NEWSಕೃಷಿ

ಮಾವು ಬೆಳೆ ಹೆಕ್ಟೇರಿಗೆ 80 ಸಾವಿರ ರೂ. ಸಿಗಲಿದ್ದು ರೈತರು ಬೆಳೆ ವಿಮೆಗೆ ಅರ್ಜಿ ಹಾಕಿ: ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ

ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಮತ್ತು ಬೆಳೆ ವಿಮಾ ಕಂತು ನೋಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ. ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ/ ಕಂದಾಯ ರಶೀದಿ/ಖಾತೆ ಪುಸ್ತಕ/ ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ಕಾರ್ಡ್ ನಕಲು ಪ್ರತಿ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು/ ಸಾಮಾನ್ಯ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಾಯಿಸಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಮಾವು ಬೆಳೆಯುವ ರೈತರು ತಮ್ಮ ಬೆಳಗಳಿಗೆ ವಿಮೆ(ಇನ್ಶುರೆನ್ಸ್) ಮಾಡಿಸಲು ನೆಲಮಂಗಲ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ಮಾವು ಬೆಳೆಯುವ ತಾಲೂಕಿನ ರೈತರು ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಬೆಳೆಗಳಾದ ಮಾವು ಬೆಳೆಗೆ ಪ್ರತಿ ಹೆಕ್ಟೇರಿಗೆ 80,000 ರೂ. ವಿಮಾ ಮೊತ್ತ ಸಿಗಲಿದ್ದು, ರೈತರು ಶೇ 5 ರಂತೆ ಹೆಕ್ಟೇರ್ ಗೆ 4,000/-, ಅಥವಾ ಒಂದು ಎಕರೆಗೆ 1600/- ರೂ. ಮಾತ್ರ ವಿಮೆ(ಇನ್ಶುರೆನ್ಸ್) ಪಾವತಿ ಮಾಡಬೇಕು.

ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಮತ್ತು ಬೆಳೆ ವಿಮಾ ಕಂತು ನೋಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ. ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ/ ಕಂದಾಯ ರಶೀದಿ/ಖಾತೆ ಪುಸ್ತಕ/ ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ಕಾರ್ಡ್ ನಕಲು ಪ್ರತಿ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು/ ಸಾಮಾನ್ಯ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಾಯಿಸಲು ತಿಳಿಸಿದ್ದಾರೆ.

ಇನ್ನು ವಿಮೆ ಮಾಡಿಸುವ ರೈತರು FRUITS ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು, ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ತೋಟಗಾರಿಕೆ ಇಲಾಖೆಯ ಕಚೇರಿ, ರೈತ ಸಂಪರ್ಕ ಕೇಂದ್ರದ ಅಧಿಕಾರಿ, ಹತ್ತಿರದ ಬ್ಯಾಂಕ್ ಶಾಖೆ, ವಿಮಾ ಕಂಪನಿ ಹಾಗೂ ನೆಲಮಂಗಲ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೂ. ಸಂಖ್ಯೆ: 9482129648, ಸಹಾಯಕ ತೋಟಗಾರಿಕೆ ನಿರ್ದೇಶಕರು ದೂ. ಸಂಖ್ಯೆ: 9902581832.

ಕಸಬಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ದೂ. ಸಂಖ್ಯೆ: 9380815919, ಸೋಂಪುರ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ ದೂ. ಸಂಖ್ಯೆ: 8884829971, ತ್ಯಾಮಗೊಂಡ್ಲು ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ದೂ. ಸಂಖ್ಯೆ: 8197655732, ಸೋಲೂರು ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ದೂ. ಸಂಖ್ಯೆ: 9886038164, ಕಂಪನಿಯ ಪ್ರತಿನಿಧಿ ದೂ. ಸಂಖ್ಯೆ: 9148894506 ಗೆ ಸಂಪರ್ಕಿಸಲು ನೆಲಮಂಗಲ ತಾಲೂಕಿ ಹಿರಿಯ ಸಹಾಯಕ ತೋಟಗಾರಿಗೆ ನಿರ್ದೇಶಕರು ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
BMTC ಘಟಕ-29ರ ಆವರಣದಲ್ಲೇ ನಡೆದ ಅಪಘಾತ: ಗಾಯಾಳು ಚಾಲಕನಿಗೆ 6 ಸಾವಿರ ಕೊಟ್ಟು ಸುಮ್ಮನಾದ ಅಧಿಕಾರಿಗಳು- ಬಸ್‌ ನಿಲ್ಲಿಸಿ... KSRTC ಪುತ್ತೂರು: ಬಿದ್ದು ಎರಡೂ ಕಾಲುಗಳ ಮುರಿದುಕೊಂಡಿದ್ದ ಚಾಲಕನಿಗೆ 71 ಸಾವಿರ ರೂ. ನೆರವು- ಧೈರ್ಯ ತುಂಬಿದ ಡಿಎಂ KSRTC ಅರಸೀಕೆರೆ: ಚಾಲನಾ ಸಿಬ್ಬಂದಿ ಒಗ್ಗಟ್ಟಿಗೆ ಮಣಿದು ಎಂಡಿಗೆ ನೋಟಿಸ್‌ ಜಾರಿ ಮಾಡಿದ ಕಾರ್ಮಿಕ ಆಯುಕ್ತರು ಅರ್ಹ ದಲಿತರು, ಹಿಂದುಳಿದವರಿಗೆ ಯೋಜನೆ ಸೌಲಭ್ಯ ತಲುಪಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಅನುರಾಧ ತಾಕೀತು ಮಾವು ಬೆಳೆ ಹೆಕ್ಟೇರಿಗೆ 80 ಸಾವಿರ ರೂ. ಸಿಗಲಿದ್ದು ರೈತರು ಬೆಳೆ ವಿಮೆಗೆ ಅರ್ಜಿ ಹಾಕಿ: ಹಿರಿಯ ಸಹಾಯಕ ತೋಟಗಾರಿಕೆ ನಿರ್... ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ