NEWSನಮ್ಮಜಿಲ್ಲೆ

ಜೂನ್, 21ರಂದು ವಿಶ್ವ ಯೋಗ ದಿನ ಆಚರಿಸೋಣ ಬನ್ನಿ ಡಿಸಿ ಡಾ.ಅನುರಾಧ ಕರೆ

ದೈನಂದಿನ ಕೆಲಸ ಕಾರ್ಯಗಳ ಜತೆ ಆರೋಗ್ಯ ಕಾಪಾಡಿಕೊಳ್ಳುವುದು ಎಲ್ಲರ ಆದ್ಯತೆಯಾಗಿದ್ದು, ಯೋಗದಿಂದ ರೋಗ ಜಯಿಸುವ ಯೋಗ ದಿನಾಚರಣೆ ಯಶಸ್ಸಿಗೆ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು, ವಿವಿಧ ಯೋಗ ಸಂಸ್ಥೆಗಳವರು ಶ್ರಮಿಸಬೇಕೆಂದರು.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಉತ್ತಮ ಆರೋಗ್ಯಕ್ಕಾಗಿ ಯೋಗ ಎಂಬ ಘೋಷಣೆಯೊಂದಿಗೆ 12ನೇ ಯೋಗ ದಿನವನ್ನು ಆಚರಿಸಲಾಗುವುದೆಂದು ಜಿಲ್ಲಾಧಿಕಾರಿ ಡಾ.ಕೆ.ಎನ್. ಅನುರಾಧ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದ್ದ ವಿಶ್ವ ಯೋಗ ದಿನದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿ, ದೈನಂದಿನ ಕೆಲಸ ಕಾರ್ಯಗಳ ಜತೆ ಆರೋಗ್ಯ ಕಾಪಾಡಿಕೊಳ್ಳುವುದು ಎಲ್ಲರ ಆದ್ಯತೆಯಾಗಿದ್ದು, ಯೋಗದಿಂದ ರೋಗ ಜಯಿಸುವ ಯೋಗ ದಿನಾಚರಣೆ ಯಶಸ್ಸಿಗೆ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು, ವಿವಿಧ ಯೋಗ ಸಂಸ್ಥೆಗಳವರು ಶ್ರಮಿಸಬೇಕೆಂದರು.

ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಜರುಗುವ ಯೋಗ ದಿನಕ್ಕೆ ಸಚಿವರಾದ ಕೆ.ಎಚ್. ಮುನಿಯಪ್ಪ ಹಾಗೂ ಶಾಸಕರು ಮತ್ತು ಜನ ಪ್ರತಿನಿಧಿಗಳನ್ನು ಆಹ್ವಾನಿಸಲು ಸೂಚಿಸಿದರು.

ಯೋಗಾರ್ಥಿಗಳಿಗೆ ಯೋಗ ಮಾಡಲು ಅನುಕೂಲವಾಗುವಂತೆ ಉತ್ತಮ ಮ್ಯಾಟ್ಗಳ ವ್ಯವಸ್ಥೆ, ಜಮಖಾನ, ಟೀ ಶರ್ಟ್ ಗಳು, ಶುದ್ದ ಕುಡಿಯುವ ನೀರು, ಉಪಹಾರ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚಿಸಲಾಯಿತು.

ಆರೋಗ್ಯ ಇಲಾಖೆಯಿಂದ ಒಂದು ಆ್ಯಂಬುಲೆನ್ಸ್ ಅನ್ನು ಸ್ಥಳದಲ್ಲಿ ನಿಯೋಜಿಸಬೇಕು, ವೈದ್ಯಾಧಿಕಾರಿ ಗಳು, ಸಿಬ್ಬಂದಿ ಔಷಧೋಪಚಾರವಿರಬೇಕು, ಕ್ರೀಡಾಂಗಣದಲ್ಲಿ ಉತ್ತಮ ವೇದಿಕೆ ಸಿದ್ದಪಡಿಸ ಬೇಕು ಎಂದು ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನುರಾಧ.

ಪೂರ್ವ ಭಾವಿ ಸಭೆಯಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಕೆ.ಟಿ.ಅಶ್ವಿನಿ, ವೈದ್ಯಾಧಿಕಾರಿ ಡಾ.ವಿಜಯಲಕ್ಷ್ಮಿ, ಡಿಎಚ್ಒ ಲಕ್ಕ ಕೃಷ್ಣಾರೆಡ್ಡಿ, ಜಂಟಿ ನಿರದೇಶಕರು ಕೈಗಾರಿಕಾ ಇಲಾಖೆ ಯೋಗ ದಿನಾಚರಣೆಯ ನೋಡೆಲ್ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರೇಮ, ಯೋಜನಾ ನಿರ್ದೇಶಕರಾದ ವಿಠ್ಠಲ್ ಕಾವ್ಳೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ ಜೂನ್, 21ರಂದು ವಿಶ್ವ ಯೋಗ ದಿನ ಆಚರಿಸೋಣ ಬನ್ನಿ ಡಿಸಿ ಡಾ.ಅನುರಾಧ ಕರೆ ಇ-ಖಾತಾ ತಿದ್ದುಪಡಿ ಜವಾಬ್ದಾರಿ ಉಪ ಆಯುಕ್ತರಿಗೆ ಕೊಡಿ: ಮಹೇಶ್ವರ್ ರಾವ್ ವಿದ್ಯುತ್ ಖಾಸಗೀಕರಣ ನಿಲ್ಲಿಸಿ: ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಆಗ್ರಹ BMTC: ದೈಹಿಕವಾಗಿ ಫಿಟ್‌ ಇದ್ದರೂ ಲಘುಡ್ಯೂಟಿ ಮಾಡುತ್ತಿರುವ ನೌಕರರ ಸಂಘಟನೆಯ ಮುಖಂಡ- ಕಂಡು ಕಾಣದಂತೆ ಮೌನವಾಗಿರುವ ಅಧಿಕ... ಮೃತ ಗೃಹಲಕ್ಷ್ಮಿಯರ ಬ್ಯಾಂಕ್‌ ಖಾತೆ ಸೇರಿದೆ ಬರೋಬರಿ 79.75 ಕೋಟಿ ರೂ.ಗೂ ಹೆಚ್ಚು ಹಣ ಇಂದಿನಿಂದ KSRTC ಬಸ್‌ನಲ್ಲಿ ಯಾವುದೇ ವಿಶೇಷ ಕಾರ್ಡ್‌ ಇಲ್ಲದೆ ಮಹಿಳೆಯರ ಮುಕ್ತ ಪ್ರಯಾಣಕ್ಕೆ ಅವಕಾಶ- "ಪ್ರಿಯದರ್ಶಿನಿ ಯ... ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ...