CrimeNEWSನಮ್ಮಜಿಲ್ಲೆ

ವಂಚನೆ ಪ್ರಕರಣದ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದನ್ನು ಪ್ರಶ್ನಿಸಿದ ಸಿಪಿವೈಗೆ ಹೈಕೋರ್ಟ್ ದಂಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಂಚನೆ ಪ್ರಕರಣಗಳ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿರುವುದನ್ನು ಪ್ರಶ್ನಿಸಿ ವಿಧಾನಪರಿಷತ್ತಿನ ಸದಸ್ಯ ಸಿ.ಪಿ.ಯೋಗೇಶ್ವರ್ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳನ್ನು ವಜಾಗೊಳಿಸಿರುವ ನ್ಯಾಯಾಲಯ, ಪದೇಪದೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ವಿಚಾರಣೆ ಪ್ರಶ್ನಿಸಿದಕ್ಕಾಗಿ ದಂಡ ವಿಧಿಸಿದೆ.

ವ್ಯವಹಾರ ನಡೆಸುವಾಗ ಕಂಪನಿ ಕಾಯ್ದೆಗಳನ್ನು ಉಲ್ಲಂಘಿಸಲಾಗಿದೆ. ತಂದೆಯ ಹೆಸರು ಮತ್ತು ವಿಳಾಸಗಳನ್ನು ಮೂರು ವಿಭಿನ್ನ ರೀತಿಯಲ್ಲಿ ನಮೂದಿಸಿ ಸುಳ್ಳು ದಾಖಲೆ ಸಲ್ಲಿಸಲಾಗಿದೆ ಎಂಬುದು ಯೋಗೇಶ್ವರ ಮತ್ತು ಇತರರ ವಿರುದ್ಧ ಇರುವ ಆರೋಪವಾಗಿದೆ. ತನಿಖೆಗೆ ವಿನಾಯಿತಿ ಕೋರಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ವಜಾಗೊಳಿಸಿದರು. ಅಲ್ಲದೆ, ಪದೇಪದೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದಕ್ಕಾಗಿ 3 ಸಾವಿರ ರೂ. ದಂಡ ವಿಧಿಸಿದ್ದಾರೆ.

ಕಂಪನಿ ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ನವದೆಹಲಿಯ ಗಂಭೀರ ವಂಚನೆಗಳ ತನಿಖಾ ತಂಡ ನಡೆಸುತ್ತಿರುವ ವಿಚಾರಣೆ ಪ್ರಶ್ನಿಸಿ, ಯೋಗೇಶ್ವರ, ಯೋಗೇಶ್ವರ ಪತ್ನಿ ಮಂಜು ಕುಮಾರಿ, ಅರುಣ್ ಚರಂತಿಮಠ, ಸುಜಾತಾ ಚರಂತಿಮಠ, ಸಿ.ಪಿ. ಗಂಗಾಧರೇಶ್ವರ, ಪಿ. ಮಹಾದೇವಯ್ಯ, ಎಚ್‌.ಆರ್. ರಮೇಶ್‌ ಮತ್ತು ಸಾಂಬಶಿವ ರಾವ್ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...