NEWSಉದ್ಯೋಗದೇಶ-ವಿದೇಶ

1.4 ಲಕ್ಷ ಹುದ್ದೆಗಳ ಭರ್ತಿಗೆ ರೈಲ್ವೇ ನೇಮಕಾತಿ ಪರೀಕ್ಷೆ ಆರಂಭ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೋವಿಡ್- 19 ಸೋಂಕು ನಡುವೆಯೂ ದೇಶಾದ್ಯಂತ ರೈಲ್ವೆ ಇಲಾಖೆಯಲ್ಲಿ 1.4 ಲಕ್ಷ ಹುದ್ದೆಗಳ ಭರ್ತಿಗೆ ರೈಲ್ವೇ ನೇಮಕಾತಿ ಮಂಡಳಿಗಳ ಮೂಲಕ ಇಂದಿನಿಂದ ಮೂರು ಹಂತಗಳಲ್ಲಿ ಬೃಹತ್ ನೇಮಕಾತಿ ಪರೀಕ್ಷೆ ಆರಂಭವಾಗಿದೆ.

ಹಲವು ನಗರಗಳಲ್ಲಿ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, 2.44 ಕೋಟಿ ಅಭ್ಯರ್ಥಿಗಳು ಈ ಪರೀಕ್ಷೆ ಬರೆಯುತ್ತಿದ್ದಾರೆ. ಇದೇ 18ರ ವರೆಗೆ ಮೊದಲ ಹಂತದ ಪರೀಕ್ಷೆ ನಡೆಯಲಿದೆ.

ಎನ್ ಟಿ ಪಿ ಸಿ ವಿಭಾಗದೊಂದಿಗೆ ಡಿಸೆಂಬರ್ 28 ರಿಂದ ಮುಂದುವರಿಯುವ ಪರೀಕ್ಷೆಗಳು 2021ರ ಮಾರ್ಚ್‌ವರೆಗೆ ಮತ್ತು 3 ನೇ ಹಂತದ ಪರೀಕ್ಷೆಗಳು 2021ರ ಏಪ್ರಿಲ್‌ನಿಂದ ಜೂನ್‌ವರೆಗೆ ನಡೆಯಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ರೈಲ್ವೆ ನೇಮಕಾತಿ ಮಂಡಳಿ ಕೋವಿಡ್ 19 ಸೋಂಕು ನಿಯಂತ್ರಣ ಕ್ರಮಗಳ ನಡುವೆ ಪರೀಕ್ಷೆ ನಡೆಸಲಾಗುತ್ತಿದೆ. ಅಭ್ಯರ್ಥಿಗಳು ಪರೀಕ್ಷೆಗೂ ಮುಂಚೆ ನಿಗದಿತ ನಮೂನೆಯಲ್ಲಿ ಕೋವಿಡ್-19 ಸ್ವಯಂ ಘೋಷಣಾ ಪತ್ರವನ್ನು ಹಾಜರುಪಡಿಸಬೇಕು. ಒಂದು ವೇಳೆ ಘೋಷಣಾ ಪತ್ರ ಹಾಜರುಪಡಿಸಲಾಗದಿದ್ದಲ್ಲಿ ಅಂಥ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶವಿರುವುದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಯಲಿದ್ದು. ಒಂದು ಪಾಳಿಯ ಪರೀಕ್ಷಾ ಕೊಠಡಿಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಿ ಸೋಂಕು ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...