NEWSಕೃಷಿ

ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ

ಕಬ್ಬಿನಿಂದ ಹಾಗೂ ಕೃಷಿ ಉತ್ಪನ್ನಗಳಿಂದ ಉತ್ಪಾದಿಸುವ ಎಥನಾಲ್‌ನ ಶೇಕಡಾ ನೂರರಷ್ಟು ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ಬಳಸಲು ಅನುಮತಿ ನೀಡಿರುವ ಕೇಂದ್ರ ಸರ್ಕಾರದ ಆದೇಶ ಸ್ವಾಗತರ್ಹವಾಗಿದೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ಶೇಕಡಾ ನೂರರಷ್ಟು ಎಥನಾಲ್ ಬಳಕೆಗೆ ಆದೇಶ ಕೇಂದ್ರ ಸರ್ಕಾರದ ನಿರ್ಧಾರ ಮಾಡಿರುವುದನ್ನು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಸ್ವಾಗತಿಸಿದ್ದಾರೆ.

ಇದು ಕಬ್ಬಿನಿಂದ ಹಾಗೂ ಕೃಷಿ ಉತ್ಪನ್ನಗಳಿಂದ ಉತ್ಪಾದಿಸುವ ಎಥನಾಲ್‌ನ ಶೇಕಡಾ ನೂರರಷ್ಟು ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ಬಳಸಲು ಅನುಮತಿ ನೀಡಿರುವ ಕೇಂದ್ರ ಸರ್ಕಾರದ ಆದೇಶ ಸ್ವಾಗತರ್ಹವಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಭಾರತ ರಾಜ್ಯಗಳ ರೈತರ ಸಮಾವೇಶ 2006 ರಲ್ಲಿ ಮೈಸೂರಿನಲ್ಲಿ ನಡೆಸಿ ಕಬ್ಬಿನಿಂದ ಎಥನಾಲ್ ಉತ್ಪಾದಿಸಲು ಹಾಗೂ ಪೆಟ್ರೋಲ್ ಜತೆ ಮಿಶ್ರಣ ಮಾಡಲು ಅವಕಾಶ ನೀಡಬೇಕು, ಇದರಿಂದ ದೇಶ ಖರೀದಿಸುವ ಪೆಟ್ರೋಲ್, ಡೀಸೆಲ್ ವಿದೇಶಿ ವಿನಿಮಯ ಹಣ ಎರಡು ಲಕ್ಷ ಕೋಟಿ ರೂ.ಗಳವರೆಗೆ ಉಳಿತಾಯವಾಗುತ್ತದೆ ಎಂದು ಅಂದು ಕೇಂದ್ರ ಸರ್ಕಾರವನ್ನು ಸಮಾವೇಶದ ಮೂಲಕ ನಿರ್ಣಯ ಮಾಡಿ ಒತ್ತಾಯಿಸಲಾಗಿತ್ತು.

ಈ ಬಗ್ಗೆ ನಿರಂತರ ಒತ್ತಾಯ ಮಾಡಿದ್ದರ ಪರಿಣಾಮ 20 ವರ್ಷಗಳ ನಂತರ ಜಾರಿಯಾಗಿದೆ, ಇದರಿಂದ ಪ್ರಸ್ತುತ 22 ಲಕ್ಷ ಕೋಟಿ ವಿದೇಶಿ ವಿನಿಮಯ ಉಳಿತಾಯವಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಇಂತಹ ನಿರ್ಧಾರ ವಿಶೇಷವಾಗಿ ಕಬ್ಬು ಬೆಳೆಗಾರರು, ಮೆಕ್ಕೆಜೋಳ ರೈತರಿಗೆ ಹೆಚ್ಚು ಅನುಕೂಲವಾಗಲಿ, ಇದರಿಂದ ಕಾರ್ಖಾನೆಗಳು ಸ್ಪರ್ಧಾತ್ಮಕ ಕಬ್ಬಿನ ಬೆಲೆ ನೀಡುವಂತಾಗುತ್ತದೆ ಎಂದು ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಇಂದಿನಿಂದ KSRTC ಬಸ್‌ನಲ್ಲಿ ಯಾವುದೇ ವಿಶೇಷ ಕಾರ್ಡ್‌ ಇಲ್ಲದೆ ಮಹಿಳೆಯರ ಮುಕ್ತ ಪ್ರಯಾಣಕ್ಕೆ ಅವಕಾಶ- "ಪ್ರಿಯದರ್ಶಿನಿ ಯ... ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ