Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಪೆಟ್ರೋಲ್, ಡೀಸೆಲ್‌ ಬೆಲೆ, ತೆರಿಗೆ ಇಳಿಸಲು ಆಗ್ರಹಿಸಿ ಆಮ್ ಆದ್ಮಿ ಪಕ್ಷದಿಂದ “ಬೈಕ್ ತಳ್ಳು” ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ರಾಜ್ಯ ಸರ್ಕಾರವೂ ಜನರ ನೆರವಿಗೆ ನಿಲ್ಲದೆ ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದೆ. ಈ ಕೂಡಲೇ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸುಂಕವನ್ನು ಇಳಿಸಬೇಕು ಎಂದು ಆಗ್ರಹಿಸಿ ಕೇಂದ್ರ ಬಿಜೆಪಿ ಮತ್ತು ರಾಜ್ಯ ಸರ್ಕಾರದ ವಿರುದ್ದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ನಗರದ ಮೌರ್ಯ ವೃತ್ತದಲ್ಲಿ ಇಂದು “ಬೈಕ್ ತಳ್ಳು” ವಿನೂತನ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಮನೆಮುರುಕ ಕೇಂದ್ರ ಬಿಜೆಪಿ ಹಾಗೂ ರಾಜ್ಯ ಸರ್ಕಾರದ ನಿರ್ಧಾರಗಳಿಂದ ಯಾರ ಮನೆಯೂ ಉದ್ದಾರವಾಗಿಲ್ಲ, ಎಲ್ಲಾ ಹಂತದಲ್ಲೂ ಜನ ಸಾಮಾನ್ಯರ ಕತ್ತು ಹಿಸುಕಿ ಕೊಲ್ಲಲಾಗುತ್ತಿದೆ. ಭಾರತದ ಇತಿಹಾಸದಲ್ಲೇ ಅತ್ಯಂತ ಹೆಚ್ಚಿನ ಬೆಲೆಗೆ ಪೆಟ್ರೋಲ್ ಬೆಲೆ ಹೆಚ್ಚಳ ಮಾಡಿ ಜನರನ್ನು ದೋಚಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವರ್ಷ ಇದೇ ಹೊತ್ತಿನಲ್ಲಿ ಕಚ್ಚಾತೈಲದ ಬೆಲೆ 62 ಡಾಲರ್ ಇತ್ತು ಈಗ 40 ಡಾಲರ್‌ಗೆ ಇಳಿದಿದೆ ಆದರೂ ಪೆಟ್ರೋಲ್ ಬೆಲೆ ₹86 ರೂಪಾಯಿಗಿಂತ ಹೆಚ್ಚಿದೆ. ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ “ತಿನ್ನಲ್ಲ, ತಿನ್ನಲು ಬಿಡುವುದಿಲ್ಲ” ಎಂದು ಭಜನೆ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಪ್ರಗತಿ ಸಾಧಿಸಿ ಮುಂದಕ್ಕೆ ಹೋಗುತ್ತಿದ್ದ ದೇಶವನ್ನು ಮೋದಿ- ಅಂಬಾನಿ, ಅದಾನಿ ಜೋಡಿ ಹಿಂದಕ್ಕೆ ತಳ್ಳುತ್ತಿದೆ ಎಂದರು

ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಪೆಟ್ರೋಲ್‌ಅನ್ನು 40 ರೂಪಾಯಿಗೆ ನೀಡಬಹುದು ಎಂದು ಬಹಿರಂಗವಾಗಿಯೇ ಹೇಳಿದ್ದಾರೆ. ಅಲ್ಲದೇ ಕಚ್ಚಾ ತೈಲವನ್ನು ಸಂಸ್ಕರಿಸಲು ಕೇವಲ 30 ರೂಪಾಯಿ ಖರ್ಚಾಗುತ್ತದೆ ಎಂದಿದ್ದಾರೆ. ಹಾಗಾದರೆ ಸರ್ಕಾರಕ್ಕೂ ಕಳ್ಳನಿಗೂ ಏನು ವ್ಯತ್ಯಾಸ ಎಂದು ಪ್ರಶ್ನಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಕಣ್ಣು, ಕಿವಿ ಏನೂ ಕೇಳಿಸದ ಕಾರಣ ನಮ್ಮ ಪ್ರತಿಭಟನೆ ಅವರಿಗೆ ಕೇಳಿಸುವುದಿಲ್ಲ ಆದ ಕಾರಣ ನಾವು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜ್ಯದ ಪಾಲಿನ ತೆರಿಗೆಯನ್ನಾದರೂ ಕಡಿಮೆ ಮಾಡಿ ಎಂದು ಆಗ್ರಹಿಸುತ್ತಿದ್ದೇವೆ ಎಂದರು.

ಪ್ರತಿಭಟನೆಯಲ್ಲಿ ಸಹ ಸಂಚಾಲಕ ವಿಜಯ್ ಶರ್ಮ, ಮಾಧ್ಯಮ ಸಂಚಾಲಕ ಜಗದೀಶ್ ಸದಂ, ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ಉಪಾಧ್ಯಕ್ಷರಾದ ಸುರೇಶ್ ರಾಥೋಡ್, ನಾಗಣ್ಣ.ಕೆ.ಬಿ, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಫಣಿರಾಜ್ ಎಸ್. ವಿ ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್