ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಜಿಲ್ಲಾಡಳಿತ ಈ ಕೂಡಲೇ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ದೇಶಕರ ಕರೆಸಿ ಸಮಸ್ಯೆ ಬಗೆಹರಿಸುವ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತರೆ ಟೂಲ್ ನಾಕ ಬಂದ್ ಮಾಡುವ ಚಳವಳಿ ನಡೆಸಬೇಕಾಗುತ್ತದೆ ಎಂದು ಕುರುಬೂರು ಶಾಂತಕುಮಾರ್ ಎಚ್ಚರಿಸುತ್ತಿದ್ದಾರೆ.

ಮಂಡ್ಯ: ವಾಹನ ಖರೀದಿಸುವಾಗಲೇ ರಸ್ತೆ ತೆರಿಗೆ ಕಟ್ಟಿ ವಾಹನ ಖರೀದಿಸುತ್ತಾರೆ ಹೀಗಾಗಿ ಮತ್ತೊಮ್ಮೆ ರಸ್ತೆ ತೆರಿಗೆ ಕಟ್ಟುವ ಅವಶ್ಯಕತೆ ಇಲ್ಲ. ಅಂದಮೇಲೆ ಸುಂಕ ವಸೂಲಿಗೆ ಅವಕಾಶವಿಲ್ಲ ಎಂದು ಸುಂಕ ವಸೂಲಿ ಕೇಂದ್ರಗಳನ್ನು ಪಂಜಾಬ್ ಸರ್ಕಾರ ರದ್ದು ಮಾಡಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ರದ್ದು ಮಾಡಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.
ಈ ಸಂಬಂಧ ಇಂದು ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ರಾಷ್ಟ್ರೀಯ ಹೆದ್ದಾರಿ ಬಳಿ ಜೂನ್ 23 ರಂದು ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದು, ಎಲ್ಲ ರೀತಿಯ ವಾಹನಗಳ ಟೂಲ್ ಸುಂಕ ವಸೂಲಿ ನಿಲ್ಲಿಸಲು ಪಂಜಾಬ್ ಮಾದರಿಯಲ್ಲಿ ಶುಲ್ಕ ವಸೂಲಿ ಕೇಂದ್ರ ರದ್ದು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರ್ಮಾಣ ಮಾಡಿರುವ ಟೊಲ್ ಸುಂಕ ವಸೂಲಿ ಕೇಂದ್ರಗಳಲ್ಲಿ ರೈತರಿಗೆ, ರೈತರ ವಾಹನಗಳಿಗೆ ವಸೂಲಿ ಕಿರುಕುಳ ಹೆಚ್ಚುತ್ತಿದೆ. ಅಲ್ಲದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರೈತರ ವಾಹನಗಳಿಗೆ ವಿನಾಯಿತಿ ನೀಡಿದರೂ ಸಹ ಕಬ್ಬು ಭತ್ತ, ಹಣ್ಣು ತರಕಾರಿ ಸಾಗಾಣಿಕೆ ವಾಹನಗಳ ಹಾಗೂ ರೈತ ಮುಖಂಡರ ವಾಹನಗಳನ್ನು ತಡೆದು ಬಲತ್ಕಾರದಿಂಧ ಸುಂಕ ವಸೂಲಿ ಮಾಡುತ್ತಿದ್ದಾರೆ ಇದು ನಿಲ್ಲಬೇಕು.

ಕೆಲವು ರಸ್ತೆಗಳಲ್ಲಿ ಸರ್ವಿಸ್ ರಸ್ತೆ ನಿರ್ಮಾಣವಿಲ್ಲ ಮೂಲಭೂತ ಸೌಕರ್ಯಗಳಿಲ್ಲ. ಈ ಬಗ್ಗೆ ಗಮನ ಹರಿಸದೆ ಕಾನೂನು ಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿದ್ದಾರೆ. ರೈತಪರ ಹೋರಾಟ ನಡೆಸುವ ಕಾರ್ಯಗಳಿಗೆ ಹೋಗುವ ರೈತ ಮುಖಂಡರ ವಾಹನಗಳನ್ನು ತಡೆದು ಬಲತ್ಕಾರವಾಗಿ ಬೆದರಿಸಿ ಸುಂಕ ವಸೂಲಿ ಮಾಡುತ್ತಿದ್ದಾರೆ ಏಕೆ ಎಂದು ಕಿಡಿಕಾರಿದ್ದಾರೆ.
ಅಲ್ಲದೆ ಪಂಜಾಬ್ ಸರ್ಕಾರ ಮಾದರಿ ಟೋಲ್ ನಾಕ ಬಂದ್ ರಾಜ್ಯದಲ್ಲಿಯೂ ಜಾರಿಯಾಗಬೇಕು. ವಾಹನ ಖರೀದಿಸುವಾಗ ರಸ್ತೆ ತೆರಿಗೆ ಕಟ್ಟಿ ವಾಹನ ಖರೀದಿಸುತ್ತಿದ್ದಾರೆ ಮತ್ತೊಮ್ಮೆ ರಸ್ತೆ ತೆರಿಗೆ ಕಟ್ಟುವ ಅವಶ್ಯಕತೆ ಇಲ್ಲ. ಆದ್ದರಿಂದ ಸುಂಕ ವಸೂಲಿಗೆ ಅವಕಾಶವಿಲ್ಲ ಎಂದು ಸುಂಕ ವಸೂಲಿ ಕೇಂದ್ರಗಳನ್ನು ಪಂಜಾಬ್ ಸರ್ಕಾರ ರದ್ದು ಮಾಡಿದೆ ಅದೇ ರೀತಿ ಕರ್ನಾಟಕದಲ್ಲಿಯೂ ರದ್ದು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ಈ ಟೋಲ್ ವಿರುದ್ಧ ರಾಜ್ಯಾದ್ಯಂತ ಟೂಲ್ ನಾಕಗಳ ಮುಂದೆ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳಿಗೆ ಸಂಘ ಸಂಸ್ಥೆಗಳಿಗೆ ಕರೆ ನೀಡಲಾಗಿದೆ. ಜಿಲ್ಲಾಡಳಿತ ಈ ಕೂಡಲೇ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ದೇಶಕರ ಕರೆಸಿ ಸಮಸ್ಯೆ ಬಗೆಹರಿಸುವ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತರೆ ಟೂಲ್ ನಾಕ ಬಂದ್ ಮಾಡುವ ಚಳವಳಿ ನಡೆಸಬೇಕಾಗುತ್ತದೆ ಎಂದು ಕುರುಬೂರು ಶಾಂತಕುಮಾರ್ ಎಚ್ಚರಿಸುತ್ತಿದ್ದಾರೆ.
ರಾಜ್ಯ ಸರ್ಕಾರ ನಿಗದಿ ಮಾಡಿದ ಕಬ್ಬಿನ ಹೆಚ್ಚುವರಿ ಬೆಲೆ ಟನ್ ನೂರು ರೂಪಾಯಿ ಸಕ್ಕರೆ ಕಾರ್ಖಾನೆಗಳು ರೈತರಿಗೆ ಪಾವತಿಸುವ ತನಕ ಕಾರ್ಖಾನೆಗಳ ಆರಂಭಕ್ಕೆ ಅನುಮತಿ ಕೊಡಬಾರದು. ರೈತರು ಸಹ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡದೆ ಬಾಕಿ ಹಣ ವಸೂಲಿ ಮಾಡಿಕೊಳ್ಳಬೇಕು. ಸಕ್ಕರೆ ಕಾರ್ಖಾನೆ ಮಾಲೀಕರು ಸರ್ಕಾರದ ಆದೇಶಗಳನ್ನು ಧಿಕ್ಕರಿಸಿ ಪದೇಪದೇ ಪ್ರತಿ ವರ್ಷ ನ್ಯಾಯಾಲಯದಲ್ಲಿ ತಡೆಯಾಜ್ಞೆ ತರುವ ಮೂಲಕ ರೈತರನ್ನು ವಂಚಿಸುತ್ತಿದ್ದಾರೆ ರೈತರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು.
ರಾಜ್ಯದ ರೈತರಿಗೆ ಸಂಕಷ್ಟ ಉಂಟು ಮಾಡುವ ವಿದ್ಯುತ್ ಖಾಸಗೀಕರಣಕೆ ಟಾಟಾ ಕಂಪನಿಯವರು ಸಲ್ಲಿಸಿರುವ ಅರ್ಜಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪತ್ರಿಕಾ ಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಮಂಜೇಶ್ ಗೌಡ, ಕನ್ನಡ ಸೇನೆ ಅಧ್ಯಕ್ಷ ಮಂಜುನಾಥ್, ಅಣ್ಣೂರ್ ಮಹೇಂದ್ರ, ಸೊ ಸಿ ಪ್ರಕಾಶ್, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಮಿಲಿಟರಿ ಕುಮಾರ್ ಇದ್ದರು.
Related









