NEWSನಮ್ಮರಾಜ್ಯರಾಜಕೀಯ

ಗ್ರಾಪಂನಲ್ಲಿ ಕೆಚ್ಚೆದೆಯ ಹೋರಾಟ ತೋರಿದ ಜೆಡಿಎಸ್‌ ಕಾರ್ಯಕರ್ತರಿಗೆ ಅಭಿನಂದನೆಗಳು: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್‌ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನೇ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ವೇಳೆ ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಸೋತರೂ, ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ನನ್ನ ಬೆಂಬಲ ಸದಾ ಇರಲಿದೆ ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ಈ ಹಂತದ ಸಾಧನೆ ಮಾಡಲು ನೆರವಾದವರು ಪಕ್ಷದ ತಳಮಟ್ಟದ ಕಾರ್ಯಕರ್ತರು. ಅವರಿಂದ ಈ ಸಾಧನೆ ಮಾಡಲು ಸಾದ್ಯವಾಯಿತು ಎಂದು ಎಂದು ಸರಣಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ರಾಜಕೀಯದ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ಯಕರ್ತರು ಕೆಚ್ಚೆದೆಯ ಹೋರಾಟ ತೋರಿದ್ದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಿಸಿದ್ದಾರೆ. ಪಕ್ಷ ತಳ ಮಟ್ಟದಲ್ಲಿಯೂ ಸ್ಥಿರ, ದೃಢವಾಗಿದೆ ಎಂದು ತೋರಿಸಿದ ಕಾರ್ಯಕರ್ತ ಸೋದರರಿಗೆ ನಾನು ಸದಾ ಋಣಿ ಎಂದು ತಿಳಿಸಿದ್ದಾರೆ.

ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲಿ. ಸ್ವಾವಲಂಬಿ ಗ್ರಾಮೀಣ ಭಾರತದ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡಲಿ ಎಂದು ಆಶಿಸುತ್ತೇನೆ.

ಜೆಡಿಎಸ್‌ ಬೆಂಬಲಿತ ಮತ್ತು ಇತರ ಸದಸ್ಯರು ತಮ್ಮ ಗ್ರಾಮ ಪಂಚಾಯಿತಿಯನ್ನು ಮಾದರಿಯಾಗಿ ರೂಪಿಸಬೇಕು ಎಂದು ನಾನು ಹೇಳಲು ಇಚ್ಛಿಸುತ್ತೇನೆ ಎಂದಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್