NEWSನಮ್ಮರಾಜ್ಯರಾಜಕೀಯ

ಭ್ರಷ್ಟಾಚಾರಕ್ಕೂ ಅಂತ್ಯಕಾಲ ಇದ್ದೇ ಇರುತ್ತೆ: ಗ್ರಾಪಂ ಸದಸ್ಯರಿಗೆ ಸನ್ಮಾನ ಸಮಾರಂಭದಲ್ಲಿ ಸಂಸದ ಸಂಗಣ್ಣ ಕರಡಿ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಕೊಪ್ಪಳ: ಗ್ರಾಮ ಪಂಚಾಯಿತಿಗೆ ಚುನಾಯಿತರಾದವರೆಲ್ಲ ಯುವಕರಿದ್ದೀರಿ. ಅಧಿಕಾರ ಈಗೇನಿದ್ದರೂ ಯುವಕರ ಸ್ವತ್ತು. ನಿಮಗೆ ಸರಿಯಾದ ಮಾರ್ಗದರ್ಶನ ನೀಡಲು ನಾವು ಸಿದ್ಧರಿದ್ದೇವೆ. ಮತದಾರರ ವಿಶ್ವಾಸ ಉಳಿಸಿಕೊಂಡು ಎತ್ತರೆತ್ತರಕ್ಕೆ ಚುನಾಯಿತರು ಬೆಳೆಯಬೇಕು ಎಂದು ಸಂಸದ ಸಂಗಣ್ಣ‌ ಕರಡಿ ಕರೆ ನೀಡಿದರು.

ನಗರದ ಎಂಪಿ ಪ್ಯಾಲೇಸ್‌ನಲ್ಲಿ ಶನಿವಾರ ಆಯೋಜಿಸಿದ್ದ ಗ್ರಾಮ ಪಂಚಾಯಿತ ಬಿಜೆಪಿ ಬೆಂಬಲಿತ ನೂತನ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಹಳೇ ಬೇರು, ಹೊಸ ಚಿಗುರು ಎನ್ನುವ ಕಾಲಘಟ್ಟವಿದು. ನನಗೀಗ ಎಪ್ಪತ್ತು ವರ್ಷ ವಯಸ್ಸು ನಮ್ಮದು ಬಿಡಿ ಇನ್ನು ಮುಂದೆ ನಿಮಗೆ ಮಾರ್ಗ ದರ್ಶನ ಮಾಡಿಕೊಂಡು ಇರುವತ್ತ ಹೆಜ್ಜೆಯನ್ನಿಡುವ ಕಾಲಘಟಕ್ಕೆ ಬಂದು ನಿಂತಿದ್ದೇವೆ ಎಂದು ಪರೋಕ್ಷವಾಗಿ ರಾಜಕೀಯ ನಿವೃತ್ತಿಯ ಹೇಳಿಕೆ ನೀಡಿದರು. ಇದು ಕೆಲವರಲ್ಲಿ ಅನುಮಾನಕ್ಕೂ ಕಾರಣವಾಗಿದೆ.

ಈ ನಡುವೆ ಮತ್ತೆ ಮಾತು ಮುಂದುವರಿಸಿದ ಸಂಗಣ್ಣ, ಇಂದು ಎಲ್ಲೆಡೆ ಭ್ರಷ್ಟಾಚಾರ ಮಿತಿ‌ ಮೀರಿದೆ. ಅದಕ್ಕೂ ಅಂತ್ಯಕಾಲ ಇದ್ದೇ ಇರುತ್ತೆ. ಭ್ರಷ್ಟಾಚಾರ ಆಡಳಿತದಿಂದ ಜನತೆಯ ವಿಶ್ವಾಸ ಕಳೆದುಕೊಳ್ಳಬೇಕಾಗುತ್ತದೆ. ಕಳಂಕರಹಿತ, ಜನಪರ ಕೆಲಸ ಸದಾ ನಮ್ಮನ್ನು ಬೆಳೆಸುತ್ತದೆ. ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಗಾಗಿ ಚುನಾಯಿತ ಗ್ರಾಮ ಪಂಚಾಯಿತಿ ಸದಸ್ಯರು ಶ್ರಮಿಸುವ ಮೂಲಕ ಗಾಂಧಿ ಕಂಡ ಕನಸನ್ನು ನನಸಾಗಿಸಬೇಕು ಎಂದು ಕಿವಿ ಮಾತು ಹೇಳಿದರು.

ಜಿಲ್ಲೆಯ ವಿವಿಧ ಗ್ರಾಮ‌ ಪಂಚಾಯಿತಿಗಳಿಗೆ ಹೊಸದಾಗಿ ಆಯ್ಕೆ ಯಾಗಿರುವ ಬಿಜೆಪಿ‌ ಬೆಂಬಲಿತ ಸದಸ್ಯರು ಯಾವುದೇ ಆಸೆ ಆಮೀಷಗಳಿಗೆ ಬಲಿಯಾಗದೇ, ಮತದಾರರ ಆಶೋತ್ತರ ಈಡೇರಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಚುನಾಯಿತರಿಗೆ ಹಲವು ಸಂದರ್ಭಗಳಲ್ಲಿ ಹಣದ ಆಮೀಷ ನೀಡಲಾಗುತ್ತೆ. ನಮ್ಮ ಆಡಳಿತಾವಧಿಯಲ್ಲಿ ಹಣವೊಂದೇ ಮುಖ್ಯವಲ್ಲ. ಮುಂದಿನ ಅವಧಿಗೂ ಆಯ್ಕೆಯಾಗುವಂತೆ ಕೆಲಸ ಮಾಡಿದರೆ ಗ್ರಾಮ ಅಭಿವೃದ್ದಿಯಾಗುತ್ತೆ. ಎಲ್ಲರೂ ನಾಯಕತ್ವ ಗುಣವನ್ನು ರೂಢಿಸಿಕೊಳ್ಳಬೇಕು. ಕೊಪ್ಪಳ ತಾಲೂಕನ್ನು ಮಾದರಿ ತಾಲೂಕನ್ನಾಗಿ ಮಾಡುವ ಪ್ರತಿಜ್ಞೆ ಮಾಡೋಣ ಎಂದು ಹೇಳಿದರು.

ಮನೆಗಳು ಸೇರಿದಂತೆ ಸರ್ಕಾರದಿಂದ ಬರುವ ಯೋಜನೆಗಳನ್ನು ಬಡಜನರಿಗೆ ಮುಟ್ಟಿಸುವ ಕೆಲಸ ಮಾಡಿದರೆ ಅದಕ್ಕಿಂತ ಪುಣ್ಯದ ಕೆಲಸ ಬೇರೊಂದಿಲ್ಲ. ಇದು ನಮಗೆಲ್ಲ ಸಿಕ್ಕಿರುವ ಸದಾವಕಾಶ. ಸಿಎಂ ಯಡಿಯೂರಪ್ಪನವರು ಸೇರಿ ಇತರರು ಜಿಲ್ಲೆಗೆ ಆಗಮಿಸಲಿದ್ದಾರೆ. ಅವರು ನಮ್ಮ ಕೆಲಸ ನೋಡಿ ಬೆನ್ನು ತಟ್ಟಿ ಇತರರಿಗೆ ಮಾದರಿ ಎನ್ನುವಂತೆ ಕೆಲಸ ಮಾಡಬೇಕು ಎಂದು ಹುರಿದುಂಬಿಸಿದರು.

ಆತ್ಮನಿರ್ಭರ ಯೋಜನೆಯಡಿಯಲ್ಲಿ 25 ಸಾವಿರ ಜನರಿಗೆ ಉದ್ಯೋಗವಕಾಶ ಸಿಗಲಿದೆ. ಕೊಪ್ಪಳದ ಏತ ನೀರಾವರಿ, ಸಿಂಗಟಾಲೂರ ಏತನೀರಾವರಿ ಕುಂಠಿತವಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ನಮಗೆ ಸಾಕಷ್ಟು ಯೋಜನೆಗಳು, ಕನಸುಗಳಿವೆ. ಭ್ರಷ್ಟಾಚಾರ ಮಾಡಿದರೆ ಮುಂದೊಂದು ದಿನ ಅದು ಶಾಪವಾಗಿ ಕಾಡುತ್ತೆ. ಜನತಾ ಮನೆಗಳ ಕಾನ್ಸೆಪ್ಟ್‌ನ್ನು ನಿಮ್ಮೆಲ್ಲರ ಪರವಾಗಿ ಮಾಡುತ್ತೇವೆ. 8 ಸಾವಿರಕ್ಕೂ ಹೆಚ್ಚು ಮನೆಗಳ ನಿರ್ಮಾಣ ನನೆಗುದಿಗೆ ಬಿದ್ದಿದೆ. ಇವತ್ತು ನಾವು ಇರಬಹುದು, ನಾಳೆ ಇರಲಿಕ್ಕಿಲ್ಲ. ಆದರೆ ಅಭಿವೃದ್ಧಿ ಕೆಲಸಗಳು ಉಳಿಯುತ್ತವೆ ಎಂದು ಸ್ಫೂರ್ತಿ ತುಂಬಿದರು.

ಕೊಪ್ಪಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಗೆದ್ದಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭಾಗವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಮಾಲಿಪಾಟೀಲ್, ಗಣೇಶ ಹೊರತಟ್ನಾಳ ಇತರರಿದ್ದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ