NEWSನಮ್ಮರಾಜ್ಯರಾಜಕೀಯ

ನಾಳೆ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ

6 ತಾಲೂಕಿನ 126 ಗ್ರಾ.ಪಂ.ಗಳಲ್ಲಿ ಮತದಾನ, 997 ಮತಗಟ್ಟೆ, 5490 ಸಿಬ್ಬಂದಿ ನಿಯೋಜನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಕಲಬುರಗಿ: ಗ್ರಾಮ ಪಂಚಾಯಿತಿಯ ಮೊದಲನೇ ಹಂತದ ಚುನಾವಣೆಯ ಮತದಾನವು ಮಂಗಳವಾರ ಬೆಳಗ್ಗೆ 7 ರಿಂದ ಸಾಯಂಕಾಲ 5 ಗಂಟೆಯವರೆಗೆ ನಡೆಯಲಿದೆ. ಇದಕ್ಕಾಗಿ ಒಟ್ಟು 997 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಚುನಾವಣೆ ಶಾಂತಿಯುತವಾಗಿ ನಡೆಯಲು ಎಲ್ಲಾ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಮೊದಲನೇ ಹಂತದಲ್ಲಿ ಕಲಬುರಗಿ ತಾಲೂಕಿನ 28, ಆಳಂದ ತಾಲೂಕಿನ 36, ಅಫಜಲಪೂರ ತಾಲೂಕಿನ 28, ಕಮಲಾಪೂರ ತಾಲೂಕಿನ 16, ಕಾಳಗಿ ತಾಲೂಕಿನ 14 ಹಾಗೂ ಶಹಾಬಾದ ತಾಲೂಕಿನ 4 ಗ್ರಾಮ ಪಂಚಾಯತಿಗಳು ಸೇರಿದಂತೆ ಒಟ್ಟು 126 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.

ಗ್ರಾಮ ಪಂಚಾಯಿತಿ ಚುನಾವಣೆಗಾಗಿ 140 ಚುನಾವಣಾಧಿಕಾರಿಗಳು, 140 ಸಹಾಯಕ ಚುನಾವಣಾಧಿಕಾರಿಗಳು ಸೇರಿದಂತ ಒಟ್ಟು 5490 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಈ ಚುನಾವಣೆಗಾಗಿ 805 ಮೂಲ ಮತಗಟ್ಟೆ, 192 ಆಕ್ಸಲರಿ ಮತಗಟ್ಟೆ ಸೇರಿದಂತೆ ಒಟ್ಟು 997 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

31-08-2020ರ ಅರ್ಹ ಮತದಾರರ ಪಟ್ಟಿಯಂತೆ ಈ ಚುನಾವಣೆಯಲ್ಲಿ 3,69,935 ಪುರುಷರು, 3,47,635 ಮಹಿಳೆಯರು ಹಾಗೂ 64 ಇತರೆ ಮತದಾರರು ಒಳಗೊಂಡಂತೆ ಒಟ್ಟು 7,17,634 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ.

ಕಲಬುರಗಿ, ಆಳಂದ, ಅಫಜಲಪುರ, ಕಮಲಾಪುರ, ಕಾಳಗಿ ಹಾಗೂ ಶಹಾಬಾದ ತಾಲೂಕುಗಳ ಒಟ್ಟು 126 ಗ್ರಾಮ ಪಂಚಾಯತಿಗಳ ಒಟ್ಟು 2220 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿತ್ತು. ಆದರೆ 1480 ಅಭ್ಯರ್ಥಿಗಳು ಉಮೇದುವಾರಿಕೆ ಹಿಂಪಡೆದಿದ್ದು ಹಾಗೂ 141 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದರಿಂದ ಒಟ್ಟು 2079 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 5876 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.

ಕೋವಿಡ್-19 ಸುರಕ್ಷತಾ ಕ್ರಮ
ಕೋವಿಡ್-19 ಹಿನ್ನೆಲೆಯಲ್ಲಿ ಮತದಾನಕ್ಕಾಗಿ ಮತ ಕೇಂದ್ರಕ್ಕೆ ಆಗಮಿಸುವ ಎಲ್ಲಾ ಮತದಾರರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಕಡ್ಡಾಯವಾಗಿ ಸ್ಯಾನಿಟೈಜರ್ ಬಳಸಬೇಕು ಮತ್ತು ಮಾಸ್ಕ್ ಧರಿಸಬೇಕು. ಮತಗಟ್ಟೆಯಲ್ಲಿ ಮತದಾರರು ಸಾಮಾಜಿಕ ಅಂತರ ಕಾಪಾಡಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
₹35 ಟಿಕೆಟ್‌ ಪಡೆದು ಓವರ್‌ಟ್ರಾವಲ್‌ ಮಾಡಿದ್ದು ಯುವತಿ- ತನಿಖಾ ಸಿಬ್ಬಂದಿ ಮೆಮೋ ಕೊಟ್ಟಿದ್ದು ಮಾತ್ರ ನಿರ್ವಾಹಕರಿಗೆ ಅದೃಷ್ಟ ತಂದುಕೊಟ್ಟ ಕಾರಿಗೆ ಅಂತ್ಯಕ್ರಿಯೆ ನೆರವೇರಿಸಿದ ಸಂಜಯ್ ಪೋಲ್ರಾ ಕುಟುಂಬ BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ