- ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬುದ್ದಿ ಇಲ್ಲದ ಸರ್ಕಾರ ಘಳಿಗೆಗೊಂದು ಗಂಟೆಗೊಂಡು ನಿರ್ಧಾರ ತೆಗೆದುಕೊಳ್ಳವ ಮೂಲಕ ಕರ್ಫ್ಯೂ ಅನ್ನೋ ಅರ್ಥವನ್ನೇ ಬುಡಮೇಲು ಮಾಡುವಂತೆ ಮಾಡಿದೆ.
ಬ್ರಿಟನ್ನಲ್ಲಿ ಮತ್ತೆಯಾಗಿರುವ ಹೊಸ ರೂಪಾಂತರದ ಕೊರೊನಾ ವೈರಸ್ ಆತಂಕದ ಹಿನ್ನೆಲೆ ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿತ್ತು. ರಾತ್ರಿ 10 ರಿಂದ ಬೆಳಗ್ಗೆ 6ರವರೆಗೆ ಕರ್ಫ್ಯೂ ಜಾರಿ ಮಾಡಿ ಸರ್ಕಾರ ಇಂದು ಮಧ್ಯಾಹ್ನ ಆದೇಶಿಸಿತ್ತು.
ಆದರೆ, ವರ್ಷಾಂತ್ಯದಲ್ಲಿ ಈ ರೀತಿ ಕರ್ಫ್ಯೂ ಜಾರಿ ಮಾಡುವುದರಿಂದ ಬಾರ್ ಅಂಡ್ ರೆಸ್ಟೋರೆಂಟ್, ಓಲಾ, ಉಬರ್ ಸೇರಿ ಅನೇಕ ಉದ್ಯಮಗಳಿಗೆ ನಷ್ಟವಾಗಲಿದೆ ಎಂಬ ವಿರೋಧ ಎಲ್ಲೆಡೆ ವ್ಯಕ್ತವಾಗಿತ್ತು. ಎಂಬ ನೆಪವನ್ನೇ ಮುಂದಿಟ್ಟುಕೊಂಡು ಸಂಜೆವೇಳೆಗೆ ತನ್ನ ನಿರಾರವನ್ನು ಬದಲಾವಣೆ ಮಾಡಿ ಅದರಂತೆ ಎಲ್ಲರೂ ನಡಟೆದುಕೊಳ್ಳಬೇಕು ಎಂದು ಹೇಳಿಕೆ ನೀಡಿದೆ.
ಇನ್ನು ಈ ನೈಟ್ ಕರ್ಫ್ಯೂನಿಂದಾಗಿ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆ ಸಮಯದ ಅಧಿಕ ವಹಿವಾಟಿಗೆ ಹೊಡೆತ ಬೀಳಲಿದೆ. ಎಂಬ ಕಾರಣವನ್ನು ಈ ಕರ್ಫ್ಯೂ ಅವಧಿಯನ್ನು ಒಂದೂವರೆ ಗಂಟೆಗಳ ಕಾಲ ತಡವಾಗಿ ಹೇರಿದೆ. ಇದಕ್ಕೆ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರು ಸೇರಿ ಹಲವರು ಬೇಡಿಕೆ ಇಟ್ಟಿದ್ದರು ಎಂಬ ಸಬೂಬು ನೀಡಿದೆ.
ಇನ್ನು ಇಂದಿನಿಂದ ಬದಲು ನಾಳೆಯಿಂದ ಅಂದರೆ ಡಿ. 24ರಿಂದ ಜ. 1ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ರಾತ್ರಿ 10ರ ಬದಲು ರಾತ್ರಿ 11 ರಿಂದ ಬೆಳಗ್ಗೆ 5ರವರೆಗೆ ಈ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಾವು ಮಧ್ಯಾಹ್ನ ನೀಡಿದ ಹೇಳಿಕೆಯನ್ನೇ ಸಂಜೆ ವೇಳೆಗೆ ಬದಲಿಸಿ ಕೊಟ್ಟಿದ್ದಾರೆ.
ಈ ಕುರಿತು ತಮ್ಮ ಟ್ವೀಟರ್ನಲ್ಲಿ ಸ್ಪಷ್ಟಪಡಿಸಿರುವ ಸಿಎಂ ಅವರು, ಇದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂವನ್ನು ನಾಳೆಯಿಂದ ಅಂದರೆ ದಿನಾಂಕ 24ರಿಂದ ಜನವರಿ 1ರವರೆಗೆ ಜಾರಿ ಮಾಡಲಾಗಿದೆ. ರಾತ್ರಿ 10ರ ಬದಲಿಗೆ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಈ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದಿದ್ದಾರೆ.
ಅಲ್ಲದೇ ಈ ನೈಟ್ ಕರ್ಫ್ಯೂ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿ. 24ರಂದು ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಕ್ಕೆ ಯಾವುದೇ ಅಡ್ಡಿಯಾಗದಂತೆ ಕ್ರಮ ವಹಿಸಲಾಗಿದೆ. ಈ ಸಂದರ್ಭದಲ್ಲಿ ಮಿಡ್ನೈಟ್ ಮಾಸ್ಗೆ ಯಾವುದೇ ಅಡಚಣೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ನೈಟ್ ಕರ್ಫ್ಯೂ ವೇಳೆ ಅಗತ್ಯ ಸೇವೆ ಹೊರತು ಪಡಿಸಿ ಉಳಿದೆಲ್ಲಾ ಸೇವೆಗೆ ನಿರ್ಬಂಧ ವಿಧಿಸಲಾಗಿದೆ. ಬಸ್, ರೈಲು, ವಿಮಾನ ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ. ಆಟೋ, ಟ್ಯಾಕ್ಸಿಗಳಿಗೆ ಪಿಕಪ್- ಡ್ರಾಪ್ ಗಳಿಗೆ ಅನುಮತಿ ನೀಡಲಾಗಿದೆ.