NEWSನಮ್ಮಜಿಲ್ಲೆ

ಅರ್ಹ ದಲಿತರು, ಹಿಂದುಳಿದವರಿಗೆ ಯೋಜನೆ ಸೌಲಭ್ಯ ತಲುಪಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಅನುರಾಧ ತಾಕೀತು

ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಅಭಿವೃದ್ಧಿಗೆ ಇಲಾಖೆಗಳಿಗೆ ಒದಗಿಸಿದ ಅನುದಾನವನ್ನು ಸಂಪೂರ್ಣವಾಗಿ ಅರ್ಹರಿಗೆ ತಲುಪಿಸುವ ಮೂಲಕ ಅನುದಾನ ಪರಿಶಿಷ್ಟರ ಅಭಿವೃದ್ಧಿಗೆ ಸಮರ್ಪಕವಾಗಿ ಸದ್ಬಳಕೆ ಆಗಬೇಕು.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ಶೋಷಣೆ ಹಾಗೂ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಕಾಲ ಕಾಲಕ್ಕೆ ತಾಲೂಕು ಮಟ್ಟದಲ್ಲಿ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ನಡೆಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ 2ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಎಸ್ಸಿ, ಎಸ್ಟಿ ಮತ್ತು ಟಿಎಸ್ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೌರ್ಜನ್ಯ ಪ್ರಕರಣಗಳಲ್ಲಿನ ತಪ್ಪಿತಸ್ಥರ ವಿರುದ್ಧ ತ್ವರಿತ ಕಾನೂನು ಕ್ರಮ ಜರುಗಿಸಬೇಕು. ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ, ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜತೆಗೆ ನೊಂದವರಿಗೆ ಸಕಾಲದಲ್ಲಿ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಗ್ರಾಮೀಣ ಪ್ರದೇಶಗಳ ಜನರಲ್ಲಿ ಪೊಲೀಸ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಾನೂನಿನ ಅರಿವು ಮೂಡಿಸುವ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡುವಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದರು.

9 ದೌರ್ಜನ್ಯ ಪ್ರಕರಣ ದಾಖಲು: ಜಿಲ್ಲೆಯಲ್ಲಿ ಏಪ್ರಿಲ್ 1 ರಿಂದ ಇಲ್ಲಿಯವರೆಗೂ ಒಟ್ಟು 9 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿ 9 ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ಒಟ್ಟು 2.50 ಲಕ್ಷ ರೂ.ಗಳ ಪರಿಹಾರ ಧನವನ್ನು ಬಿಡುಗಡೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಅನುದಾನ ಅರ್ಹರಿಗೆ ತಲುಪಿಸಿ: ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಅಭಿವೃದ್ಧಿಗೆ ಇಲಾಖೆಗಳಿಗೆ ಒದಗಿಸಿದ ಅನುದಾನವನ್ನು ಸಂಪೂರ್ಣವಾಗಿ ಅರ್ಹರಿಗೆ ತಲುಪಿಸುವ ಮೂಲಕ ಅನುದಾನ ಪರಿಶಿಷ್ಟರ ಅಭಿವೃದ್ಧಿಗೆ ಸಮರ್ಪಕವಾಗಿ ಸದ್ಬಳಕೆ ಆಗಬೇಕು ಎಂದ ಅವರು, ಸುಳ್ಳು ದೌರ್ಜನ್ಯ ಪ್ರಕರಣ ದಾಖಲಿಸುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ನಾಲ್ಕು ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಆಸ್ಪತ್ರೆ ಬಂದ ರೋಗಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಇನ್ನು ಹೊರಗುತ್ತಿಗೆ ಪೌರ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ವೇತನವನ್ನು ಪಾವತಿಸಬೇಕು. ಕಸ ವಿಂಗಡಣೆ ಮಾಡಲು ಸುರಕ್ಷಿತ ಪರಿಕರಗಳನ್ನು ಒದಗಿಸಬೇಕು ಎಂದು ನಗರಾಭಿವೃದ್ದಿ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ವ್ಯಾಪ್ತಿಯ ವಿದ್ಯಾರ್ಥಿನಿಲಯ ಹಾಗೂ ಹಾಸ್ಟೆಲ್ ಗಳಲ್ಲಿ 15 ದಿನಕ್ಕೊಮ್ಮೆ ಜಿಲ್ಲಾ ಮಟ್ಟದ ನೂಡಲ್ ಅಧಿಕಾರಿಗಳು ವಾಸ್ತವ್ಯ ಇದ್ದು, ಅಲ್ಲಿನ ಸ್ಥಿತಿಗತಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುರಿತು ವರದಿ ನೀಡಲು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ವಾಸಂತಿ ಅಮರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚಂದ್ರಕಾಂತ ಎಂ.ವಿ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಮುಖ್ಯಯೋಜನಾಧಿಕಾರಿ ರಾಮಕೃಷ್ಣಯ್ಯ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಟಿ.ಎಲ್.ಎಸ್. ಪ್ರೇಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಾಗೃತಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
BMTC ಘಟಕ-29ರ ಆವರಣದಲ್ಲೇ ನಡೆದ ಅಪಘಾತ: ಗಾಯಾಳು ಚಾಲಕನಿಗೆ 6 ಸಾವಿರ ಕೊಟ್ಟು ಸುಮ್ಮನಾದ ಅಧಿಕಾರಿಗಳು- ಬಸ್‌ ನಿಲ್ಲಿಸಿ... KSRTC ಪುತ್ತೂರು: ಬಿದ್ದು ಎರಡೂ ಕಾಲುಗಳ ಮುರಿದುಕೊಂಡಿದ್ದ ಚಾಲಕನಿಗೆ 71 ಸಾವಿರ ರೂ. ನೆರವು- ಧೈರ್ಯ ತುಂಬಿದ ಡಿಎಂ KSRTC ಅರಸೀಕೆರೆ: ಚಾಲನಾ ಸಿಬ್ಬಂದಿ ಒಗ್ಗಟ್ಟಿಗೆ ಮಣಿದು ಎಂಡಿಗೆ ನೋಟಿಸ್‌ ಜಾರಿ ಮಾಡಿದ ಕಾರ್ಮಿಕ ಆಯುಕ್ತರು ಅರ್ಹ ದಲಿತರು, ಹಿಂದುಳಿದವರಿಗೆ ಯೋಜನೆ ಸೌಲಭ್ಯ ತಲುಪಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಅನುರಾಧ ತಾಕೀತು ಮಾವು ಬೆಳೆ ಹೆಕ್ಟೇರಿಗೆ 80 ಸಾವಿರ ರೂ. ಸಿಗಲಿದ್ದು ರೈತರು ಬೆಳೆ ವಿಮೆಗೆ ಅರ್ಜಿ ಹಾಕಿ: ಹಿರಿಯ ಸಹಾಯಕ ತೋಟಗಾರಿಕೆ ನಿರ್... ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ