NEWSನಮ್ಮರಾಜ್ಯಶಿಕ್ಷಣ-

ಜ.1ರಿಂದ ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯುಸಿ ತರಗತಿಗಳು ಆರಂಭ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು:
    ರಾಜ್ಯದಲ್ಲಿ 2021ರ ಜನವರಿ 1ರಿಂದ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6 ರಿಂದ 9ನೇ ತರಗತಿವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ ಶಾಲೆ-ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ತರಗತಿಗಳನ್ನು ಪ್ರಾರಂಭಿಸಿದ ಬಳಿಕ 15 ದಿನಗಳವರೆಗೆ ಪರಿಸ್ಥಿತಿ ಅವಲೋಕಿಸಿ ನಂತರ ಇತರ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು.

ಶಾಲೆಗಳನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಿಎಂ ಸೂಚಿಸಿದರು. ರಾಜ್ಯ ಕೋವಿಡ್ 19ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಮಕ್ಕ ಳು ಶಾಲೆಗೆ ಮತ್ತು ವಿದ್ಯಾಗಮ ಕಾರ್ಯಕ್ರಮಕ್ಕೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ಕಡ್ಡಾಯ. ಅನು ಮತಿ ಪತ್ರದಲ್ಲಿ ವಿದ್ಯಾರ್ಥಿಗೆ ಕೋವಿಡ್ 19 ಸೋಂಕಿನ ಲಕ್ಷಣಗಳಿಲ್ಲವೆಂದು ದೃಢೀಕರಿಸಬೇಕು.

ಶಾಲೆ-ಕಾಲೇಜುಗಳಲ್ಲಿ ತರಗತಿ ಕೊಠಡಿಗಳನ್ನು ಡಿಸ್-ಇನ್ಫೆಕ್ಷನ್ ಮಾಡಿಸುವ ಕುರಿತು ಮುನ್ನೆಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಅರ್ಧ ದಿನ ಮಾತ್ರ ತರಗತಿ ನಡೆಯಲಿದೆ. ಒಂದು ಕೊಠಡಿಯಲ್ಲಿ ಗರಿಷ್ಠ 15 ವಿದ್ಯಾರ್ಥಿಗಳಿಗೆ ತರಗತಿ ನಡೆಸಬೇಕು.

ವಸತಿ ಶಾಲೆಗಳ ಲ್ಲಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು, ಪ್ರವೇಶ ಪಡೆಯುವ 72 ಗಂಟೆಗಳ ಅಂತರದಲ್ಲಿ ಕೋವಿಡ್-19 ಪರೀಕ್ಷೆ ಮಾಡಿಸಿ, ನೆಗೇಟಿವ್ ವರದಿ ಸಲ್ಲಿಸಬೇಕು. ಶಾಲೆ-ಕಾಲೇಜಿಗೆ ಹಾಜರಾತಿ ಕಡ್ಡಾಯ ವಲ್ಲ. ವಿದ್ಯಾರ್ಥಿಗಳು ಮನೆಯಲ್ಲಿಯೇ ಇದ್ದು ಆನ್ ಲೈನ್, ಯುಟ್ಯೂಬ್ ಚಾನೆಲ್ ಮತ್ತು ಇತರ ಮೂಲಗಳಿಂದಲೂ ಅಭ್ಯಾಸ ಮಾಡಬಹುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಬಿಸಿಯೂಟ ವಿತರಣೆ ಇರುವುದಿಲ್ಲ. ಬದಲಿಗೆ ಪ್ರಸ್ತುತ ಜಾರಿಯಲ್ಲಿರುವಂತೆ ಆಹಾರ ಸಾಮಗ್ರಿಯನ್ನು ಒದಗಿಸಲಾಗುವುದು. ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕುರಿತು ಶಿಕ್ಷಣ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಯಿತು. ವಿದ್ಯಾಗಮ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ವಾರಕ್ಕೆ ಎರಡು ಬಾರಿ ಶಾಲೆಗೆ ಹಾಜರಾಗಬೇಕಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಉಮಾಶಂಕರ್ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...