ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆಗೆ ಇಳಿದಿದ್ದು, ಮೂರನೇ ದಿನವಾದ ಇಂದು ಬೆಳಗ್ಗೆ 10ಗಂಟೆಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ಸರ್ಕಾರದ ಉಡಾಫೆಯಿಂದ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾದರ ಎಂಬ ಆರೋಪ ಈಗ ಸಾರ್ವಜನಿಕ ವಲಯದಲ್ಲಿ ಈಗಾಗಲೇ ಕೇಳಿಬರುತ್ತಿದೆ ಆದರೂ ಸಚಿವರು ಮಾತ್ರ ಸಂಬಂಧಪಟ್ಟ ಧರಣಿ ನಿರತ ನೌಕರರನ್ನು ಬಿಟ್ಟು ಉಳಿದವರನ್ನು ಕರೆದು ಸಭೆ ನಡೆಸುವ ವ್ಯರ್ಥ ಸಾಹಸಕ್ಕೆ ಕೈಹಾಕುತ್ತಿದ್ದಾರೆ. ಇದನ್ನು ನೋಡಿದರೆ ಸರ್ಕಾರದಲ್ಲಿ ಅನುಭವಿ ಸಚಿವರ ಕೊರತೆ ಇದೆ ಎಂಬುವುದು ಈಗ ಕೇಳಿ ಬರುತ್ತಿರುತ್ತಿದೆ.
ಇಂದು ಫ್ರೀಡಂ ಪಾರ್ಕ್‌ನಲ್ಲಿ ನೌಕರರು ಸಾವಿರಾರು ನೌಕರರು ಜಮಾವಣೆಗೊಂಡು ಉಪವಾಸ ಧರಣಿ ಆರಂಭಿಸಿದ್ದಾರೆ. ಸಾರಿಗೆ ನೌಕರರ ಮುಷ್ಕರಕ್ಕೆ ರೈತ ಮುಖಂಡ ಮತ್ತು ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವ ವಹಿಸಿದ್ದು, ಅವರ ಮೂಲಕವೇ 1.30ಲಕ್ಷ ನೌಕರರು ಹೋರಾಟವನ್ನು ತೀವ್ರಗೊಳಿಸಿದ್ದಾರೆ.
ಇನ್ನು ನಮ್ಮ ಕೆಲ ಸಂಘಟನೆಗಳು ಎನಿಸಿಕೊಂಡಿರುವ ಸಂಘಟನೆಗಳ ಮುಖಂಡರು ನಮ್ಮ ಸಮಸ್ಯೆಗೆ ಸ್ಪಂದಿಸದಿರುವುದು. ಅವರು ನಮ್ಮ ಸಮಸ್ಯೆ ಆಲಿಸದೆ ಹಿಂಬಾಗಿಲ ರಾಜಕಾರಣ ಮಾಡಲು ಮುಂದಾಗಿ ನಮ್ಮನ್ನು ಕಡೆಗಣಿಸಿದ್ದಕ್ಕೆ ಆ ಸಂಘಟನೆಗಳನ್ನು ನಾವು ಸಂಪೂರ್ಣವಾಗಿ ತಿರಸ್ಕರಿಸಿ ನಮ್ಮದೇ ಸಂಘಟ ನೆ ಮೂಲಕ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ.