- ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಪಿರಿಯಾಪಟ್ಟಣದ ಪುಷ್ಪಾ ಕಾನ್ವೆಂಟ್ನ ಮತ ಎಣಿಕೆ ಕೇಂದ್ರದಲ್ಲಿ ಎನ್. ಶೆಟ್ಟಹಳ್ಳಿ ಗ್ರಾಪಂ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೋರೇಗೌಡ (52) ಮೃತಪಟ್ಟಿದ್ದಾರೆ. ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಕಾರು ಕಾಲುವೆಗೆ ಉರುಳಿ ಇಬ್ಬರು ಅಸುನೀಗಿರುವ ಘಟನೆ ನಡೆದಿದೆ.
ಪಿರಿಯಾಪಟ್ಟಣದಲ್ಲಿ ಕರ್ತವ್ಯದಲ್ಲಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿದ್ದ ಬೋರೇಗೌಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ, ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಬೋರೇಗೌಡ ಲೋಕೋಪಯೋಗಿ ಇಲಾಖೆಯಲ್ಲಿ ಎಇಇ ಆಗಿದ್ದರು.
ಇನ್ನು ಕಾರು ಕಾಲುವೆಗೆ ಉರುಳಿ ಬಿದ್ದಿದ್ದರಿಂದ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಪ್ರಕಾಶ್ ಬನ್ನಿಮಟ್ಟಿ ಮತ್ತು ಸಿದ್ದನಗೌಡ ಎಂದು ಗುರುತಿಸಲಾಗಿದ್ದು, ಈ ಇಬ್ಬರು ಪಂಚಾಯಿತಿ ಚುನಾವಣೆ ಏಜೆಂಟ್ಗಳಾಗಲು ಹೋಗುತ್ತಿದ್ದರು ಎಂದು ಹೇಳಲಾಗಿದೆ.
ಇನ್ನು ಕುಶಾಲನಗರದ ಮತ ಎಣಿಕೆ ಕೇಂದ್ರದಲ್ಲಿ ಉಂಟಾಗ ನೂಕು ನುಗ್ಗಲಿನಲ್ಲಿ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರ ಕಾಲು ಮುರಿದಿದೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಚಾಮರಾಜನಗರ ಸರ್ಕಾರಿ ಪಾಲಿಟೆಕ್ನಿಕ್ ಕೇಂದ್ರದಲ್ಲಿ ಪಾಸುಗಳ ವಿತರಣೆ ವಿಚಾರದಲ್ಲಿ ಅಭ್ಯರ್ಥಿಗಳ ಏಜೆಂಟ್, ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸ್ ಇನ್ಸ್ಪೆಕ್ಟರ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಧಿಕ್ಕಾರವನ್ನು ಕೂಗಲಾಗಿದೆ.