NEWSನಮ್ಮರಾಜ್ಯರಾಜಕೀಯಶಿಕ್ಷಣ-

ಸರ್ಕಾರದ ಎಡಬಿಡಂಗಿ ನಿಲುವಿನಿಂದ ಬೀದಿಗಿಳಿದ ಖಾಸಗಿ ಶಾಲೆಗಳ ಮಾಲೀಕರು: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ರಾಜ್ಯ ಸರ್ಕಾರದ ಎಡಬಿಡಂಗಿ ನಿಲುವುಗಳಿಂದಾಗಿ ವಿದ್ಯಾರ್ಥಿಗಳು, ಪೋಷಕರು ಮತ್ತು ಖಾಸಗಿ ಶಾಲೆಗಳ ಮಾಲೀಕರು ಎಲ್ಲರೂ ಬೀದಿಗಿಳಿದಿದ್ದಾರೆ. ಈ ಬಗ್ಗೆ ಸರ್ಕಾರ ಮತ್ತು ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ತಕ್ಷಣ ಸ್ಪಷ್ಟನಿರ್ಧಾರ ಕೈಗೊಂಡು ಈ ಬಿಕ್ಕಟ್ಟನ್ನು ಬಗೆಹರಿಸಿ ವಿದ್ಯಾರ್ಥಿಗಳನ್ನು ರಕ್ಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿನ ಈಗಿನ ಬಿಕ್ಕಟ್ಟಿಗೆ  ರಾಜ್ಯ ಸರ್ಕಾರ  ಮತ್ತು ಶಿಕ್ಷಣಸಚಿವರೇ ನೇರ ಹೊಣೆಗಾರರು. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಜಗಳ ತಂದು ಹಾಕಿ ಇವರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸರಣಿ ಟ್ವೀಟ್‌ಮೂಲಕ ಆರೋಪಿಸಿದ್ದಾರೆ.

ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲ. ತರಗತಿಗಳಿಲ್ಲದೆ ಇದ್ದರೂ ಪೋಷಕರಿಂದ ಪೂರ್ಣಶುಲ್ಕ ವಸೂಲಿ‌ಮಾಡಲಾಗುತ್ತಿದೆ. ಇದಕ್ಕಾಗಿ ಆನ್ ಲೈನ್ ತರಗತಿಗಳನ್ನು  ಸ್ಥಗಿತಗೊಳಿಸಿ ಪೋಷಕರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ಆದರೂ ಸರ್ಕಾರ ಕಣ್ಣುಮುಚ್ಚಿಕೊಂಡು ಕೂತಿದೆ ಎಂದು ಕಿಡಿಕಾರಿದ್ದಾರೆ.

ತರಗತಿಗಳು ನಡೆಯದೆ ಇದ್ದರೂ ಬೋಧನಾ ಶುಲ್ಕದ ಜೊತೆಯಲ್ಲಿ ಯೋಗಶಾಲೆ, ಲೈಬ್ರೆರಿ ಮತ್ತಿತರ ಪಠ್ಯೇತರ ಶುಲ್ಕ ವಸೂಲಿಗೆ ಹೊರಟಿರುವ ಖಾಸಗಿ ಶಾಲೆಗಳು ಸರ್ಕಾರದ ಪೊಳ್ಳುಬೆದರಿಕೆಗೆ ಜಗ್ಗುತ್ತಿಲ್ಲ. ಇದನ್ನು ನೋಡಿದರೆ ಸರ್ಕಾರ ಖಾಸಗಿ ಶಾಲೆಗಳ ಜೊತೆ ಷಾಮೀಲಾಗಿದೆ ಎಂದು ಆರೋಪಿಸಿದ್ದಾರೆ.

ಶಾಲೆ ಪುನರಾರಂಭದ ಬಗ್ಗೆ ಸರಣಿ ಸಭೆಗಳು, ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳ ತರಹೇವಾರಿ ಹೇಳಿಕೆಗಳು ಪೋಷಕರನ್ನು ಗೊಂದಲಕ್ಕೆ ನೂಕಿವೆ. ತಕ್ಷಣ ಸಚಿವರು ಖಾಸಗಿ ಶಾಲೆಗಳು ಮತ್ತು ಪೋಷಕರ ಸಭೆ ಕರೆದು ಪಾರದರ್ಶಕವಾಗಿ ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

 

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...