NEWSನಮ್ಮಜಿಲ್ಲೆ

ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ

'ಗೃಹಜ್ಯೋತಿ' ಯೋಜನೆಯಡಿ ಗೃಹಬಳಕೆಗಾಗಿ ನೀಡಲಾಗುವ 200 ಯೂನಿಟ್ ಉಚಿತ ವಿದ್ಯುತ್‌ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು, ಕೆಲವರು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವುದು ಕಂಡುಬಂದಿದೆ. ಅಲ್ಲದೆ, ಒಬ್ಬರ ಹೆಸರಲ್ಲೇ ಒಂದಕ್ಕಿಂತ ಹೆಚ್ಚು ಮೀಟರ್ಗಳಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಾಡಿಗೆ ಮನೆಗಳಲ್ಲಿ ನಿಜವಾದ ಫಲಾನುಭವಿಗಳಿದ್ದಾರೆಯೇ ಅಥವಾ ಬೇರೆಯವರಿದ್ದಾರೆಯೇ ಎಂದು ಸೂಕ್ತ ತನಿಖೆ ನಡೆಸಿ ಸರಿಪಡಿಸಲು ಆದೇಶಿಸಲಾಗಿದೆ.

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆಗಾಗಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ಹಾಗೂ ಜಿಲ್ಲಾ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ  ಸ್ವಾಗತಿಸಿದೆ.

ನಗರದ ಜಿಲ್ಲಾ ಪಂಚಾಯಿತಗಿ ಕಚೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಈ ವಿಷಯ ತಿಳಿಸಿದರು.

ಇನ್ನು ಗೃಹಲಕ್ಷ್ಮಿ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯೊಂದರಲ್ಲೇ ಸುಮಾರು 9,247 ಫಲಾನುಭವಿಗಳು ನಿಧನರಾಗಿದ್ದರೂ ಅವರ ಬ್ಯಾಂಕ್ ಖಾತೆಗಳಿಗೆ ಇನ್ನೂ ಹಣ ಜಮೆ ಆಗುತ್ತಿರುವುದು ಹಾಗೂ ಅದನ್ನು ಬೇರೆಯವರು ಪಡೆಯುತ್ತಿರುವುದು ಬೆಳಕಿಗೆ ಬಂದಿದೆ ಎಂದು ವಿವರಿಸಿದರು.

ಅಲ್ಲದೆ ಒಂದೇ ಮನೆಯಲ್ಲಿ ಇಬ್ಬರು ಅಥವಾ ಮೂವರು ಮಹಿಳೆಯರು ಯಜಮಾನಿಯರಾಗಿ ಸೌಲಭ್ಯ ಪಡೆಯುತ್ತಿರುವ ಪ್ರಕರಣಗಳೂ ಪತ್ತೆಯಾಗಿದ್ದು ಇಂತಹ ಪ್ರಸಂಗಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪರಿಷ್ಕರಿಸಲು ಸೂಚಿಸಲಾಗಿದೆ. ಸರ್ಕಾರಕ್ಕೆ ಆದಾಯ ತೆರಿಗೆ ಪಾವತಿಸುವವರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿರುವುದು ಪತ್ತೆಯಾಗಿದೆ ಎಂದರು.

ಜಿಲ್ಲೆಯ ವರದಿಯ ಪ್ರಕಾರ ಇಂತಹ 5,618 ಅನರ್ಹರು ಯೋಜನೆಯ ಲಾಭ ಪಡೆಯುತ್ತಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ. ಹಿಗಾಗಿ ಇಂತಹ ಅನರ್ಹರನ್ನು ಫಲಾನುಭವಿಗಳ ಪಟ್ಟಿಯಿಂದ ತಕ್ಷಣವೇ ತೆಗೆದುಹಾಕಲು ಕಟ್ಟುನಿಟ್ಟಿನ ಕ್ರಮ ಅನಿವಾರ್ಯವಾಗಿದೆ ಎಂದು ಹೇಳಿದರು.

ಉಚಿತ ವಿದ್ಯುತ್ ದುರ್ಬಳಕೆ : ‘ಗೃಹಜ್ಯೋತಿ’ ಯೋಜನೆಯಡಿ ಗೃಹಬಳಕೆಗಾಗಿ ನೀಡಲಾಗುವ 200 ಯೂನಿಟ್ ಉಚಿತ ವಿದ್ಯುತ್‌ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು, ಕೆಲವರು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವುದು ಕಂಡುಬಂದಿದೆ. ಅಲ್ಲದೆ, ಒಬ್ಬರ ಹೆಸರಲ್ಲೇ ಒಂದಕ್ಕಿಂತ ಹೆಚ್ಚು ಮೀಟರ್ಗಳಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಾಡಿಗೆ ಮನೆಗಳಲ್ಲಿ ನಿಜವಾದ ಫಲಾನುಭವಿಗಳಿದ್ದಾರೆಯೇ ಅಥವಾ ಬೇರೆಯವರಿದ್ದಾರೆಯೇ ಎಂದು ಸೂಕ್ತ ತನಿಖೆ ನಡೆಸಿ ಸರಿಪಡಿಸಲು ಆದೇಶಿಸಲಾಗಿದೆ ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ