- ವಿಜಯಪಥ ಸಮಗ್ರ ಸುದ್ದಿ
ಬನ್ನೂರು: ತಿ.ನರಸೀಪುರ ತಾಲೂಕಿನ 36ಗ್ರಾಮ ಪಂಚಾಯಿತಿಗಳಿಗೆ ಎರಡನೇ ಹಂತದಲ್ಲಿ ಡಿ.27ರಂದು ಚುನಾವಾಣೆ ನಡೆಲಿದ್ದು, ತಾಲೂಕಿನ ಮತದಾರರು ಯಾವುದೇ ಆಮೀಷಕ್ಕೆ ಒಳಗಾಗದೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪರ ತಮ್ಮ ಹಕ್ಕು ಚಲಾಯಿಸಬೇಕು ಎಂದು ಬನ್ನೂರಿನ ಪುರಸಭೆ ಅಧ್ಯಕ್ಷೆ ಭಾಗ್ಯಶ್ರಿ ಕೃಷ್ಣ ಮನವಿ ಮಾಡಿದ್ದಾರೆ.
ವಿಜಯಪಥ ಹೊಸ ಆಪ್ ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/details?id=manyathy.vijayapatha.app
ಮಲಿಯೂರು ಮತ್ತು ಅಂಕನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಪ್ರಚಾರ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವಿದ್ದಾಗ ತಾಲೂಕಿನ ಅಭಿವೃದ್ಧಿ ಇತಿಹಾಸದಲ್ಲಿಯೆ ಕಾಣದಂತಹ ಮಟ್ಟದಲ್ಲಿ ಅಭಿವೃದ್ಧಿ ಹೊಂದಿದ್ದು, ಸಾವಿರಾರು ಕೋಟಿ ರೂ. ಅನುದಾನವನ್ನು ಅಂದು ಲೋಕೋಪಯೋಗಿ ಸಚಿವರಾಗಿದ್ದ ಎಚ್.ಸಿ. ಮಹದೇವಪ್ಪನವರು ನೀಡಿದ್ದರು. ಆದ್ದರಿಂದ ಮತದಾರರು ಅವರ ಅಭಿವೃದ್ಧಿ ಕೆಲಸಗಳನ್ನು ಗಮನಿಸಿ ಮತ ಚಲಾಯಿಸಿ ಅವರ ಕೈ ಬಲಪಡಿಸಬೇಕೆಂದರು.
ವಿಜಯಪಥ ಹೊಸ ಆಪ್ ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/details?id=manyathy.vijayapatha.app
ಮಹದೇವಪ್ಪ ಅವರು ತಾಲೂಕಿನಲ್ಲಿ ಕುಡಿಯುವ ನೀರು, ಒಳ ಚರಂಡಿ, ರಸ್ತೆಗಳು, ಮುಂತಾದ ಹಲವಾರು ಮೂಲಭೂತ ಸೌಕರ್ಯಗಳನ್ನು ನೀಡಿ ಕ್ಷೇತ್ರವನ್ನು ಮಾದರಿಯಾನ್ನಾಗಿಸಿದ್ದರು. ಇಂದು ತಳಮಟ್ಟದಿಂದ ಕಾಂಗ್ರೆಸ್ ಬಲಗೊಳ್ಳಲು ನಮ್ಮ ಪಕ್ಷ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.