ವಿಜಯಪಥ ಸಮಗ್ರ ಸುದ್ದಿ
ಬೆಳಗಾವಿ: ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮ ಪಂಚಾಯಿತಿಯ ಚಿಕ್ಕೊಪ್ಪ ಗ್ರಾಮದ 4ನೇ ವಾರ್ಡ್‌ನಿಂದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀದೇವಿ ಪ್ರಕಾಶ್ ನರಸಣ್ಣವರ್ 200 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಡಿ.30ರಂದು ಬೆಳಗ್ಗೆ 8 ಗಂಟೆಯಿಂದ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಿತು. ಅದರಲ್ಲಿ ಮರಕುಂಬಿ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಶ್ರೀದೇವಿ ಪ್ರಕಾಶ್ ನರಸಣ್ಣವರ್ ಒಟ್ಟು 386 ಮತಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ 186 ಮತ ಪಡೆಯುವ ಮೂಲಕ ಸೋಲು ಅನುಭವಿಸಿದರೆ, ಶ್ರೀದೇವಿ 200 ಮತಗಳ ಅಂತರದಲ್ಲಿ ವಿಜಯದ ಮಾಲೆ ಧರಿಸಿದ್ದಾರೆ.