NEWSದೇಶ-ವಿದೇಶನಮ್ಮರಾಜ್ಯ

ಇಂದು ಕರ್ನಾಟಕ ಸರ್ಕಾರಕ್ಕೆ ಬೇಡಿಕೆ ಇಟ್ಟು 30ಕ್ಕೂ ಹೆಚ್ಚು ದೇಶಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರಿಂದ ಏಕಕಾಲಕ್ಕೆ ಟ್ವೀಟ್‌ ಅಭಿಯಾನ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಇದೇ ಮೊದಲ ಬಾರಿಗೆ ವಿಶ್ವಾದ್ಯಂತವಿರುವ ಮೂವತ್ತಕ್ಕೂ ಹೆಚ್ಚು ದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಕಟ್ಟಿಕೊಂಡಿರುವ ನೂರಕ್ಕೂ ಹೆಚ್ಚು ಅನಿವಾಸಿ ಕನ್ನಡಪರ ಸಂಘಟನೆಗಳು ಒಗ್ಗಟ್ಟಾಗಿ ಒಂದೇ ದಿನ ಒಂದೇ ಧ್ವನಿಯೊಂದಿಗೆ ಟ್ವಿಟರ್ ಮತ್ತು ಇ ಮೇಲ್ ಮೂಲಕ ಕರ್ನಾಟಕ ಸರ್ಕಾರಕ್ಕೆ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅಭಿಯಾನವನ್ನು ಜನವರಿ 2ರಂದು ಸಂಜೆ 4 ಗಂಟೆಗೆ ಹಮ್ಮಿಕೊಂಡಿರುವುದಾಗಿ ತಿಳಿಸಿವೆ.

ಎನ್‌ಆರ್‌ಐ ಅಪಿಲ್ ಡೇ ಎಂಬ ಹ್ಯಾಷ್‌ಟ್ಯಾಗ್ ನೊಂದಿಗೆ ಇಂದಿನ ದಿನವನ್ನು ಅಂತಾರಾಷ್ಟ್ರೀಯ ಅನಿವಾಸಿ ಕನ್ನಡಿಗರ ಮನವಿ ದಿನವಾಗಿ ಆಚರಿಸಲು ತೀರ್ಮಾನಿಸಿದ್ದು, ನಾವು ಕರೆಕೊಟ್ಟಿರುವ ಈ ಅಭಿಯಾನಕ್ಕೆ ಈಗಾಗಲೇ ಬೆಂಬಲ ಸೂಚಿಸಿವೆ ಎಂದು ಅಂತಾರಾಷ್ಟ್ರೀಯ ಕನ್ನಡಿಗಾಸ್‌ ಫೆಡರೇಷನ್ ಸಂಚಾಲಕ ಇದಾಯತ್ ಅಡ್ಡೂರ್ ತಿಳಿಸಿದ್ದಾರೆ.

ಅವುಗಳೆಂದರೆ ಅಮೆರಿಕ, ಯುಎಇ, ಬ್ರಿಟನ್, ಆಸ್ಟ್ರೇಲಿಯಾ, ಕತಾರ್, ಕುವೈಟ್, ಇಟಲಿ, ಜರ್ಮನಿ, ಕೆನ್ಯಾ, ದಕ್ಷಿಣ ಆಫ್ರಿಕಾ, ಉಗಾಂಡ, ಇಥಿಯೋಪಿಯಾ, ಡೆನ್ಮಾರ್ಕ್, ನೈಜೀರಿಯಾ, ಹಾಲೆಂಡ್, ರೋಮನ್, ಬಹರೈನ್, ಇಂಡೋನೇಷಿಯಾ, ಸೌದಿ ಅರೇಬಿಯಾ, ಇಸ್ರೇಲ್, ಈಜಿಫ್ಟ್, ಸ್ವಿಟ್ಜರ್ಲ್ಯಾಂಡ್, ಘಾನ, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಹಾಂಕಾಂಗ್, ಸಿಂಗಾಪುರ್, ಸ್ಕಾಟ್ಲ್ಯಾಂಡ್, ನಾರ್ವೆ, ನೆದರ್ಲ್ಯಾಂಡ್, ಸೌತ್ ಕೊರಿಯಾ ಸೇರಿದಂತೆ ಇನ್ನಿತರ ದೇಶಗಳ ನೂರಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಈಗಾಗಲೇ ಬೆಂಬಲ ಘೋಷಿಸಿವೆ ಎಂದು ತಿಳಿಸಿದ್ದಾರೆ.

ಅನಿವಾಸಿ ಕನ್ನಡಿಗರ ನಾಲ್ಕು ಪ್ರಮುಖ ಬೇಡಿಕೆಗಳು
1.ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನು ಕೂಡಲೇ ನೇಮಿಸಬೇಕು

2.ಉಪಾಧ್ಯಕ್ಷ ಸ್ಥಾನಕ್ಕೆ ಅನಿವಾಸಿಗಳ ಕಷ್ಟ ಬಲ್ಲವರನ್ನು ಅಂದರೆ ಒಬ್ಬ ಅನಿವಾಸಿ ಕನ್ನಡಿಗರನ್ನೇ ನೇಮಿಸಬೇಕು

3.ನನೆಗುದಿಗೆ ಬಿದ್ದಿರುವ ಎನ್‌ಆರ್‌ಕೆ ಕಾರ್ಡ್ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸುವುದು.

4. ಹೆಚ್ಚು ಅನಿವಾಸಿ ಕನ್ನಡಿಗರ ಸಾಂದ್ರತೆ ಇರುವ ಪ್ರದೇಶಗಳಲ್ಲಿ ಕನ್ನಡ ಭವನ ನಿರ್ಮಾಣ ಮಾಡಿ ಕನ್ನಡ ಪಾಠಶಾಲೆ ನಡೆಸಲು ವ್ಯವಸ್ಥೆ ಮಾಡಬೇಕು

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ