Vijayapatha – ವಿಜಯಪಥ
Saturday, November 2, 2024
NEWSಕೃಷಿದೇಶ-ವಿದೇಶ

ರೈತರ ಸಮಸ್ಯೆ ಬಗೆಹರಿಯುವವರೆಗೂ ಬ್ರಿಟನ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ಪ್ರತಿಭಟನಾ ನಿರತ ರೈತರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ನ್ಯೂಡೆಲ್ಲಿ: ಜನವರಿ 26 ಗಣರಾಜ್ಯೋತ್ಸ ದಿನ ಹತ್ತಿರವಾಗುತ್ತಿದ್ದು, ಈ ವರ್ಷ ಬ್ರಿಟನ್ ಪ್ರಧಾನಿ ಬೋರಿಸ್​ ಜಾನ್ಸನ್ ಅವರನ್ನು ವಿಶೇಷ ಅತಿಥಿಯನ್ನಾಗಿ ಆಹ್ವಾನಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಆದರೆ, ಭಾರತದಲ್ಲಿನ ರೈತರ ಸಮಸ್ಯೆ ಬಗೆಹರಿಯುವವರೆಗೂ ಆ ಪ್ರಧಾನಿ ಭಾರತಕ್ಕೆ ಬರುವುದು ಬೇಡ ಎಂದು ಬ್ರಿಟನ್ ಸಂಸದರಿಗೆ ಪತ್ರ ಬರೆಯಲು ಹೋರಾಟ ನಿರತ ರೈತರು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಕೇಂದ್ರ ಸರ್ಕಾರ ಕೂಡಲೇ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ದೆಹಲಿಯ ಹೊರ ವಲಯದಲ್ಲಿ ಆರಂಭಿಸಿರುವ ಚಳವಳಿ 27ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ರೈತ ಮುಖಂಡರು ಮತ್ತು ಸರ್ಕಾರದ ನಡುವೆ ನಡೆದ 6 ಸುತ್ತಿನ ಮಾತುಕತೆಯೂ ವಿಫಲವಾಗಿದ್ದು, ರೈತರ ಬೇಡಿಕೆಗೆ ಸರ್ಕಾರ ಬಗ್ಗುವಂತೆ ಕಾಣುತ್ತಿಲ್ಲ. ಮತ್ತೊಂದೆಡೆ ರೈತರು ಸಹ ತಮ್ಮ ಹೋರಾಟವನ್ನು ಕೈಬಿಡುವ ಮನಸ್ಸು ಮಾಡಿಲ್ಲ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ನಡುವೆ ಜನವರಿ 26ರ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್‌ ಬರಲಿದ್ದಾರೆ ಎಂದು ಈಗಾಗಲೇ ವರದಿಯಾಗಿದೆ. ಭಾರತ ಸರ್ಕಾರವು ರೈತರ ಹಕ್ಕೊತ್ತಾಯಗಳನ್ನು ಈಡೇರಿಸುವವರೆಗೂ ಇಂಗ್ಲೆಂಡ್‌ನ ಪ್ರಧಾನಿ ಭಾರತಕ್ಕೆ ಬರದಂತೆ ತಡೆಯಬೇಕೆಂದು ಅಲ್ಲಿನ ಸಂಸದರಿಗೆ ಪತ್ರ ಬರೆದು ಕೋರುತ್ತೇವೆ ಎಂದು ಪಂಜಾಬ್‌ನ ರೈತ ಮುಖಂಡ ಕುಲವಂತ್‌ ಸಿಂಗ್ ಸಂಧು ತಿಳಿಸಿದ್ದಾರೆ.

ಮಂಗಳವಾರ ಸಿಂಘೂ ಗಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಇಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ರವರೊಂದಿಗೆ ರೈತ ಮುಖಂಡರ ಸಭೆ ನಡೆಯಲಿದೆ. ಕೆಂದ್ರ ಸರ್ಕಾರದ ಪ್ರಸ್ತಾಪಗಳ ಕುರಿತು ಅಲ್ಲಿ ಚರ್ಚೆ ನಡೆಯಲಿದೆ. 3 ಕೃಷಿ ಕಾನೂನುಗಳು ಬೇಷರತ್ ಆಗಿ ಹಿಂಪಡೆಯಬೇಕೆಂಬುದು ನಮ್ಮ ಆಗ್ರಹ. ಸಭೆಯ ನಂತರ ಮುಂದಿನ ಹೋರಾಟದ ರೂಪುರೇಷೆಗಳನ್ನು ತಿಳಿಸುತ್ತೇವೆ ಎಂದಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ ಮತ್ತು ಕಿಸಾನ್ ಸಂಘರ್ಷ ಸಮಿತಿಯ ಸದಸ್ಯರೊಂದಿಗೆ ಕೃಷಿ ಭವನದಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಭೆ ನಡೆಸುತ್ತಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಇನ್ನು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತ ಮುಖಂಡರು ಹೋರಾಟವನ್ನು ತೀವ್ರಗೊಳಿಸಲು ಡಿಸೆಂಬರ್ 27 ರಂದು ಪ್ರಧಾನಿ ನರೇಂದ್ರ ಮೋದಿಯವರು ಮನ್ ಕಿ ಬಾತ್ ನಡೆಸುವ ವೇಳೆ ಜನ ದೇಶಾದ್ಯಂತ ಮನೆಯಿಂದ ಹೊರಬಂದು ತಟ್ಟೆ ಬಾರಿಸುವಂತೆ ಕರೆ ನೀಡಿದ್ದಾರೆ.

ರೈತ ಹೋರಾಟ ಬೆಂಬಲಿಸಿ ಪ್ರತಿದಿನ 11 ಜನರ ತಂಡ 24 ಗಂಟೆಗಳ ಉಪವಾಸ ಸತ್ಯಾಗ್ರಹ ನಡೆಸಿ. ನಂತರ ಅದನ್ನು ಮತ್ತೆ 11 ಜನರ ಮುಂದುವರಿಸುವುದು. ಈ ರೀತಿ ರಿಲೇ ಉಪವಾಸ ಸತ್ಯಾಗ್ರಹ ಕೈಗೊಳ್ಳೋಣ ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷ ಯೋಗೇಂದ್ರ ಯಾದವ್ ಕರೆ ನಿಡಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ