NEWSನಮ್ಮರಾಜ್ಯ

KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ

ಸಹೋದರ ಸಂಸ್ಥೆಗಳಾದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳು ಹಿಂಬಾಕಿ ಪಾವತಿಯ ಕುರಿತು ಆಯಾ ಸಂಸ್ಥೆಗಳು ಆರ್ಥಿಕ ಪರಿಸ್ಥಿತಿಗನುಗುಣವಾಗಿ ನಿರ್ಧರಿಕೊಳ್ಳಬಹುದು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2026ರ ಜನವರಿ 1ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ದರ ಪರಿಷ್ಕರಣೆ ಮಾಡಿದ್ದು, ಜೂನ್‌ ತಿಂಗಳ ವೇತನದಲ್ಲಿ ನಾಲ್ಕೂ ನಿಗಮಗಳ ನೌಕರರಿಗೆ ಪರಷ್ಕೃತ ತುಟ್ಟಿಭತ್ಯದರವನ್ನು ಅನುಷ್ಠಾನಗೊಳಿಸಿ ಆದೇಶಿಸಿದೆ.

ಕೆಎಸ್ಆರ್‌ಟಿಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದು, ನಾಲ್ಕೂ ನಿಗಮಗಳ ನೌಕರರಿಗೆ ಇದೇ ಜೂನ್‌ ತಿಂಗಳ ವೇತನದಲ್ಲಿ ಸೇರಿಸಿ ಕೊಡಬೇಕು ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ 11.05.2026ರಂದು ಸರ್ಕಾರಿ ನೌಕರರಿಗೆ 01.01.2026 ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ದರವನ್ನು ಶೇ.14.25 ರಿಂದ ಶೇ.15.75 ಕ್ಕೆ ಹೆಚ್ಚಿಸಿ ಆದೇಶಿಸಿದೆ.

ಇದರನ್ವಯ ಕೆಎಸ್ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ರಾಜ್ಯ ಸಾರಿಗೆ ನಿಗಮಗಳಲ್ಲಿ ಪರಿಷ್ಕೃತ ತುಟ್ಟಿಭತ್ಯೆ ದರವನ್ನು ಅನುಷ್ಠಾನಗೊಳಿಸಿ ಪಾವತಿಸಲು ಇಂದು ಆದೇಶ ಹೊರಡಿಸಿದ್ದಾರೆ.

ನಾಲ್ಕೂ ಸಾರಿಗೆ ನಿಗಮಗಳಲ್ಲಿ ಜೂನ್-2026 ರ ಮಾಹೆಯ ವೇತನದಲ್ಲಿ ಮತ್ತು ಮುಂದಕ್ಕೆ ತುಟ್ಟಿಭತ್ಯೆ ದರವನ್ನು ಶೇ.14.25 ರಿಂದ ಶೇ.15.75ಕ್ಕೆ ಹೆಚ್ಚಿಸಿ ಅನುಷ್ಠಾನಗೊಳಿಸುವುದು.

ಕೆಎಸ್ಆರ್‌ಟಿಸಿ ನಿಗಮದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜನವರಿ-2026 ರಿಂದ ಮೇ-2026ರವರೆಗಿನ ತುಟ್ಟಿಭತ್ಯೆ ಹಿಂಬಾಕಿ ಪಾವತಿಯ ಕುರಿತು ಪ್ರತ್ಯೇಕವಾಗಿ ಆದೇಶಿಸಲಾಗುವುದು.

ಇನ್ನು ಸಹೋದರ ಸಂಸ್ಥೆಗಳಾದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳು ಹಿಂಬಾಕಿ ಪಾವತಿಯ ಕುರಿತು ಆಯಾ ಸಂಸ್ಥೆಗಳು ಆರ್ಥಿಕ ಪರಿಸ್ಥಿತಿಗನುಗುಣವಾಗಿ ನಿರ್ಧರಿಕೊಳ್ಳಬಹುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ