NEWSನಮ್ಮರಾಜ್ಯ

SIR ಪೂರ್ಣಗೊಂಡ ಬಳಿಕವೇ ಗೃಹಲಕ್ಷ್ಮೀ ಯೋಜನೆಯ ಪರಿಷ್ಕರಣೆ- ಮತದಾರರ ಪಟ್ಟೀಲಿ ಮನೆ ಯಜಮಾನಿ ಹೆಸರು ಕಡ್ಡಾಯ!

ಈಗ ಮತದಾರರ ಗುರುತಿನ ಚೀಟಿಯನ್ನು ಕಡ್ಡಾಯಗೊಳಿಸಿರುವುದರಿಂದ ಮತ್ತಷ್ಟು ಗೃಹಲಕ್ಷ್ಮಿಯರನ್ನು ಯೋಜನೆಯಿಂದ ಹೊರಗಿಡಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಯಾರ ಹೆಸರು ರದ್ದಾಗುವುದೋ ಅಂತಹವರು ಸಹಜವಾಗಿಯೇ ಗೃಹಲಕ್ಷ್ಮಿ ಯೋಜನೆಯಿಂದಲೂ ಅನರ್ಹಗೊಳ್ಳುತ್ತಾರೆ ಎಂಬುವುದು ಸರ್ಕಾರದ ಲೆಕ್ಕಾಚಾರವಾಗಿದ್ದು, ಅದನ್ನು ಫಿಲ್ಟರ್‌ ಮಾಡಲಿದೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ನವೀಕರಣಕ್ಕೆ ಮತದಾರರ ಗುರುತಿನ ಚೀಟಿ ಕಡ್ಡಾಯಗೊಳಿಸಲು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ (SIR) ಬಳಿಕ ಮತ್ತಷ್ಟು ಹೆಸರುಗಳನ್ನು ಸೋಸುವಿಕೆಗೆ ಮುಂದಾಗಲಿದೆ.

ಇನ್ನು ಎಸ್‌ಐಆರ್‌ ಪೂರ್ಣಗೊಂಡ ಬಳಿಕವೇ ಗೃಹಲಕ್ಷ್ಮೀ ಯೋಜನೆಯ ಪರಿಷ್ಕರಣೆ ಪ್ರಕ್ರಿಯೆ ಆರಂಭಿಸಲು ಸರ್ಕಾರ ತೀರ್ಮಾನಿಸಿದೆ. ಈ ನಡುವೆ ಆದಾಯ ತೆರಿಗೆದಾರರು, ನಿಧನರಾದವರು, ನಕಲಿ ದಾಖಲೆಗಳನ್ನು ನೀಡಿ ಒಂದೇ ಕುಟುಂಬದಿಂದ ಒಂದಕ್ಕಿಂತ ಹೆಚ್ಚು ಅರ್ಜಿದಾರರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿದ್ದುದನ್ನು ಪರಿಶೀಲನೆ ನಡೆಸಿ, ಅಂತಹವರನ್ನು ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲಾಗಿದೆ.

ಈಗ ಮತದಾರರ ಗುರುತಿನ ಚೀಟಿಯನ್ನು ಕಡ್ಡಾಯಗೊಳಿಸಿರುವುದರಿಂದ ಮತ್ತಷ್ಟು ಗೃಹಲಕ್ಷ್ಮಿಯರನ್ನು ಯೋಜನೆಯಿಂದ ಹೊರಗಿಡಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಯಾರ ಹೆಸರು ರದ್ದಾಗುವುದೋ ಅಂತಹವರು ಸಹಜವಾಗಿಯೇ ಗೃಹಲಕ್ಷ್ಮಿ ಯೋಜನೆಯಿಂದಲೂ ಅನರ್ಹಗೊಳ್ಳುತ್ತಾರೆ ಎಂಬುವುದು ಸರ್ಕಾರದ ಲೆಕ್ಕಾಚಾರವಾಗಿದ್ದು, ಅದನ್ನು ಫಿಲ್ಟರ್‌ ಮಾಡಲಿದೆ.

ಗೃಹಲಕ್ಷ್ಮಿ ಯೋಜನೆಯಡಿ ಅರ್ಹರಲ್ಲದವರೂ ಹಣ ಪಡೆಯುತ್ತಿದ್ದಾರೆ ಎಂಬ ಕಾರಣದಿಂದ ಫಲಾನುಭವಿಗಳಿಂದ ಮರು ಅರ್ಜಿ ಆಹ್ವಾನಿಸಿ, ಯೋಜನೆ ನವೀಕರಣಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಎಪಿಎಲ್, ಬಿಪಿಎಲ್ ಕಾರ್ಡ್ ಜತೆಗೆ ಮತದಾರರ ಗುರುತಿನ ಚೀಟಿಯನ್ನೂ ಹೊಂದಿರಬೇಕು. ಅಂತಹವರು ಮಾತ್ರವೇ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಲು ಅರ್ಹರು ಎಂದು ಸರ್ಕಾರ ಈಗ ಮತದಾರರ ಗುರುತಿನ ಚೀಟಿಯನ್ನು ಕಡ್ಡಾಯ ಮಾಡುತ್ತಿದೆ.

ರಾಜ್ಯದಲ್ಲಿ ಸದ್ಯ 1.24 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಯೋಜನೆಯ ಆರಂಭದಿಂದ (2023ರಿಂದ) ಈವರೆಗೆ 71 ಸಾವಿರ ಕೋಟಿ ರೂ.ಗೂ ಅಧಿಕ ಹಣ ನೀಡಲಾಗಿದೆ. ಈಗಾಗಲೇ ತೆರಿಗೆ ಪಾವತಿದಾರರು, ನಿಧನ ಹೊಂದಿದವರು, ಸರಕಾರಿ ಉದ್ಯೋಗಿಗಳೂ ಸೇರಿದಂತೆ ಸುಮಾರು 4.30 ಲಕ್ಷ ಮಂದಿಯನ್ನು ಯೋಜನೆಯಿಂದ ಕೈ ಬಿಡಲಾಗಿದೆ.

ಜತೆಗೆ, ನೆರೆ ರಾಜ್ಯಗಳಿಂದ ಬಂದು ಕರ್ನಾಟಕದಲ್ಲಿ ಅದರಲ್ಲೂ ಬೆಂಳೂರಿನಂತಹ ಬೃಹತ್ ನಗರದಲ್ಲಿ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಮತ ಚಲಾಯಿಸುವುದು ಅನ್ಯ ರಾಜ್ಯದಲ್ಲಿ, ಸೌಲಭ್ಯ ಪಡೆಯುವುದು ಕರುನಾಡಿನಲ್ಲಿ ಹೀಗಾಗಿ, ರಾಜ್ಯದ ಮತದಾರರಿಗೆ ಮಾತ್ರ ಗ್ಯಾರಂಟಿ ಯೋಜನೆಗಳನ್ನು ತಲುಪಿಸಬೇಕು ಎನ್ನುವುದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಖಚಿತ ನಿಲುವಾಗಿದೆ.

ಬಾಕಿ ಹಣಕ್ಕೆ ಪತ್ರ: ಮಾರ್ಚ್-ಏಪ್ರಿಲ್‌ವರೆಗೆ ಗೃಹಲಕ್ಷ್ಮೀ ಹಣ ಖಾತೆಗಳಿಗೆ ರವಾನೆಯಾಗಿದೆ. ಮೇ ತಿಂಗಳ ನಂತರದ ಹಣ ಬಿಡುಗಡೆಗಾಗಿ ಆರ್ಥಿಕ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಹಣ ಬಂದ ಕೂಡಲೇ ಅರ್ಹರ ಬ್ಯಾಂಕ್ ಖಾತೆಗೆ ಡಿಪಿಟಿ ಮೂಲಕ ಜಮಾ ಮಾಡುವ ಪ್ರಕ್ರಿಯೆ ಮುಂದುವರಿಯಲಿದೆ. ಇದೇ ವೇಳೆ, ಅರ್ಹರಾಗಿದ್ದರೂ ತಾಂತ್ರಿಕ ಕಾರಣಗಳಿಂದ ಹೆಸರು ಕೈಬಿಟ್ಟಿರುವವರಿದ್ದರೆ ಅವರು ಸಂಬಂಧಿತ ಇಲಾಖೆಯನ್ನು ಸಂಪರ್ಕಿಸಿ ದಾಖಲೆಗಳೊಂದಿಗೆ ಮರುಪರಿಶೀಲನೆ ಅರ್ಜಿ ಸಲ್ಲಿಸಬಹುದು. ಆದರೆ, ಅರ್ಹರಿಗೆ ಯೋಜನೆ ಕೈ ತಪ್ಪುವುದಿಲ್ಲ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಮತದಾರರ ಚೀಟಿ, ಉಳಿತಾಯ ಖಾತೆ ಕಡ್ಡಾಯ: ಗೃಹಲಕ್ಷ್ಮಿ ಯೋಜನೆಯ ಮರುನವೀಕರಣದ ಮಾರ್ಗಸೂಚಿಗಳನ್ನು ಸಚಿವ ಸಂಪುಟದ ಮುಂದಿಡಲು ಈಗಾಗಲೇ ಎಲ್ಲವನ್ನು ಸಲ್ಲಿಸಲಾಗಿದ್ದು, ಈಗ ಇದರಲ್ಲಿ ಮತದಾರರ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ. ಜತೆಗೆ, ಉಳಿತಾಯ ಖಾತೆ ಹೊಂದಿರುವುದನ್ನು ಕೂಡ ಕಡ್ಡಾಯ ಮಾಡಲಾಗಿದೆ.

ಇನ್ನು ಜಂಟಿ ಖಾತೆಗಳನ್ನು ಯೋಜನೆಗೆ ಪರಿಗಣಿಸದಿರಲು ಕೂಡ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಹೀಗೆ ಹತ್ತು ಹಲವು ಅಂಶಗಳನ್ನು ಒಳಗೊಂಡ ಮಾರ್ಗಸೂಚಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ, ಒಪ್ಪಿಗೆ ಸಿಕ್ಕ ಬಳಿಕ ಅದನ್ನು ಅಂತಿಮಗೊಳಿಸಲಾಗುವುದು.‌

‌ಈಗ ಸರ್ಕಾರ ಬಹುತೇಕ ಸಿಬ್ಬಂದಿಯನ್ನು ಎಸ್‌ಐಆರ್ ಸೇವೆಗೆ ನಿಯೋಜಿಸಿದ್ದು, ಎಲ್ಲ ಪ್ರಕ್ರಿಯೆ ಪೂರ್ಣಗೊಳ್ಳಲು ಇನ್ನೂ ಕಾಲಾವಕಾಶ ಬೇಕಾಗುತ್ತದೆ. ಆ ಬಳಿಕ ಎಲ್ಲವನ್ನು ಸರಿಪಡಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಇಂದು ಸಾರಿಗೆ ನೌಕರರ ವೇತನ ಸಂಬಂಧ ಕರೆದಿದ್ದ ರಾಜೀ ಸಂಧಾನ ಸಭೆ ಮತ್ತೆ ವಿಫಲ! 2028ರ ವೇಳೆಗೆ ಮಾದಕ ವಸ್ತು- ನಶೆ ಮುಕ್ತ ಕರ್ನಾಟಕವೇ ನಮ್ಮ ಗುರಿ: ಸಿಎಂ ಡಿಕೆಶಿ ಕೊರಟಗೆರೆ: ಸರ್ಕಾರಿ ಬಸ್‌ನಲ್ಲಿ ಪುಟ್ಟ ಮಗು ಅಸ್ವಸ್ಥ- ಪ್ರಾಣ ಉಳಿಸಲು ಆಸ್ಪತ್ರೆಗೆ ಬಸ್‌ ತೆಗೆದುಕೊಂಡು ಹೋದ ಚಾಲಕ ಶರಣ... ನಾಳೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್- ಡೀಸೆಲ್ ಮಾರಾಟದ ಎಲ್ಲ ನಿರ್ಬಂಧಗಳ ತೆರವುಗೊಳಿಸಿ ಕೇಂದ್ರ ಸರ್ಕಾರ ಆದೇಶ SIR ಪೂರ್ಣಗೊಂಡ ಬಳಿಕವೇ ಗೃಹಲಕ್ಷ್ಮೀ ಯೋಜನೆಯ ಪರಿಷ್ಕರಣೆ- ಮತದಾರರ ಪಟ್ಟೀಲಿ ಮನೆ ಯಜಮಾನಿ ಹೆಸರು ಕಡ್ಡಾಯ! ಓದಿನ ನೆಪದಲ್ಲಿ ಮಹಾನಗರಗಳ ಮಾಯಾಲೋಕಕ್ಕೆ ಬಂದು ಹಾದಿ ತಪ್ಪುತ್ತಿರುವ ಯುವತಿಯರು! KSRTC ಬಸ್ ಟೈಯರ್ ಸ್ಫೋಟ: ನಿವೃತ್ತ ಶಿಕ್ಷಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ- ಆಸ್ಪತ್ರ... 308 ಗ್ರಾಂ ಮಾದಕ ದ್ರವ್ಯ ವಶ: ಇಬ್ಬರು ಯುವತಿಯರು ಸೇರಿ ಏಳು ಮಂದಿ ಬಂಧನ ಗೃಹಜ್ಯೋತಿ ಯೋಜನೆ ದುರ್ಬಳಕೆ ತಡೆಗಾಗಿ ಮತ್ತೆ ಅರ್ಜಿ: ಸಿಎಂ ಡಿಕೆಶಿ ಅಧಿಕೃತ ಘೋಷಣೆ ರಾಜ್ಯಾದ್ಯಂತ ನಾಳೆಯಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ಮನೆಗೆ ಬರುವ ಬಿಎಲ್ಒಗಳಿಗೆ ಸಹಕರಿಸಲು ಡಿಸಿಗಳು ಕರೆ