ರಸ್ತೆಗೆ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳು ದಂಪತಿಯನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಕಿಲೋಮೀಟರ್ಗಟ್ಟಲೇ ಸಾಲುಗಟ್ಟಿ ನಿಂತಿದ್ದ ವಾಹನಗಳಿಗೆ ವಕಾಶ ಮಾಡಿಕೊಡಲು ಕಾರನ್ನು ತೆರವುಗೊಳಿಸಲಾಯಿತು.
Related


Megha







