Please assign a menu to the primary menu location under menu

CrimeNEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಮೇಲ್ಮನೆ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಚಿಕ್ಕಮಗಳೂರು: ವಿಧಾನಪರಿಷತ್ ಉಪಸಭಾಪತಿ ಹಾಗೂ ಜೆಡಿಎಸ್ ಸದಸ್ಯ ಎಸ್.ಎಲ್. ಧರ್ಮೇಗೌಡ ನಿನ್ನೆ ಸಂಜೆ ಅವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿನ್ನೆ ತಡರಾತ್ರಿ ಕಡೂರು ತಾಲೂಕು ಬಳಿ ರೈಲ್ವೆ ಹಳಿಯಲ್ಲಿ ಅವರ ರುಂಡ ಮುಂಡ ಬೇರ್ಪಟ್ಟ ದೇಹ ಪತ್ತೆಯಾಗಿದೆ. ಅವರು ಪತ್ನಿ ಮಮತಾ, ಮಗ ಸೋನಾಲ್, ಮಗಳು ಸೋನಾಲಿ ಅವರನ್ನ ಅಗಲಿದ್ದಾರೆ.

ಧರ್ಮೇಗೌಡ ಅವರು ಸೋಮವಾರ ಸಂಜೆ ಮನೆಯಿಂದ ತಮ್ಮ ಕಾರ್‌ನಲ್ಲಿ ಒಬ್ಬರೇ ತೆರಳಿದ್ದರು. ರಾತ್ರಿಯಾದರೂ ಮನೆಗೆ ವಾಪಸ್‌ ಬಾರದ ಕಾರಣ ಗನ್‌ಮ್ಯಾನ್‌, ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಅನೇಕ ಕಡೆಗಳಲ್ಲಿ ಹುಡುಕಾಡಿದ ನಂತರ ಕೊನೆಗೆ ಅವರ ಮೃತದೇಹ ಕಡೂರು ತಾಲೂಕಿನ ಗುಣಸಾಗರದ ಮಂಕೇನಹಳ್ಳಿ ರೈಲ್ವೇ ಟ್ರ್ಯಾಕ್‌ ಬಳಿ ಪತ್ತೆಯಾಗಿದೆ.

ಸಂಜೆ ಸುಮಾರು 6.30ರ ಸುಮಾರಿಗೆ ಸಖರಾಯಪಟ್ಟಣದ ಮನೆಯಿಂದ ಡ್ರೈವರ್ ಜೊತೆ ಗುಣಸಾಗರಕ್ಕೆ ಬಂದಿದ್ದ ಧರ್ಮೇಗೌಡ, ರೈಲ್ವೆ ಟ್ರ್ಯಾಕ್‌ ಬಳಿ ಕಾರನ್ನು ನಿಲ್ಲಿಸಲು ಡ್ರೈವರ್‌ಗೆ ಸೂಚಿಸಿದ್ದಾರೆ. ಬಳಿಕ ನನಗೆ ಒಬ್ಬರ ಜೊತೆ ಖಾಸಗಿಯಾಗಿ ಮಾತನಾಡಬೇಕು. ನೀನು ಹೋಗು ಅಂತಾ ಡ್ರೈವರ್‌ನನ್ನು ಕಳುಹಿಸಿದ್ದಾರೆ. ಆ ಬಳಿಕ ಕಡೂರಿನ ವ್ಯಕ್ತಿಯೊಬ್ಬರಿಗೆ ಫೋನ್ ಮಾಡಿ ಜನಶತಾಬ್ದಿ ರೈಲು ಬರುವ ಸಮಯವನ್ನು ವಿಚಾರಿಸಿಕೊಂಡಿದ್ದಾರೆ. ಅಷ್ಟೊತ್ತಿಗಾಗಲೇ ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ವಿಧಾನಪರಿಷತ್​ನಲ್ಲಿ ನಡೆದ ಘಟನೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದು ಅವರು ಬರೆದಿಟ್ಟಿರುವ ಡೆತ್​ನೋಟ್​ನಿಂದ ತಿಳಿದುಬಂದಿದೆ. ಧರ್ಮೇಗೌಡ ಅವರು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸದೃಢ ಕುಟುಂಬದ ಹಿನ್ನೆಲೆಯವರು. ಅವರ ಕುಟುಂಬ ರಾಜಕೀಯವಾಗಿ ಶಕ್ತಿಶಾಲಿಯಾಗಿತ್ತು. ಆರ್ಥಿಕವಾಗಿಯೂ ಅವರು ಒಳ್ಳೆಯ ಸ್ಥಿತಿಯಲ್ಲಿದ್ದರು. ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನ ಮಟ್ಟದಿಂದ ವಿವಿಧ ಸ್ತರಗಳ ರಾಜಕೀಯದಲ್ಲಿ ಅನುಭವಿ ಎನಿಸಿದ್ದರು. ನಿನ್ನೆ ಚಿಕ್ಕಮಗಳೂರಿನ ಕಾರ್ಯಕ್ರಮವೊಂದರಲ್ಲಿ ಸಂತೋಷದಿಂದಲೇ ಅವರು ಪಾಲ್ಗೊಂಡರೆಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ಧಾರೆ.

ಇತ್ತೀಚೆಗೆ ವಿಧಾನಪರಿಷತ್​ನಲ್ಲಿ ನಡೆದ ಗಲಾಟೆ ಘಟನೆ ಧರ್ಮೇಗೌಡ ಅವರ ಮನಸಿಗೆ ಘಾಸಿ ತಂದಿತ್ತು. ಸಭಾಪತಿ ಪೀಠದ ಮೇಲೆ ಕುಳಿತಿದ್ದ ಅವರನ್ನ ಕಾಂಗ್ರೆಸ್ ಸದಸ್ಯರು ಎಳೆದಾಡಿದ್ದರು. ಇದು ಅವರಿಗೆ ಬಹಳ ನೋವು ತಂದಿತ್ತು. ಮಾಧ್ಯಮಗಳ ಮುಂದೆ ಅವರು ಯಾವುದೇ ಪ್ರತಿಕ್ರಿಯೆ ನೀಡದೇ ಹೋದರೂ ತಮ್ಮ ಆಪ್ತವಲಯದಲ್ಲಿ ಸಾಕಷ್ಟು ನೋವು ತೋಡಿಕೊಂಡಿದ್ದರು. ಡೆತ್​ನೋಟ್​ನಲ್ಲಿ ಅವರು ಈ ವಿಚಾರವನ್ನು ಪ್ರಸ್ತಾಪ ಮಾಡಿ, ಘಟನೆಯಿಂದ ಬಹಳ ನೋವಾಗಿತ್ತು ಎಂದಿದ್ಧಾರೆ. ಡೆತ್ ನೋಟ್​ನಲ್ಲಿ ತಮ್ಮ ಪತ್ನಿ, ಮಗ ಮತ್ತು ಮಗಳ ಕ್ಷಮೆ ಕೂಡ ಅವರು ಯಾಚಿಸಿದ್ಧಾರೆ.

ಧರ್ಮೇಗೌಡ ರಾಜಕೀಯ ಹಾದಿ

  • ಬಿಳಕಲ್ ಹಳ್ಳಿ ಗ್ರಾಮಪಂಚಾಯತ್ ಸದಸ್ಯ.
  • ಚಿಕ್ಕಮಗಳೂರು ಟಿಎಪಿಸಿಎಂಎಸ್ ಅಧ್ಯಕ್ಷ
  • ಚಿಕ್ಕಮಗಳೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ.ಉದ್ದೇಬೋರನಹಳ್ಳಿ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷ
  • ಬಿಳೇಕಲ್ಲಹಳ್ಳಿ ಎಂಪಿಸಿಎಸ್ ಅಧ್ಯಕ್ಷ
  • ಹಾಸನ ಹಾಲು ಒಕ್ಕೂಟ ವ್ಯಾಪ್ತಿಯ ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷ
  • ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ
  • ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಳ ಅಧ್ಯಕ್ಷ
  • ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ
  • ರಾಜ್ಯ ವಿಮಾ ಸಹಕಾರ ಸಂಘದ ನಿರ್ದೇಶಕ
  • ದೆಹಲಿಯ ಕ್ರಿಬ್ಕೋ ಸಂಸ್ಥೆಯ ನಿರ್ದೇಶಕ
  • ನ್ಯಾಫೆಡ್ ಸಂಸ್ಥೆ ನಿರ್ದೇಶಕ
  • ಇಂಡಿಯನ್ ಪೋಟಾಸ್ ಲಿಮಿಟೆಡ್ ನಿರ್ದೇಶಕ
  • ತಾಲೂಕು ಪಂಚಾಯಿತಿ ಸದಸ್ಯ
  • ಜಿಲ್ಲಾಪಂಚಾಯಿತಿ 2 ಬಾರಿ ಸದಸ್ಯ
  • ಬೀರೂರು ವಿಧಾನಸಭಾ ಕ್ಷೇತ್ರದ ಸದಸ್ಯ
  • ಒಂದು ಬಾರಿ ವಿಧಾನಪರಿಷತ್ ಸದಸ್ಯ

Leave a Reply

error: Content is protected !!
LATEST
ಹೇಮಗಿರಿಯ ಕಲ್ಯಾಣ ವೆಂಕಟರಮಣ ಸ್ವಾಮಿ ಬೆಟ್ಟದಲ್ಲಿ ವೈಕುಂಠ ಏಕಾದಶಿ ಸಂಭ್ರಮ ಜ.19ರ BMTC ಸಂಘದ ಚುನಾವಣೆಯಲ್ಲಿ ಬಳಕೆದಾರ ಸಹಕಾರ ಸಂಘ ಲೂಟಿಕೋರರ ಹೆಡೆಮುರಿ ಕಟ್ಟಿ - ನೊಂದ ನೌಕರರ ಮನವಿ KSRTC ಹಾಸನ ಹೊಸ ಬಸ್‌ ನಿಲ್ದಾಣ: ಬಸ್‌ನಲ್ಲಿ ಮಲಗಿದ್ದ ಚಾಲನಾ ಸಿಬ್ಬಂದಿಗಳ ಮುಖಕ್ಕೆ ಸ್ಪ್ರೇ ಹೊಡೆದು ಕಳವಿಗೆ ಯತ್ನ KSRTC ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರು : ಎಲ್ಲಿ ಬೇಕಾದರೂ ಟ್ರೀಟ್‌ಮೆಂಟ್‌ ಪಡೆಯಿರಿ  KSRTC: ಓಂ ಶಕ್ತಿಗೆ ಹೋಗಿ ಬರುತ್ತಿದ್ದ ಬಸ್‌ -ಲಾರಿ ನಡುವೆ ಭೀಕರ ಅಪಘಾತ- ನಾಲ್ವರು ಸಾವು, ಬಸ್‌ ಚಾಲಕನ ಸ್ಥಿತಿ ಚಿಂತಾ... ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ: ಕೇಂದ್ರ ರಸ್ತೆ ಸಾರಿಗೆ -ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ... ಸಾರಿಗೆ ಸಿಬ್ಬಂದಿಗೆ ಸರಿ ಸಮಾನ ವೇತನ ಸಿಗಬೇಕು: NWKRTC ಸಂಸ್ಥೆ ಅಧ್ಯಕ್ಷ ಭರಮಗೌಡ ಕಾಗೆ NWKRTC- ನಿರ್ವಾಹಕ ಚೀರ್ಚಿನಕಲ್ ಆತ್ಮಹತ್ಯೆ ಯತ್ನ- ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎಂಡಿಗೆ ಸಾರಿಗೆ ನೌಕರರ ಸೇನ... ಸಾರಿಗೆ ನೌಕರರಿಗೆ ಕೊಟ್ಟ ಚುನಾವಣೆ ಪ್ರಣಾಳಿಕೆಯ ಭರವಸೆ ಈಡೇರಿಸುವತ್ತಾ ಕಾಂಗ್ರೆಸ್‌ ಸರ್ಕಾರ...!? KSRTC 4 ನಿಗಮಗಳ ಬಸ್‌ ಚೀಟಿ ದರ ಪರಿಷ್ಕರಣೆಯಿಂದ ತಲೆದೋರಿದ ಚಿಲ್ಲರೆ ಸಮಸ್ಯೆ-ನಿರ್ವಾಹಕರು ಪ್ರಯಾಣಿಕರ ನಡುವೆ ಫೈಟ್‌