- ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಡಿಸೆಂಬರ್ ತಿಂಗಳೊಂದರಲ್ಲೇ ಎರಡು ಬಾರಿ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ ಮಾಡಿ ಜನರ ಸುಲಿಗೆ ಮಾಡುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ನಾಳೆ (ಶನಿವಾರ 26) ಬೆಳಗ್ಗೆ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದಿಂದ ನಗರದ ಮೌರ್ಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ ಮಾಹಿತಿ ನೀಡಿದರು.
ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲಾಕ್‌ಡೌನ್ ನೆಪ ಮಾಡಿಕೊಂಡು ಸಬ್ಸಿಡಿ ನೀಡುವುದನ್ನು ನಿಲ್ಲಿಸಿರುವ ಸರ್ಕಾರ ನೇರವಾಗಿ 20 ಸಾವಿರ ಕೋಟಿ ರೂ. ಉಳಿತಾಯ ಮಾಡಿದೆ ಆದರೂ ಬೆಲೆ ಹೆಚ್ಚಳ ಏಕೆ, ಅಗ್ಗವಾಗಿ ಸಿಗುವ ಸೌದೆಗಾದರೂ ಸಬ್ಸಿಡಿ ಕೊಡು ಗುರು ಎಂದು ವ್ಯಂಗ್ಯವಾಡಿದರು.
ಒಲೆಯಲ್ಲಿ ಅಡುಗೆ ಮಾಡುವುದರಿಂದ ಪರಿಸರ ಮಾಲಿನ್ಯ ತಪ್ಪಿಸಬಹುದು ಎಂದು ಹೇಳಿ ಗ್ಯಾಸ್ ವಿತರಿಸಿದ ಮೋದಿಯವರು ಈಗ ಬಡವರನ್ನು ಸುಲಿಗೆ ಮಾಡುತ್ತಿದ್ದಾರೆ. ಆದ ಕಾರಣ ನಾಳೆ ಸೌದೆ ಒಲೆಯಲ್ಲಿ ಪಕೋಡ, ಟೀ ತಯಾರಿಸಿ ಮಾರಾಟ ಮಾಡಲಾಗುತ್ತದೆ, ಈ ಹಣವನ್ನು ಜನರಿಗೆ ಸಬ್ಸಿಡಿ ನೀಡಿ ಎಂದು ನೀಡಲಾಗುತ್ತದೆ ಎಂದು ಪ್ರತಿಭನೆಯ ಸ್ವರೂಪ ತಿಳಿಸಿದರು.
ಕೇಂದ್ರ ಬಿಜೆಪಿ ಸರ್ಕಾರದ ಧೋರಣೆ ಏನು ಎಂಬುದೇ ಅರ್ಥವಾಗುತ್ತಿಲ್ಲ, ಈ ದೇಶವನ್ನು ಸೂಪರ್ ಪವರ್ ಮಾಡುತ್ತೇವೆ ಎಂದು ಹೇಳುತ್ತಲೇ ಬಿಕಾರಿಗಳನ್ನಾಗಿ ಮಾಡುತ್ತಿದೆ, ಕಿಂಚಿತ್ತೂ ದೇಶ ಭಕ್ತಿ ಇಲ್ಲದ ಜನರಿಂದ ಪ್ರಗತಿ ನಿರೀಕ್ಷಿಸಲು ಸಾಧ್ಯವೇ ಎಂದರು.
ಬೆಂಗಳೂರು ಯುವ ಘಟಕದ ಉಪಾಧ್ಯಕ್ಷೆ ಸಿಂಧು ರಾವ್ ಇದ್ದರು.