ನಮ್ಮರಾಜ್ಯರಾಜಕೀಯ

ಪಾಲಿಕೆ ಎದುರು ನಾಡ ಧ್ವಜ ಹಾರಿಸಿದ ಕನ್ನಡ ಪರ ಹೋರಾಟಗಾರರ ಅಂಗಡಿಗೆ ಬೆಂಕಿ ಇಡಲು ಕಿಡಿಗೇಡಿಗಳ ಯತ್ನ: ಮಾಜಿ ಸಿಎಂ ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಬೆಳಗಾವಿ ಪಾಲಿಕೆ ಎದುರು ಡಿ.28ರಂದು ಕನ್ನಡಪರ ಹೋರಾಟಗಾರರು ನಾಡ ಧ್ವಜ ಹಾರಿಸಿದ ನಂತರದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಮ್ಮ ನೆಲದಲ್ಲಿ ನಮ್ಮ ಧ್ವಜ ಹಾರಿಸಲು ಹರಸಾಹಸಪಡುವುದು, ಅದಕ್ಕೆ ಕಾವಲು ಕಾಯುವುದು, ಧ್ವಜ ತೆರವು ಮಾಡದಂತೆ ಅಧಿಕಾರಿಗಳಲ್ಲಿ ಮನವಿ ಮಾಡುವುದು ಇವೆಲ್ಲವೂ ಕನ್ನಡಿಗರ ಸ್ವಾಭಿಮಾನಕ್ಕೆ ಉಂಟಾದ ಧಕ್ಕೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ..

ಪಾಲಿಕೆ ಎದುರು ಧ್ಜಜ ಸ್ಥಾಪಿಸಿದ ಕನ್ನಡ ಹೋರಾಟಗಾರ ಶ್ರೀನಿವಾಸ ತಾಳಕೂರ ಎಂಬುವವರ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಇಡಲು ಯತ್ನಿಸಿರುವ ಘಟನೆಯೂ ನಡೆದಿದೆ. ಕರ್ನಾಟಕದಲ್ಲಿ ಕನ್ನಡ ಧ್ವಜಕ್ಕಾಗಿ ಹೋರಾಡಿದವರ ಮೇಲೆ ಪದೇಪದೇ ದಾಳಿ ನಡೆಯುತ್ತದೆ ಎಂದರೆ, ಅವರಿಗೆ ರಕ್ಷಣೆ ನೀಡಲಾಗುತ್ತಿಲ್ಲ ಎಂದರೆ ಆಳುವವರ ಕನ್ನಡಾಭಿಮಾನ, ನಾಡಪ್ರೇಮ ಪ್ರಶ್ನಾರ್ಹ ಎಂದು ಕಿಡಿಕಾರಿದ್ದಾರೆ.

ಕನ್ನಡಿಗರ ಭಾವೈಕ್ಯದ ಸಂಕೇತವಾಗಿರುವ ಕನ್ನಡ ಧ್ವಜ ಡಿ.31ರ ಒಳಗಾಗಿ ತೆರವು ಗೊಳಿಸಬೇಕು ಎಂದು ಹೇಳಿದಾಗಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಈಗ ಕನ್ನಡ ಹೋರಾಟಗಾರರ ಮೇಲೆ ದಾಳಿಯ ಪ್ರಯತ್ನಗಳು ನಡೆಯುತ್ತಿವೆ. ಕರ್ನಾಟಕದಲ್ಲಿ ಕನ್ನಡಿಗರಿಗೇ ಎಚ್ಚರಿಕೆ ನೀಡುವ ಧೈರ್ಯ ತೋರುವವರಿಗೆ ಶಾಸ್ತಿಯಾಗಬೇಕು ಎಂದು ಸರಣಿ ಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಸರ್ಕಾರ ಕೂಡಲೇ ಪರಿಶೀಲಿಸಬೇಕು. ಇದರಲ್ಲಿ ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಆ ಮೂಲಕ ಕರ್ನಾಟಕದಲ್ಲಿ ‘ಕನ್ನಡಿಗನೇ ಸಾರ್ವಭೌಮ’ ಎಂಬ ಸಂದೇಶ ರವಾನಿಸಬೇಕು. ಇಲ್ಲವಾದರೆ, ಕೈಲಾಗದವರೆಲ್ಲರೂ ಕನ್ನಡಿಗರ ಮೇಲೆ ಸವಾರಿ ಮಾಡಲು ಬಂದಾರು… ಎಂದು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

1 Comment

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ