NEWSನಮ್ಮರಾಜ್ಯರಾಜಕೀಯ

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಸಲು ಆಗ್ರಹಿಸಿ ಆಮ್ ಆದ್ಮಿ ಪಕ್ಷದಿಂದ ಡಿ.23ಕ್ಕೆ “ಬೈಕ್ ತಳ್ಳು”

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕವನ್ನು ಇಳಿಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷ ಡಿ. 23 ಬುಧವಾರ ಬೆಳಿಗ್ಗೆ 11 ಗಂಟೆಗೆ ಮೈಸೂರು ಬ್ಯಾಂಕ್ ವೃತ್ತದಿಂದ ಮೌರ್ಯ ವೃತ್ತದವರೆಗೆ “ಬೈಕ್ ತಳ್ಳು” ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ ತಿಳಿಸಿದರು.

ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನರ ಸಂಕಷ್ಟಗಳಿಗೆ ಕಿವಿಗೊಡದ ಕೇಂದ್ರ ಸರ್ಕಾರ ಇದ್ದೂ ಸತ್ತಂತಿದೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದಿಂದ ಜನ ಸಾಮಾನ್ಯ ತತ್ತರಿಸಿ ಹೋಗಿದ್ದಾನೆ. ರಾಜ್ಯ ಸರ್ಕಾರವೂ ಜನರ ನೆರವಿಗೆ ನಿಲ್ಲದೆ ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದೆ ಎಂದು ಕಿಡಿಕಾರಿದರು.

ಒಬ್ಬ ವ್ಯಕ್ತಿ ಪ್ರತಿ ತಿಂಗಳು 3-5 ಸಾವಿರ ರೂ. ಹಣವನ್ನು ಪೆಟ್ರೋಲ್‌ಗೆಂದು ಖರ್ಚು ಮಾಡುತ್ತಿದ್ದಾನೆ, ಡೀಸೆಲ್ ಬೆಲೆ ಹೆಚ್ಚಳದಿಂದ ಸರಕು ಸಾಗಾಣೆ ಖರ್ಚು ಸೇರಿ ಎಲ್ಲಾ ಅಗತ್ಯ ವಸ್ತುಗಳ, ತರಕಾರಿಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಯಾವುದಕ್ಕೆ ಖರ್ಚು ಮಾಡುವುದು ಎಂದು ತಿಳಿಯದೇ ಸಾರ್ವಜನಿಕರು ಗೊಂದಲದಲ್ಲಿ ಮುಳುಗಿ ಹೋಗಿದ್ದಾರೆ ಎಂದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಆಗಿದೆ, ಪೆಟ್ರೋಲ್, ಡೀಸೆಲ್ ಮೂಲ ಬೆಲಗಿಂತ ಮುಕ್ಕಾಲು ಪಾಲು ತೆರಿಗೆಯನ್ನೇ ಹೆಚ್ಚು ಕಟ್ಟುತ್ತಿದ್ದೇವೆ ಆದ ಕಾರಣ ಈ ತೆರಿಗೆಯನ್ನು ಮೊದಲು ಕಡಿಮೆ ಮಾಡಿ ಎಂದು ಆಗ್ರಹಿಸಿದರು.

ಅರವಿಂದ ಕೇಜ್ರಿವಾಲ್ ಅವರ ನೇತೃತ್ವದ ಆಮ್ ಆದ್ಮಿ ಸರ್ಕಾರ ಕಳೆದ ಜೂನ್ ತಿಂಗಳಲ್ಲಿ ತನ್ನ ಪಾಲಿನ ತೆರಿಗೆ ಇಳಿಸಿದ ಪರಿಣಾಮ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಕ್ರಮವಾಗಿ 3, 5 ರೂಪಾಯಿ ಇಳಿಕೆ ಆಗಿತ್ತು. ಇಂತಹ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರವಾದರೂ ಜನರ ನೆರವಿಗೆ ನಿಲ್ಲಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಪಾಲಿನ ತೆರಿಗೆಯನ್ನ ಕೂಡಲೇ ಕಡಿಮೆ ಮಾಡಬೇಕು ಇಲ್ಲದಿದ್ದರೆ ಪ್ರತಿದಿನ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬೆಂಗಳೂರು ಯುವ ಘಟಕದ ಉಪಾಧ್ಯಕ್ಷೆ ಸಿಂಧು ಇದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...