Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್‌, ಸಿದ್ದರಾಮಯ್ಯ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ದೇವೇಗೌಡ್ರು

ಜೆಡಿಎಸ್ ಬಿಜೆಪಿ ಪಕ್ಷದ ಬಿ ಟೀಮ್ ಎಂದು ವಾಗ್ದಾಳಿ ನಡೆಸುತ್ತಿರುವುದಕ್ಕೆ ಆಕ್ರೋಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: “ರಾಜಕಾರಣದಲ್ಲಿ ಸೋಲು ಗೆಲುವು ಮಾಲೂಲಿ. ಹಾಗೆಂದು ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಯಾರು ಏನೇ ಮಾಡಿದರೂ ಸಹ ತೆನೆ ಹೊತ್ತ ಮಹಿಳೆಯನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮೇಲೆ ಮತ್ತೊಮ್ಮೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.

ವಿಜಯಪಥ ಹೊಸ ಆಪ್ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/details?id=manyathy.vijayapatha.app

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂದು ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರ ಅದರಲ್ಲೂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ದೇವೇಗೌಡ ಅವರು, ದೇವೇಗೌಡ ಕುಮಾರಸ್ವಾಮಿಯ ಹೊರತಾಗಿಯೂ ಪಕ್ಷದಲ್ಲಿ ಸಾಕಷ್ಟು ನಾಯಕರಿದ್ದಾರೆ. ಪಕ್ಷ ಯಾರೊಬ್ಬರನ್ನೂ ನೆಚ್ಚಿಕೊಂಡಿಲ್ಲ” ಎಂದು ಕಿಡಿಕಾರಿದರು. ಕಳೆದ ಹಲವು ದಿನಗಳಿಂದ ಕಾಂಗ್ರೆಸ್ ನಾಯಕರು ಜೆಡಿಎಸ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಜೆಡಿಎಸ್ ಬಿಜೆಪಿ ಪಕ್ಷದ ಬಿ ಟೀಮ್ ಎಂದು ವಾಗ್ದಾಳಿ ನಡೆಸುತ್ತಿರುವುದು ಆಕ್ರೋಶ ವ್ಯಕ್ತಪಡಿಸಿದರು.

“ತೆನೆ ಹೊತ್ತ ಮಹಿಳೆ ಬಗ್ಗೆ ಈ ರೀತಿ ಮಾತಾನಾಡುವುದು ಸರಿಯಲ್ಲ. ಜೆಡಿಎಸ್ ಪಕ್ಷವನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ಸೋಲು ಗೆಲುವು ಮಾಮೂಲಿ. ನಾನು ಕಾಂಗ್ರೆಸ್ ಬಗ್ಗೆ ಮಾತಾಡಿದ್ರೆ ತುಂಬಾ ಮಾತಾಡ್ತೀನಿ. ಕಾಂಗ್ರೆಸ್ ಬಗ್ಗೆ ನಂಗೆ ಗೊತ್ತಿದೆ. ನಮ್ಮ ಪಕ್ಷದ ಬಗ್ಗೆ ಮಾತಡೊರಿಗೆ ಹೇಳುತ್ತೇನೆ ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಬೇಡಿ. ಇದನ್ನು ಹೀಗೆ ಮುಂದುವರಿಸಿದರೆ ಮುಂದಿನ ಪರಿಣಾಮ ಎದುರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜೆಡಿಎಸ್​ಗೆ ಯಾರಿಂದಲು ಏನೂ ಮಾಡೋಕೂ ಆಗಲ್ಲ. ಜೆಡಿಎಸ್ ನಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಮಾತ್ರ ಅಲ್ಲ. ಪಕ್ಷವನ್ನು ಮುನ್ನಡೆಸಲು ಇನ್ನು ಅನೇಕ ನಾಯಕರು ಇದ್ದಾರೆ. ಹಾಲು, ಅಕ್ಕಿ ಭಾಗ್ಯದ ಮೇಲೆ ಭಾಗ್ಯ ಕೊಟ್ರಿ ಏನಾಯ್ತು? ಹಾಗಾದ್ರೆ 130 ಸೀಟು ಇದ್ದದ್ದೂ 78ಕ್ಕೆ ಏಕೆ ಬಂತು? ಹಾಸನದಲ್ಲಿ ಈಗ ಕಾಂಗ್ರೆಸ್ ಏನಾಗಿದೆ? ಒಂದು ನಗರಸಭೆ ಚುನಾವಣೆ ಗೆಲ್ಲೋಕೆ ಆಗಲಿಲ್ಲ, ಇದು ಆನಂದವಾ ನಿಮಗೆ?. ಎಲ್ಲದಕ್ಕೂ ತೆರೆ ಎಳೆಯುತ್ತಿದ್ದೇನೆ ಎಂದು ಗುಡುಗಿದರು.

ವಿಜಯಪಥ ಹೊಸ ಆಪ್ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/details?id=manyathy.vijayapatha.app

ಜೆಡಿಎಸ್ ಮನೆ ಅಲುಗಾಡಿಸಲು ಸಾಧ್ಯವಿಲ್ಲ. ಈತರ ಮಾತನಾಡಿ ಯಾವಾಗ್ಯಾವಾಗ ಯಾರ್ಯಾರು ನಮ್ಮ ಮನೆ ಬಾಗಿಲಿಗೆ ಬಂದ್ರು ಅಂತಾ ಗೊತ್ತಿದೆ. ಸಿದ್ದು, ಖರ್ಗೆ, ಮುನಿಯಪ್ಪ, ಗುಲಾಂ ನಬಿ ಎಲ್ಲಾರು ಬಂದಿದ್ದು ಏಕೆ? ಮಾತನಾಡುವಾಗ ಕಿಂಚಿತ್ತಾದ್ರೂ ವಾಸ್ತವ ಘಟನೆ ಬಗ್ಗೆ ಮಾತನಾಡಬೇಕು. ಜೆಡಿಎಸ್ ಪಕ್ಷ ನನ್ನಿಂದಾನೇ ಉಳಿಯಬೇಕಾ, ಪಕ್ಷದಲ್ಲಿ ಇನ್ನೂ ಇದ್ದಾರೆ” ಎಂದು ಕಿಡಿಕಾರಿದ್ದಾರೆ.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್​ ಗಲಾಟೆ ಕುರಿತು ಮಾತನಾಡಿ, ಕಾಂಗ್ರೆಸ್ ನವರು ನನ್ನ ಟೆಸ್ಟ್ ಮಾಡ್ತಾರೆ. ಜೀವನದಲ್ಲಿ ಹೋರಾಟ ಮಾಡಿ ಈ ಹಂತಕ್ಕೆ ಬಂದಿದ್ದೇನೆ. ಕಾಂಗ್ರೆಸ್ ನಡವಳಿಕೆ ಗೊತ್ತಿದೆ ನಂಗೆ. ಸಾಫ್ಟ್ ಹಿಂದುತ್ವ ಅಂತ ಗುಜರಾತ್ ಎಂಪಿಗಳು ಹೇಳ್ತಾರೆ. ಕಾಂಗ್ರೆಸ್ ನ ಸಾಫ್ಟ್, ಹಾರ್ಡ್ ಹಿಂದುತ್ವ ಗೊತ್ತಿಲ್ಲ ನಮಗೆ ಇದೆಲ್ಲಾ ಕಾಂಗ್ರೆಸ್ ನ ನಾಟಕ. ಹೊರಟ್ಟಿ ಸೀನಿಯರ್ ಲೀಡರ್, ಅವ್ರನ್ನ ಮುಂದಿಟ್ಟುಕೊಂಡು ಆಟ ಆಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಮೇಲ್ಮನೆ ಸಭಾಪತಿ ಅವರೇ ರಾಜೀನಾಮೆ ಕೊಡಲು ಸಿದ್ದವಿದ್ದರು. ಆದರೆ, ಅವರ ಪಕ್ಷದವರೇ ಕೊಡಬೇಡಿ ಅಂತ ಹೇಳಿದ್ದಾರೆ. ನನ್ನ ಸೆಕ್ಯೂಲರ್ ಚೇಕ್ ಮಾಡಬೇಕ ನೀವು? ಪಾಪ ಸಭಾಪತಿ ಈಗ ರಾಜೀನಾಮೆ ಕೊಟ್ಟು ಹೋಗಿದ್ದಾರೆ. ನನ್ನ ಟೆಸ್ಟ್ ಮಾಡೋಕೆ ಈ ನಾಟಕ ಮಾಡಿದ್ದಾರೆ. ಗೋದ್ರಾ ಘಟನೆ ನಡೆದಾಗ ನಾನು ಗುಜರಾತ್ ಗೆ ಹೋಗಿದ್ದೆ ಇವರಲ್ಲಿ ಯಾರು ಹೋಗಿದ್ದರು ಎಂದು ಪ್ರಶ್ನಿಸಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ