Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ದೇಶದ ಮಾನ ಹರಾಜು ಹಾಕಿದ ರಾಜ್ಯ ಬಿಜೆಪಿ ಸರ್ಕಾರ: ಮೋಹನ್ ದಾಸರಿ ಆಕ್ರೋಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಕೊರೊನಾ ಆತಂಕದಿಂದಾಗಿ ಚೈನಾ ಬಿಟ್ಟು ಭಾರತದ ಕಡೆ ಮುಖಮಾಡುತ್ತಿದ್ದ ವಿಶ್ವದ ಪ್ರತಿಷ್ಠಿತ ಕಂಪೆನಿಗಳು ವಿಸ್ಟ್ರಾನ್ ಹಾಗೂ ಟೊಯೋಟಾ ಕಂಪೆನಿಗಳ ಬಿಕ್ಕಟ್ಟು ವಿಚಾರದಲ್ಲಿ ಕರ್ನಾಟಕ ಸರ್ಕಾರ ನಡೆದುಕೊಂಡ ಬೇಜವಾಬ್ದಾರಿ ನೀತಿಯಿಂದ ಭಾರತಕ್ಕೆ ಬರಲು ಹಿಂದೇಟು ಹಾಕುತ್ತಿವೆ. ಇದರಿಂದ ದೇಶ ಮತ್ತು ಕರ್ನಾಟಕದ ಮಾನ ರಾಷ್ಟ್ರ ಮಟ್ಟದಲ್ಲಿ ಹರಾಜಾಗಿದೆ ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ವೈಫಲ್ಯವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರೆ ಹೊರಬೇಕು, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕಾರ್ಮಿಕ ಮಂತ್ರಿ ಶಿವರಾಂ ಹೆಬ್ಬಾರ್ ಅಂತಹ ನಾಲಾಯಕ್ ಮಂತ್ರಿಗಳನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂದು ಆಗ್ರಹಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೊರೊನಾ ನಂತರ ಆಗಬಹುದಾಗಿದ್ದ ಔದ್ಯೋಗಿಕ ಕ್ರಾಂತಿಗೆ ಕರ್ನಾಟಕದಲ್ಲಿ ನಡೆದ ಘಟನೆಗಳಿಂದ ಲಕ್ಷಾಂತರ ಉದ್ಯೋಗ ನಷ್ಟವಾಗಿದೆ. 60 ಲಕ್ಷ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಬೊಗಳೆ ಬಿಟ್ಟ ಮುಖ್ಯಮಂತ್ರಿಗಳೇ ಮೊದಲು ಟೊಯೋಟಾ ಹಾಗೂ ವಿಸ್ಟ್ರಾನ್ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ 20 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳ ಭವಿಷ್ಯ ಕಾಪಾಡಿ ಎಂದು ಹೇಳಿದರು.

ಅಸಮರ್ಥ ಕೈಗಾರಿಕಾ, ಕಾರ್ಮಿಕ ಸಚಿವರಿಂದ ರಾಜ್ಯದಲ್ಲಿ ಔದ್ಯೋಗಿಕ ಕ್ರಾಂತಿ ನಿರೀಕ್ಷಿಸುವುದು ಅಸಾಧ್ಯ. ವಿಸ್ಟ್ರಾನ್‌ ಘಟನೆಯಿಂದ ಚೈನಾ ಜನತೆ ನಮ್ಮ ದೇಶವನ್ನು ಆಡಿಕೊಳ್ಳುವಂತಾಗಿದೆ, ಈ ಕಳಂಕಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ. ಅಲ್ಲದೇ ಸರ್ಕಾರದಿಂದ ಹೂಡಿಕೆದಾರರಿಗೆ ಸರಿಯಾದ ಮಾರ್ಗಸೂಚಿಯೇ ಇಲ್ಲದಂತಾಗಿದೆ. ಎಬಿಸಿ ಸ್ಕೀಮ್ (ಅಫಿಡವಿಟ್ ಬೇಸ್ಡ್ ಕ್ಲಿಯರೆನ್ಸ್) ಎನ್ನುವ ಕಣ್ಣೊರೆಸುವ ಯೋಜನೆ ತಂದು ಉದ್ಯೋಗದಾತರಿಗೂ ವಂಚಿಸಲಾಗುತ್ತಿದೆ ಎಂದರು.

ಬೆಂಗಳೂರು ನಗರ ಉಪಾಧ್ಯಕ್ಷರಾದ ಕೆ.ಬಿ.ನಾಗಣ್ಣ ಮಾತನಾಡಿ, ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರು ಕಾರ್ಮಿಕರ ಬಿಕ್ಕಟ್ಟುಗಳಿಗೂ ಹಾಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಇದನ್ನು ಕಾರ್ಮಿಕ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳಲಿ ಎಂದು ಹೇಳುವಷ್ಟು ಮತಿಹೀನರಾಗಿದ್ದಾರೆ. ಇಂತಹ ಮಂತ್ರಿಯನ್ನು ಪಡೆದ ನಾವೇ ಧನ್ಯರು ಎಂದು ವ್ಯಂಗ್ಯವಾಡಿದರು.

ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಅವರೇ, ಬೆಳಗಾವಿ ಚುನಾವಣೆಯಲ್ಲಿ ಗೆದ್ದು ಕೇಂದ್ರ ಸಚಿವರಾಗುವ ಕನಸನ್ನು ಬಿಡಿ, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರರೇ ಎಲ್ಲಿ ಕಾಣೆಯಾಗಿದ್ದೀರಿ ಇಲ್ಲಿ 20 ಸಾವಿರ ನೌಕರರ ಹಾಗೂ ಅವರ ಕುಟುಂಬ ವರ್ಗದವರು ಅಭದ್ರತೆಯಲ್ಲಿ ದಿನದೂಡುತ್ತಿದ್ದಾರೆ ಚಳಿಯಲ್ಲಿ ಬೆಚ್ಚಗೆ ಮಲಗಿದ್ದರೆ ಎದ್ದು ಬನ್ನಿ ಎಂದು ಕಿಡಿಕಾರಿದರು.

ವಿಸ್ಟ್ರಾನ್ ಕಂಪನಿ ದ್ವಂಸ ಪ್ರಕರಣದಲ್ಲಿ ಹೊರಗಿನವರ ಕೈವಾಡವಿದೆ, ಕೈಗಾರಿಕೆಗಳಿಗೆ ಭದ್ರತೆ ಒದಗಿಸುವಲ್ಲಿ ಗೃಹ ಇಲಾಖೆಯೂ ಸಹ ವಿಫಲಾಗಿದೆ ಅಲ್ಲದೇ ಕಾರ್ಮಿಕ ನಾಯಕರನ್ನು ಸುಖಾ ಸುಮ್ಮನೆ ಬಂಧಿಸುತ್ತಿರುವುದನ್ನು ಆಮ್ ಆದ್ಮಿ ಪಕ್ಷ ಸಹಿಸುವುದಿಲ್ಲ. ಈ ವೈಫಲ್ಯದ ಹೊಣೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೊರಬೇಕು ಎಂದರು.

ನಮ್ಮ ಕರ್ನಾಟಕದ ಮಾನವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿದ ರಾಜ್ಯ ಬಿಜೆಪಿ ಸರ್ಕಾರವನ್ನು ಈ ರಾಜ್ಯದ ಜನ ಕ್ಷಮಿಸುವುದಿಲ್ಲ, ಕಾರ್ಮಿಕರ ಕಣ್ಣೀರು ನಿಮ್ಮನ್ನು ಉಳಿಸದೇ ಬಿಡುವುದಿಲ್ಲ ಎಂದು ಹೇಳಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ