ಮೆಟ್ರೋ ಪಿಲ್ಲರ್‌ಗೆ ಬೆಳಕಿನ ವ್ಯವಸ್ಥೆ ಕಾಮಗಾರಿ ವೇಳೆ ವಿದ್ಯುತ್ ತಂತಿ ತಗುಲಿ ಗುತ್ತಿಗೆ ಕಾರ್ಮಿಕ ಮೃತ
ದುರಂತಕ್ಕೆ ನಿಖರವಾದ ಕಾರಣ ಏನೆಂಬುವುದು ಇನ್ನು ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದ್ದು ಪೂರ್ಣಗೊಂಡ ಬಳಿಕವಷ್ಟೇ ತಿಳಿದು ಬರಲಿದೆ.

ಬೆಂಗಳೂರು: ನಮ್ಮ ಮೆಟ್ರೋ ಪಿಲ್ಲರ್‌ಗೆ ಬೆಳಕಿನ ವ್ಯವಸ್ಥೆ ಕಾಮಗಾರಿ ನಡೆಯುತ್ತಿದ್ದ ವೇಳೆ ಗುತ್ತಿಗೆ ಕಾರ್ಮಿಕನಿಗೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಘಟನೆ ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಎಂ.ಎಸ್.ಎಂ.ಆರ್. ಎಲೆಕ್ಟ್ರಿಕ್ ಸಂಸ್ಥೆಯ ಗುತ್ತಿಗೆ ಕಾರ್ಮಿಕರಾದ ಗುರಪ್ಪ (70) ಎಂಬುವರು ಮೃತಪಟ್ಟಿದ್ದಾರೆ.
ಘಟನೆಯ ವಿವರ: ಶುಕ್ರವಾರ ಮಧ್ಯಾಹ್ನ ಸುಮಾರು 3:52ರ ವೇಳೆಗೆ ಟ್ರಿನಿಟಿ ಮೆಟ್ರೋ ನಿಲ್ದಾಣದ ಹೊರಭಾಗದಲ್ಲಿರುವ ಪಿಲ್ಲರ್ ಸಂಖ್ಯೆ 153ರ ಸಮೀಪ ನಮ್ಮ ಮೆಟ್ರೋ ಪಿಲ್ಲರ್‌ಗಳಿಗೆ ಬೆಳಕಿನ ವ್ಯವಸ್ಥೆ ಕಲ್ಪಿಸಲು ಭೂಮಿಯಲ್ಲಿ ‘ಅರ್ಥ್ ಪಿಟ್’ (Earth Pit) ಕಾಮಗಾರಿ ನಡೆಸಲಾಗುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಕರೆಂಟ್ ಶಾಕ್ ತಗುಲಿ ಗುರಪ್ಪ ತೀವ್ರ ಗಾಯಗೊಂಡಿದ್ದರು.
ತಕ್ಷಣವೇ ಅವರನ್ನು ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ದುರಂತಕ್ಕೆ ನಿಖರವಾದ ಕಾರಣ ಏನೆಂಬುವುದು ಇನ್ನು ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದ್ದು ಪೂರ್ಣಗೊಂಡ ಬಳಿಕವಷ್ಟೇ ತಿಳಿದು ಬರಬೇಕಿದೆ.
ಇನ್ನು ದುರ್ಘಟನೆಯಲ್ಲಿ ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ ಬಿಎಂಆರ್‌ಸಿಎಲ್ (BMRCL) ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಆದರೆ, ಸದ್ಯಕ್ಕೆ ಯಾವುದೇ ಅಧಿಕೃತ ಪರಿಹಾರವನ್ನು ಘೋಷಿಸಿಲ್ಲ.







