NEWSನಮ್ಮಜಿಲ್ಲೆರಾಜಕೀಯ

ಗ್ರಾಪಂ ಸಮರ: ರಾಜ್ಯದ 8,074 ಗ್ರಾಮಗಳಲ್ಲಿ ಅವಿರೋಧವಾಗಿ ಸದಸ್ಯರ ಆಯ್ಕೆ ಆಗಿದೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ವಿಜಯಪುರ: ಜಿಲ್ಲೆಯಲ್ಲಿ ಗ್ರಾ. ಪಂ. ಚುನಾವಣೆ ಮತ ಎಣಿಕೆ ಆರಂಭ. 199 ಗ್ರಾಮ ಪಂಚಾಯಿತಿಗಳ 3754 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 9247 ಅಭ್ಯರ್ಥಿಗಳು ಸ್ಪರ್ಧಿಸಿದ್ದು,
369 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದಾರೆ.

ಯಾದಗಿರಿ: 115 ಗ್ರಾ.ಪಂ.ಗಳ 2,291 ಸ್ಥಾನಗಳ ಪೈಕಿ 1,837 ಸ್ಥಾನಗಳಿಗೆ ನಡೆದಿತ್ತು ಚುನಾವಣೆ.
433 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ಚುನಾವಣಾ ಕಣದಲ್ಲಿ 4,514 ಅಭ್ಯರ್ಥಿಗಳು.

ದಕ್ಷಿಣಕನ್ನಡ ಜಿಲ್ಲೆಯ 220 ಗ್ರಾಮ ಪಂಚಾಯಿತಿಯ 3,222 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು.
13 ಕೇಂದ್ರಗಳಲ್ಲಿ ಮತ ಎಣಿಕೆ ಪ್ರಾರಂಭ. 7,275 ಅಭ್ಯರ್ಥಿಗಳ ಹಣೆಬರಹ ಇಂದು ನಿರ್ಧಾರ.

ಕಲಬುರಗಿ ಜಿಲ್ಲೆಯ 242 ಗ್ರಾಮ ಪಂಚಾಯಿತಿಯ 3,805 ಸ್ಥಾನಗಳಿಗೆ ಚುನಾವಣೆ. ಜಿಲ್ಲೆಯ 11 ಕಡೆ ಮತ ಎಣಿಕೆ ಕಾರ್ಯ ನಡೆಯಲಿದೆ. ಮತ ಎಣಿಕೆ ಕೇಂದ್ರಗಳ ಸಮೀಪ ನಿಷೇಧಾಜ್ಞೆ ಜಾರಿ, ಮದ್ಯ ಮಾರಾಟವೂ ನಿಷೇಧ.

ಹುಬ್ಬಳ್ಳಿ: ಒಟ್ಟು 136 ಗ್ರಾಮ ಪಂಚಾಯಿತಿಯ 1,938 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಪ್ರಕಟವಾಗುತ್ತಿದೆ.

ಬೆಳಗಾವಿ ಜಿಲ್ಲೆಯಲ್ಲಿ 477 ಗ್ರಾಮ ಪಂಚಾಯಿತಿ, 8,181 ಸ್ಥಾನಗಳು, 20,728 ಅಭ್ಯರ್ಥಿಗಳು.

ಬಾಗಲಕೋಟೆ: ಜಿಲ್ಲೆಯ 191 ಗ್ರಾಮ ಪಂಚಾಯಿತಿಯ 3,139 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. 312 ಮಂದಿ ಅವಿರೋಧ ಆಯ್ಕೆ ಹಿನ್ನೆಲೆಯಲ್ಲಿ 2,777 ಸ್ಥಾನಕ್ಕೆ ಚುನಾವಣೆ ನಡೆಯಿತು. ಒಟ್ಟು 7,138 ಅಭ್ಯರ್ಥಿಗಳ ಹಣೆಬರಹ ಇಂದು ನಿರ್ಧಾರ.

ರಾಯಚೂರು: 172 ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಇಂದು ಪ್ರಕಟ. 7,598 ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ. ಜಿಲ್ಲೆಯಲ್ಲಿ ಒಟ್ಟು 417 ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದ ಜಿಲ್ಲೆಯ ಆರು ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ.

ಬೆಂಗಳೂರು: ಸರ್ಕಾರ ಮತ್ತು ಚುನಾವಣಾ ಆಯೋಗದ https://karsec.gov.in  ಮತ್ತು https://www.ceokarnataka.kar.nic.in/ ಅಧಿಕೃತ ಜಾಲತಾಣಗಳಲ್ಲೂ ವೀಕ್ಷಿಸಬಹುದಾಗಿದೆ.

ಚುನಾವಣಾ ಆಯೋಗವು ಪಕ್ಷಾತೀತವಾಗಿ ಚುನಾವಣೆ ನಡೆಸಿದೆಯಾದರೂ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ವಿವಿಧ ಅಭ್ಯರ್ಥಿಗಳನ್ನ ಬೆಂಬಲಿಸಿರುವುದರಿಂದ ರಾಜಕೀಯ ಜಿದ್ದಾಜಿದ್ದಿ ಜೋರಾಗಿದೆ. ಹೀಗಾಗಿ, ಮೂರೂ ಪಕ್ಷಗಳಿಗೆ ಈ ಪಂಚಾಯಿತಿ ಚುನಾವಣೆ ಪ್ರತಿಷ್ಠೆಯ ಪಣವಾಗಿದೆ.
ಬೀದರ್ನ ಕೆಲ ಪಂಚಾಯಿತಿಗಳನ್ನ ಹೊರತುಪಡಿಸಿ ಬಹುತೇಕ ಉಳಿದ ಕಡೆ ಇವಿಎಂ ಇಲ್ಲದೇ ಮತಪತ್ರಗಳ ಮೂಲಕ ಚುನಾವಣೆ ಆಗಿದೆ. ಬುಧವಾರದ ಫಲಿತಾಂಶದಲ್ಲಿ 3 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳ ಹಣೆಬರಹ ಗೊತ್ತಾಗಲಿದೆ.

ರಾಜ್ಯದ 92 ಸಾವಿರಕ್ಕೂ ಹೆಚ್ಚು ಗ್ರಾಮಗಳ 6,004 ಗ್ರಾಮ ಪಂಚಾಯಿತಿಗಳ 92,616 ಸ್ಥಾನಗಳ ಪೈಕಿ 5,728 ಗ್ರಾ.ಪಂ.ಗಳ 91,339 ಚುನಾವಣೆ ಘೋಷಣೆಯಾಗಿತ್ತು. ಡಿ. 22 ಮತ್ತು 27ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಿತು. 242 ಗ್ರಾ.ಪಂ.ಗಳಿಗೆ ಮತದಾನ ಬಹಿಷ್ಕಾರ ಮತ್ತಿತರ ಕಾರಣದಿಂದ ಚುನಾವಣೆ ನಡೆಯಲಿಲ್ಲ. ಸುಮಾರು 8,074 ಗ್ರಾಮಗಳಲ್ಲಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲ ಹಂತದಲ್ಲಿ 43,238 ಮತ್ತು ಎರಡನೇ ಹಂತದಲ್ಲಿ 39,378 ಸ್ಥಾನಗಳಿಗೆ ಮತದಾನ ಆಗಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ