Vijayapatha – ವಿಜಯಪಥ
Friday, November 1, 2024
NEWSಆರೋಗ್ಯನಮ್ಮರಾಜ್ಯರಾಜಕೀಯ

ನನಗೆ ಸಂಸದ ಸುರೇಶ್ ಸರ್ಟಿಫಿಕೇಟ್ ಬೇಕಿಲ್ಲ: ಸಚಿವ ಸುಧಾಕರ್ ತಿರುಗೇಟು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಸಂಸದ ಡಿ.ಕೆ.‌ ಸುರೇಶ್ ಸರ್ಟಿಫಿಕೇಟ್ ನನಗೆ ಬೇಕಿಲ್ಲ. ಅವರ ಹಿನ್ನೆಲೆಯೇನು ಎಂದು ನಾನು ಹೇಳಲು ಹೋಗುವುದಿಲ್ಲ ಎಂದು ಸುಧಾಕರ್ ನಾಲಾಯಕ್ ಮಂತ್ರಿ ಎಂಬ ಸುರೇಶ್ ಹೇಳಿಕೆಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಸುರೇಶ್‌ ಅವರ ಹಿನ್ನೆಲೆ ಬಗ್ಗೆ ಜನರಿಗೆ ಗೊತ್ತಿದೆ. ಅವರ ಹೇಳಿಕೆಯಿಂದಲೇ ಅವರ ಅಭಿರುಚಿ ಏನೆಂಬುದು ಗೊತ್ತಾಗುತ್ತಿದೆ. ನನ್ನ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ. ಹೀಗಾಗಿ ಅವರಿಂದ ನಾನು ಹೇಳಿಸಿಕೊಳ್ಳೋ ಅಗತ್ಯವಿಲ್ಲ. ಅವರ ಸರ್ಟಿಫಿಕೇಟ್ ನನಗೇನೂ ಬೇಕಾಗಿಲ್ಲ ಎಂದು ಕಿಡಿಕಾರಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನೈಟ್ ಕರ್ಪ್ಯೂ ಬಗ್ಗೆ ಇಂದು ಸಿಎಂ ಜತೆ ಯಾವುದೇ ಚರ್ಚೆ ಆಗಿಲ್ಲ. ಶಿಕ್ಷಣ ಸಚಿವರು ಮತ್ತು ನಮ್ಮ ನಡುವೆ ಏನೂ ಭಿನ್ನಾಭಿಪ್ರಾಯ ಇಲ್ಲ. ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ನಿನ್ನೆ ಸಿಎಂ ನೇತೃತ್ವದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ರಾತ್ರಿ 11 ಗಂಟೆ ಬಳಿಕ ಬಾರ್, ಪಬ್ ಗಳಲ್ಲಿ ಹಬ್ಬ, ಹೊಸ ವರ್ಷ ಆಚರಣೆ ವೇಳೆ ಜನರು ಸೇರುತ್ತಾರೆ.‌ ಇದನ್ನು ನಿಯಂತ್ರಿಸಬೇಕು ಎಂಬುದು ನಮ್ಮ ಉದ್ದೇಶ ಎಂದರು.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ವಸತಿ ವ್ಯವಸ್ಥೆ ಇಲ್ಲದ ಕಾರಣ ವೈದ್ಯರು ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ, ಸದ್ಯದಲ್ಲೇ ವೈದ್ಯರು, ಸಿಬ್ಬಂದಿಗೆ ವಸತಿ ವ್ಯವಸ್ಥೆ ಕೂಡ ಮಾಡಲಾಗುತ್ತದೆ. 6ರಿಂದ 8 ಕೋಟಿ ರೂ. ವೆಚ್ಚದಲ್ಲಿ ಮಾದರಿ ಆರೋಗ್ಯ ಕೇಂದ್ರಗಳು ನಿರ್ಮಾಣ ಆಗಲಿವೆ. 30 ಸಾವಿರ ಜನರಿಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಗೃಹ ಸುಧಾಕರ್ ಹೇಳಿದರು.

ಆರೋಗ್ಯ ಇಲಾಖೆಯಿಂದ ಸಿಎಂ ನಿರ್ದೇಶನದಂತೆ ಆರೋಗ್ಯ ಇಲಾಖೆಯ ಸುಧಾರಣೆ ಮತ್ತು ಉಚಿತ ಗುಣಮಟ್ಟದ ಚಿಕಿತ್ಸೆ ಸಿಗಬೇಕು ಎಂದು ವ್ಯವಸ್ಥೆ ಮಾಡಿದ್ದೇವೆ. ಇದಕ್ಕೆ ಕೂಲಂಕಷವಾಗಿ ಸಮಿತಿ ಮೂಲಕ ಸಿಎಂಗೆ ಪ್ರಾತ್ಯಕ್ಷಿಕೆ ನೀಡಿದ್ದೇವೆ. ಕೇರಳ, ತಮಿಳುನಾಡಿನಲ್ಲಿ ಆರೋಗ್ಯ ವ್ಯವಸ್ಥೆ ಉತ್ತಮವಾಗಿದೆ . ನಮ್ಮ ರಾಜ್ಯದಲ್ಲಿ ಕೂಡ ದೇಶಕ್ಕೆ ಮಾದರಿಯಾಗುವ ಆರೋಗ್ಯ ವ್ಯವಸ್ಥೆ ಬೇಕು ಎಂದು ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ. ಆ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಇನ್ನು ರಾತ್ರಿ 11 ಗಂಟೆ ಬಳಿಕ ಅಂತಹ ಯಾವುದೇ ಚಟುವಟಿಕೆ ಇರುವುದಿಲ್ಲ. ನಾನು, ಸುರೇಶ್ ಕುಮಾರ್, ಲಕ್ಷ್ಮಣ ಸವದಿ ಸಹೋದರರಂತೆ ಇದ್ದೇವೆ. ಸಿಎಂ ನೇತೃತ್ವದಲ್ಲಿ ಸಮನ್ವಯತೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ನಾನು ಹಾಗೂ ಸುರೇಶ್ ಕುಮಾರ್ ಇಬ್ಬರೂ ಸಮನ್ವಯತೆಯಿಂದ ಕೆಲಸ ಮಾಡುತ್ತಿದ್ದೇವೆ. ಮಕ್ಕಳ ವಿದ್ಯಾಭ್ಯಾಸ ದೃಷ್ಟಿಯಿಂದ ಶಾಲೆ ಆರಂಭದ ಬಗ್ಗೆ ತೀರ್ಮಾನ ಮಾಡಿದ್ದೇವೆ. ನಮ್ಮಿಬ್ಬರ ಮಧ್ಯೆ ಯಾವುದೇ ರೀತಿಯ ಹೊಂದಾಣಿಕೆಯ ಸಮಸ್ಯೆ ಇಲ್ಲ ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ