- ವಿಜಯಪಥ ಸಮಗ್ರ ಸುದ್ದಿ
ಹೈದರಾಬಾದ್: ಕಾಲಿವುಡ್ ನಟ ರಜಿನಿಕಾಂತ್ ಅನಾರೋಗ್ಯದಿಂದ ಇಂದು ಹೈದರಾಬಾದ್‌ನಲ್ಲಿರುವ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿಜಯಪಥ ಹೊಸ ಆಪ್ ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್‌ಲೋಡ್ ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/details?id=manyathy.vijayapatha.app
ಹೈದರಾಬಾದ್‌ನಲ್ಲಿ ಸಿನಿಮಾ ಚಿತ್ರೀಕರಣದಲ್ಲಿದ್ದಾಗ, ಅವರ ಆರೋಗ್ಯದಲ್ಲಿ ಏರುಪೇರಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತೊದೊತ್ತಡದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ರಜಿನಿ ಅವರನ್ನು ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಜತೆಗೆ ರಜಿನಿಕಾಂತ್ ಅವರಿಗೆ ಕೊರೊನಾ ಪರೀಕ್ಷೆ ಸಹ ಮಾಡಿದ್ದು, ಅದು ನೆಗೆಟಿವ್ ಬಂದಿದೆ. ಆದರೆ, ಶುಕ್ರವಾರ ಬೆಳಗ್ಗೆ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಚಿಕಿತ್ಸೆ ನೀಡುತ್ತಿರುವ ಅಪೊಲೊ ಆಸ್ಪತ್ರೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ರಜಿನಿ ಅವರಿಗೆ ರಕ್ತದೊತ್ತಡದಲ್ಲಿ ಏರುಪೇರಿರುವುದು ತಿಳಿದು ಬಂದಿದೆ. ಅದಕ್ಕೆ ಚಿಕಿತ್ಸೆ ನೀಡುತ್ತಿರುವುದಾಗಿಯೂ ವೈದ್ಯರು ತಿಳಿಸಿದ್ದಾರೆ.
ಡಿ.22ರಂದು ರಜಿನಿ ಅವರಿಗೂ ಕೊರೊನಾ ಪರೀಕ್ಷೆ ಮಾಡಿದ್ದು, ಅದು ನೆಗೆಟಿವ್ ಬಂದಿದೆ. ಜತೆಗೆ ಅವರಿಗೆ ಕೊರೊನಾದ ಯಾವುದೇ ಲಕ್ಷಣಗಳಿಲ್ಲ. ಕಳೆದ 10 ದಿನಗಳಿಂದ ರಜಿನಿಕಾಂತ್ ತಮ್ಮ ಬಹುನಿರೀಕ್ಷಿತ ಸಿನಿಮಾ ಅನ್ನಾತ್ತೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಈ ವೇಳೆ ಸೆಟ್ನಲ್ಲಿರುವ ಹಲವರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ರಕ್ತದೊತ್ತಡವನ್ನು ಹೊರತುಪಡಿಸಿ ಮತ್ತಾವುದೇ ಸಮಸ್ಯೆ ಕಾಣಿಸುತ್ತಿಲ್ಲ ಎಂದಿರುವ ವೈದ್ಯರು, ನಟನ ಆರೋಗ್ಯದ ಬಗ್ಗೆ ನಿಗಾ ವಹಿಸಲು ಪ್ರತ್ಯೇಕವಾದ ವೈದ್ಯರ ತಂಡವನ್ನು ನೇಮಿಸಿರುವುದಾಗಿ ತಿಳಿಸಿದ್ದಾರೆ.
ವಿಜಯಪಥ ಹೊಸ ಆಪ್ ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್‌ಲೋಡ್ ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/details?id=manyathy.vijayapatha.app
ಸನ್ ಪಿಕ್ಚರ್ಸ್ ನಿರ್ಮಾಣದ ಅನ್ನಾತ್ತೆ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಕೀರ್ತಿ ಸುರೇಶ್ ಹಾಗೂ ನಯನತಾರಾ ನಾಯಕಿಯರಾಗಿ ಅಭಿನಯಿಸುತ್ತಿದ್ದು, ಖುಷ್ಬು ಸುಂದರಂ, ಜಾಕಿ ಶ್ರಾಫ್ ಹಾಗೂ ಪ್ರಕಾಶ್ ರಾಜ್ ಸಹ ತಾರಾಗಣದಲ್ಲಿದ್ದಾರೆ.
ಇಷ್ಟೊತ್ತಿಗಾಗಲೇ ಅನ್ನಾತ್ತೆ ಸಿನಿಮಾದ ಚಿತ್ರೀಕರಣ ಪೂರ್ಣಗೊಳ್ಳಬೇಕಿತ್ತು. ಆದರೆ, ಕೊರೊನಾ ಕಾರಣದಿಂದಾಗಿ ಇನ್ನೂ ಬಾಕಿ ಉಳಿದಿದೆ. ಸದ್ಯ ಸಿನಿಮಾದ ಶೂಟಿಂಗ್ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿದೆ. ಆದರೆ ರಜಿನಿ ಅವರ ಅನಾರೋಗ್ಯದ ಕಾರಣದಿಂದ ಈಗ ಮತ್ತೆ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿದೆ.
ವಿಜಯಪಥ ಹೊಸ ಆಪ್ ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್‌ಲೋಡ್ ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/details?id=manyathy.vijayapatha.app