“ಸೌದೆಗಾದ್ರೂ ಸಬ್ಸಿಡಿ ಕೊಡು ಗುರು” : ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಆಪ್ ಮಹಿಳಾ ಘಟಕ ಕಿಡಿ
ಕೇಂದ್ರ ಸರ್ಕಾರದ ವಿರುದ್ಧ ಸೌದೆ ಒಲೆಯಲ್ಲಿ ಟೀ ಮಾಡಿ ಪ್ರತಿಭಟನೆ
- ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: “ಸೌದೆಗಾದ್ರೂ ಸಬ್ಸಿಡಿ ಕೊಡು ಗುರು” ಎನ್ನುವ ಘೋಷವಾಕ್ಯಗಳನ್ನು ಕೂಗುತ್ತಾ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಕಾರ್ಯಕರ್ತರು ಶನಿವಾರ ಬೆಳಗ್ಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸೌದೆ ಒಲೆಯಲ್ಲಿ ಟೀ ಮಾಡಿ ಹಂಚುವ ಮೂಲಕ ಪ್ರತಿಭಟನೆ ನಡೆಸಿದರು.
ವಿಜಯಪಥ ಹೊಸ ಆಪ್ ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/details?id=manyathy.vijayapatha.app
ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ ಮಾತನಾಡಿ, ಡಿಸೆಂಬರ್ ತಿಂಗಳೊಂದರಲ್ಲೇ ಎರಡು ಬಾರಿ ಎಲ್‌ಪಿಜಿ ಸಿಲಿಂಡರ್ ದರವನ್ನು 100 ರೂಪಾಯಿಯಷ್ಟು ಹೆಚ್ಚಳ ಮಾಡಿ ಜನರ ಸುಲಿಗೆ ಮಾಡುತ್ತಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರನ್ನು ದೋಚುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲಾಕ್‌ಡೌನ್ ನೆಪ ಮಾಡಿಕೊಂಡು ಸಬ್ಸಿಡಿ ನೀಡುವುದನ್ನು ನಿಲ್ಲಿಸಿರುವ ಸರ್ಕಾರ ನೇರವಾಗಿ 20 ಸಾವಿರ ಕೋಟಿ ರೂ. ಉಳಿತಾಯ ಮಾಡಿದೆ ಆದರೂ ಬೆಲೆ ಹೆಚ್ಚಳ ಏಕೆ. ಮಾರುಕಟ್ಟೆಯಲ್ಲಿ ಸೌದೆಯ ಬೆಲೆಯೂ ಗಗನಕ್ಕೆ ಏರಿದೆ ಆದ ಕಾರಣ “ಸೌದೆಗಾದರೂ ಸಬ್ಸಿಡಿ ಕೊಡಿ” ಕನಿಷ್ಠ ಪಕ್ಷ ಎರಡು ಹೊತ್ತು ಊಟ ಮಾಡಿ ಜೀವ ಉಳಿಸಿಕೊಳ್ಳುತ್ತೇವೆ ಎಂದು ವ್ಯಂಗ್ಯವಾಡಿದರು.
ಒಲೆಯಲ್ಲಿ ಅಡುಗೆ ಮಾಡುವುದರಿಂದ ಪರಿಸರ ಮಾಲಿನ್ಯ ತಪ್ಪಿಸಬಹುದು ಎಂದು ಹೇಳಿ ಗ್ಯಾಸ್ ವಿತರಿಸಿದ ಮೋದಿಯವರು ಈಗ ಬಡವರನ್ನು ಸುಲಿಗೆ ಮಾಡುತ್ತಿದ್ದಾರೆ. ರೈತ, ಕಾರ್ಮಿಕ, ಮಹಿಳಾ ವಿರೋಧಿಯಾದ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಹೆಚ್ಚಳ ನಿರ್ಧಾರವನ್ನು ಹಿಂಪಡೆಯದಿದ್ದರೆ ಸೌದೆಯನ್ನು ಪ್ರಧಾನಿ ಕಚೇರಿಗೆ ಪಾರ್ಸಲ್ ಮಾಡಲಾಗುವುದು ಎಂದು ಹೇಳಿದರು.
ವಿಜಯಪಥ ಹೊಸ ಆಪ್ ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/details?id=manyathy.vijayapatha.app
ಕೇಂದ್ರ ಬಿಜೆಪಿ ಸರ್ಕಾರದ ಧೋರಣೆ ಏನು ಎಂಬುದೇ ಅರ್ಥವಾಗುತ್ತಿಲ್ಲ, ಈ ದೇಶವನ್ನು ಸೂಪರ್ ಪವರ್ ಮಾಡುತ್ತೇವೆ ಎಂದು ಹೇಳುತ್ತಲೇ ಬಿಕಾರಿಗಳನ್ನಾಗಿ ಮಾಡುತ್ತಿದೆ, ಕಿಂಚಿತ್ತೂ ದೇಶ ಭಕ್ತಿ, ದೇಶದ ಜನ ಸಾಮಾನ್ಯರ ಬಗ್ಗೆ ಕಾಳಜಿ ಇಲ್ಲದ ಜನರಿಂದ ಪ್ರಗತಿ ನಿರೀಕ್ಷಿಸಲು ಸಾಧ್ಯವೇ ಎಂದರು.
ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ, ಮಹಿಳಾ ಘಟಕದ ಉಪಾಧ್ಯಕ್ಷರಾದ ಡಾ.ಮಾಯಾ ಪ್ರದೀಪ್, ವೈದ್ಯೆ ಪೂರ್ಣಿಮಾ ನಾಯ್ಡು, ಪ್ರತಿಮಾ ಮಲಾನಿ, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಫಣಿರಾಜ್ ಎಸ್. ವಿ. ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
Related
You Might Also Like
ಜ.6ರಿಂದ KSRTC ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಜಾರಿ: ನಿರ್ದೇಶಕರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ 2025ರ ಜನವರಿ 6ರಿಂದ ಜಾರಿಗೆ ಬರಲಿದೆ ಎಂದು ಸಂಸ್ಥೆಯ ನಿರ್ದೇಶಕರು (ಸಿ&ಜಾ)...
ಸಾರಿಗೆ ಕಾರ್ಮಿಕರ ಬೀದಿಗೆ ತಂದಿದ್ದು ಹೊಸ ಸಂಘಟನೆ ಮುಖಂಡ ನಾವಲ್ಲ: ಜಂಟಿ ಪದಾಧಿಕಾರಿ
ಬೆಂಗಳೂರು: ಕಾರ್ಮಿಕರು ಒಗ್ಗಟ್ಟಿಲ್ಲದೆ ಮುಷ್ಕರ ಆಗೋದಿಲ್ಲ ಎಂಬುದಕ್ಕೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಡಿ.31ರ ಮುಷ್ಕರ ಮುಂದೂಡಿರುವುದೇ ನಿದರ್ಶನವಾಗಿದೆ. ಇನ್ನು ಸಾರಿಗೆ ನೌಕರರ...
KSRTC: ಸಾರಿಗೆ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಿದ ಜಂಟಿ ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಇದೇ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಜಂಟಿ ಕ್ರಿಯಾ ಸಮಿತಿ...
ಇಂದು ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ತುರ್ತು ಸಭೆ ಕರೆದ ಸಿಎಂ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗಾಗಿ ಇದೇ ಡಿ.31ರಿಂದ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಹಿನ್ನೆಲೆಯಲ್ಲಿ...
KSRTC ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರ ತಡೆಯಲು ಮುಂದಾದ ಸರ್ಕಾರ?
ಬೆಂಗಳೂರು: ಡಿಸೆಂಬರ್ 31ರಿಂದ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಯೋಜಿತ ಅನಿರ್ದಿಷ್ಟಾವಧಿ ಮುಷ್ಕರ ತಡೆಯಲು ಸಾರಿಗೆ ಇಲಾಖೆ ಸಕ್ರಿಯವಾಗಿದೆ. ಈ ನಡುವೆ ವೇತನ ಹೆಚ್ಚಳ ಸೇರಿದಂತೆ...
NWKRTC: ಡಿ.31ರ ಮುಷ್ಕರಕ್ಕೆ ನಮ್ಮ ಬೆಂಬಲ ಇಲ್ಲ- ಹುಬ್ಬಳ್ಳಿ ಸಾರಿಗೆ ನೌಕರರ ಒಕ್ಕೂಟ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಒಕ್ಕೂಟದ ಪದಾಧಿಕಾರಿಗಳು ಹುಬ್ಬಳ್ಳಿಯ ನಗರ ಸಾರಿಗೆ ಘಟಕ 1, ಗ್ರಾಮಾಂತರ ಘಟಕ 1, ಗ್ರಾಮಾಂತರ ಘಟಕ...
NWKRTC: ಬಸ್-ಕಾರು ನಡುವೆ ಅಪಘಾತ – ಮಹಿಳೆ ಮೃತ, ಇಂಜಿನಿಯರ್‌ಗೆ ಗಾಯ
ಚಿಕ್ಕೋಡಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತೊಟ್ಟಿದ್ದು, ಕಾರು ಚಾಲನೆ ಮಾಡುತ್ತಿದ್ದ ಇಂಜಿನಿಯರ್ ಪ್ರಾಣಾಪಾಯದಿಂದ...
ದೆಹಲಿ ರೈತರ ಹೋರಾಟ ಬೆಂಬಲಿಸಿ ಬನ್ನೂರಿನಲ್ಲಿ ರೈತರು- ರೈತ ಮುಖಂಡರ ಪ್ರತಿಭಟನೆ
ಬನ್ನೂರು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ...
KSRTC: ಅಧಿಕಾರಿಗಳು ಬೀದಿಗಿಳಿಯದ ಹೊರತು ನಾವು ಮುಷ್ಕರ ಬೆಂಬಲಿಸಲ್ಲ- ಸಮಸ್ತ ಚಾಲನಾ ಸಿಬ್ಬಂದಿಗಳು
ಬೆಂಗಳೂರು: ರಾಜ್ಯ ಸಾರಿಗೆಯ ನಾಲ್ಕೂ ನಿಗಮಗಳ ಎಲ್ಲ ಅಧಿಕಾರಿ ವರ್ಗ, ಆಡಳಿತ ವರ್ಗ, ಭದ್ರತಾ ಸಿಬ್ಬಂದಿಗಳು ಎಲ್ಲರೂ ತಮ್ಮ ತಮ್ಮ ಕರ್ತವ್ಯ ತೊರೆದು ಬಂದು ಎಲ್ಲಿತನಕ ಮುಷ್ಕರಕ್ಕೆ...
KSRTC: ಸಾರಿಗೆ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡೇಮಾಡುತ್ತೇವೆ- ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ...
ಪಂಚಭೂತಗಳಲ್ಲಿ ಲೀನವಾದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್
ನ್ಯೂಡೆಲ್ಲಿ: ಭಾರತದ ಮಾಜಿ ಪ್ರಧಾನಿಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ಬೋಧ್ ಘಾಟ್ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮಧ್ಯಾಹ್ನ...