NEWSನಮ್ಮರಾಜ್ಯ

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ

ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ ಸುಮಾರು 110 ಡಾಲರ್ ಇದ್ದಾಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಲಾಗಿತ್ತು. ಆದರೆ ಈಗ ಕಚ್ಚಾ ತೈಲದ ಬೆಲೆ ಸುಮಾರು 75 ಡಾಲರ್‌ಗೆ ಇಳಿದಿದ್ದರೂ ದೇಶದ ಜನತೆ ಇನ್ನೂ ಹೆಚ್ಚಿನ ಇಂಧನ ದರದ ಹೊರೆ ಹೊರುತ್ತಿದ್ದಾರೆ ಇದು ಪ್ರಜಾ ಪ್ರಭುತ್ವವಾ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದ್ದು ಈ ಹಿನ್ನೆಲೆಯಲ್ಲಿ ಕೂಡಲೇ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್‌ಗಳ ಬೆಲೆ ಏರಿಕೆಯನ್ನು ತಗ್ಗಿಸಬೇಕೆಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ ಒತ್ತಾಯಿಸಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ ಸುಮಾರು 110 ಡಾಲರ್ ಇದ್ದಾಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಲಾಗಿತ್ತು. ಆದರೆ ಈಗ ಕಚ್ಚಾ ತೈಲದ ಬೆಲೆ ಸುಮಾರು 75 ಡಾಲರ್‌ಗೆ ಇಳಿದಿದ್ದರೂ ದೇಶದ ಜನತೆ ಇನ್ನೂ ಹೆಚ್ಚಿನ ಇಂಧನ ದರದ ಹೊರೆ ಹೊರುತ್ತಿದ್ದಾರೆ ಇದು ಪ್ರಜಾ ಪ್ರಭುತ್ವವಾ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇನ್ನು ಕೇಂದ್ರ ಸರ್ಕಾರವು ಕಚ್ಚಾ ತೈಲ ಬೆಲೆ ಏರಿಕೆಯನ್ನು ನೆಪವಾಗಿಸಿಕೊಂಡು ಇಂಧನ ದರಗಳನ್ನು ಹೆಚ್ಚಿಸಿತ್ತು. ಆದರೆ, ಇಂದು ಜಾಗತಿಕ ಮಾರುಕಟ್ಟೆಯಲ್ಲಿ ತೈಲದ ಬೆಲೆ ಗಣನೀಯವಾಗಿ ಇಳಿಕೆಯಾದರೂ ಅದರ ಲಾಭವನ್ನು ಜನರಿಗೆ ನೀಡುವಲ್ಲಿ ವಿಫಲವಾಗಿದೆ. ಇದರ ಪರಿಣಾಮವಾಗಿ ಬಡವರು, ಮಧ್ಯಮ ವರ್ಗದ ಕುಟುಂಬಗಳು, ರೈತರು, ಕಾರ್ಮಿಕರು ಹಾಗೂ ಸಣ್ಣ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇಂಧನ ದರಗಳ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಹೆಚ್ಚಾಗಿ, ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಆಹಾರ ಪದಾರ್ಥಗಳಿಂದ ಹಿಡಿದು ದಿನನಿತ್ಯದ ಬಳಕೆಯ ವಸ್ತುಗಳವರೆಗೆ ಎಲ್ಲದರ ಮೇಲೂ ಹಣದುಬ್ಬರದ ಹೊರೆ ಹೆಚ್ಚಾಗಿದೆ. ಜನಸಾಮಾನ್ಯರ ಜೀವನ ದುಸ್ತರವಾಗಿದ್ದು, ಕುಟುಂಬಗಳ ಮಾಸಿಕ ಬಜೆಟ್ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.

ಆದ್ದರಿಂದ ಕೇಂದ್ರ ಸರ್ಕಾರವು ಜನರ ಸಂಕಷ್ಟವನ್ನು ಅರ್ಥಮಾಡಿಕೊಂಡು ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಗಣನೀಯವಾಗಿ ಕಡಿತಗೊಳಿಸಬೇಕು. ಕಚ್ಚಾ ತೈಲದ ಬೆಲೆ ಇಳಿಕೆಯ ಲಾಭವನ್ನು ನೇರವಾಗಿ ಜನರಿಗೆ ತಲುಪಿಸುವ ಮೂಲಕ ಹಣದುಬ್ಬರವನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು.

ಜನವಿರೋಧಿ ತೆರಿಗೆ ನೀತಿಗಳನ್ನು ಮುಂದುವರಿಸುವ ಬದಲು ಜನಪರ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಯ ಬಂದಿದೆ. ದೇಶದ ಕೋಟ್ಯಂತರ ಬಡ ಹಾಗೂ ಮಧ್ಯಮ ವರ್ಗದ ಜನರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಕೂಡಲೇ ಇಂಧನ ದರಗಳನ್ನು ಇಳಿಸಿ ಜನರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಬೇಕೆಂದು ಅಶೋಕ್ ಒತ್ತಾಯಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ