NEWSದೇಶ-ವಿದೇಶ

ಕೊರೊನಾ ಆರ್ಭಟಕ್ಕೆ ಬ್ರೇಕ್‌ ಹಾಕಲು ಮುಂಬೈಯಲ್ಲಿ ನೈಟ್‌ ಕರ್ಫ್ಯೂ ಜಾರಿ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಮುಂಬೈ: ಮಾರಣಾಂತಿಕ ಕೊರೊನಾ ಸೋಂಕು ಮತ್ತಷ್ಟು ಹರಡದಂತೆ ತಡೆಯುವ ಸಲುವಾಗಿ ರಾತ್ರಿ ಕರ್ಫ್ಯೂವನ್ನು ಮಹಾರಾಷ್ಟ್ರ ಸರ್ಕಾರ ಸೋಮವಾರ ಸಂಜೆ ಘೋಷಿಸಿ ಅಧಿಸೂಚನೆ ಹೊರಡಿಸಿದೆ.

ಮುಂಬೈ ಸೇರಿ ಮಹಾರಾಷ್ಟ್ರದ ಇತರ ನಗರಗಳಲ್ಲಿ ಸೋಮವಾರದಿಂದ ಜನವರಿ 5 ರವರೆಗೆ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ವಿಧಿಸಲಾಗಿದೆ ಎಂದು ಹೇಳಿದೆ.

ಜತೆಗೆ ಯುರೋಪ್ ಮತ್ತು ಮಧ್ಯಪ್ರಾಚ್ಯದಿಂದ ಆಗಮಿಸುವವರಿಗೆ ಹೊಸ ಕ್ಯಾರೆಂಟೈನ್ ನಿಯಮಗಳನ್ನು ಪ್ರಕಟಿಸಲಾಗಿದ್ದು, ಪ್ರಯಾಣಿಕರನ್ನು ಕನಿಷ್ಠ 14 ದಿನ ಸ್ಥಾಂಸ್ಥಿಕ ಕ್ವಾರಂಟೈನ್​ಗೆ ಒಳಪಡಿಸುವುದನ್ನು ಕಡ್ಡಾಯ ಮಾಡಲಾಗಿದೆ.

ಉಳಿದ ಎಲ್ಲರೂ ಈ ಅವಧಿಯಲ್ಲಿ ಮನೆಯಲ್ಲೇ ಪ್ರತ್ಯೇಕವಾಗಿರಬೇಕು. ಈ ನಡುವೆ ಲಂಡನ್ ಸೇರಿದಂತೆ ಹಲವಾರು ದೇಶಗಳಿಂದ ವಿಮಾನಯಾನವನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಯುಕೆ ವಿಮಾನಗಳು ಭಾರತಕ್ಕೆ ಪ್ರವೇಶಿಸದಂತೆ ತೀರ್ಮಾನಿಸಿರುವ ಕೇಂದ್ರ ವಿಮಾನಯಾನ ಇಲಾಖೆಯ ಅಧಿಸೂಚನೆ ಬುಧವಾರದಿಂದ ಚಾಲ್ತಿಗೆ ಬರಲಿದೆ. ಆದರೆ, ಈಗಾಗಲೇ ಹೊರಟಿರುವ ಐದು ವಿಮಾನಗಳು ಇಂದು ರಾತ್ರಿ ಮುಂಬೈಗೆ ಆಗಮಿಸುವ ನಿರೀಕ್ಷೆ ಇದ್ದು, 1000ಕ್ಕೂ ಹೆಚ್ಚು ಪ್ರಯಾಣಿಕರು ಆಗಮಿಸುವ ನಿರೀಕ್ಷೆ ಇದೆ ಎಂದು ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಲಂಡನ್​ನಿಂದ ಆಗಮಿಸಲಿರುವ ಎಲ್ಲಾ ಪ್ರಯಾಣಿಕರನ್ನು ಆರ್​ಟಿ-ಪಿಸಿಆರ್​ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಈ ವೇಳೆ ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಗಳನ್ನು ಸಾಂಸ್ಥಿಕ ಕ್ವಾರಂಟೈನ್​ಗೆ ಒಳಪಡಿಸಿದರೆ, ಉಳಿದವರನ್ನು ಮನೆಯಲ್ಲೇ 7ದಿನ ಪ್ರತ್ಯೇಕತೆಯಲ್ಲಿ ಇರುವಂತೆ ಸೂಚಿಸಲಾಗುವುದು ಎಂದು ತಿಳಿಸಲಾಗಿದೆ.

ಯಾರೂ ಭಯಪಡುವ ಅಗತ್ಯವಿಲ್ಲ. ಸರ್ಕಾರ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟಿದೆ. ಸಾರ್ವಜನಿಕರು ಕಾಲ್ಪನಿಕ ಸನ್ನಿವೇಶಗಳಿಂದ ತೊಂದರೆಗೆ ಒಳಗಾಗದೆ ಸಂಪೂರ್ಣವಾಗಿ ಎಚ್ಚರದಿಂದಿರಿ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್​ ಸಲಹೆ ನೀಡಿದ್ದಾರೆ.

ಮುಂಬೈನಲ್ಲಿ ರಾತ್ರಿ ಕರ್ಫ್ಯೂ
ಇದೀಗ ಲಂಡನ್​ನಲ್ಲಿ ಹೊಸ ರೂಪಾಂತರದ ಕೊರೊನಾ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿ ರಾತ್ರಿ ಕರ್ಫ್ಯೂಗೆ ಸಿಎಂ ಸಮ್ಮತಿ ನೀಡಿದ್ದಾರೆ.

ರಾತ್ರಿ ಕರ್ಫ್ಯೂ ಅವಧಿಯಲ್ಲಿ ತರಕಾರಿಗಳು ಮತ್ತು ಹಾಲಿನ ಪೂರೈಕೆಯಂತಹ ಅಗತ್ಯ ಸೇವೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಸಮಯದಲ್ಲಿ ಐದು ಜನರಿಗಿಂತ ಹೆಚ್ಚು ಜನರು ಸೇರಲು ಅವಕಾಶ ಇಲ್ಲ ಎಂದು ಎಚ್ಚರಿಸಲಾಗಿದೆ.

ಇದಕ್ಕೂ ಮೊದಲು ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. ಈ ಸೋಂಕು ಹರಡುವುದನ್ನು ತಡೆಯಲು ಭಾನುವಾರ ಕರ್ಫ್ಯೂ ಜಾರಿಗೆ ತರಬೇಕು ಎಂದು ಅನೇಕ ತಜ್ಞರು ಮಹಾರಾಷ್ಟ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಆದರೆ, ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಈ ಎಲ್ಲಾ ಆಲೋಚನೆಗಳನ್ನೂ ತಿರಸ್ಕರಿಸಿದ್ದರು.

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...