- ವಿಜಯಪಥ ಸಮಗ್ರ ಸುದ್ದಿ
ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಸ್ಥಾನದಿಂದ ಕೆಳಗಿಳಿಯೋದು ಪಕ್ಕಾ ಎಂದು ಮಾಜಿ ಸಿಎಂ ಹಾಗೂ ವಿಧಾನಸಭೆ ವಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ.
ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಆಗೊಲ್ಲಾ. ಬಿಜೆಪಿಯೇ ಅಧಿಕಾರಾವಧಿ ಪೂರ್ಣಗೊಳಿಸುತ್ತೆ. ಆದರೆ, ಯಡಿಯೂರಪ್ಪನವರು ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ಅನಿಶ್ಚಿತ ಎಂದು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ತಿಳಿಸಿದರು.
ಇತ್ತೀಚಿನ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶದ ಬಗ್ಗೆಯೂ ಮಾತನಾಡಿ, ಗ್ರಾಪಂನಲ್ಲಿ ನಾವೇ ಹೆಚ್ಚು ಸ್ಥಾನ ಗೆದ್ದಿದ್ದೇವೆ. ಹಳೇ ಮೈಸೂರು ಭಾಗ ಹಾಗೂ ರಾಜ್ಯದ ಇತರೆಡೆಗಳಲ್ಲಿ ಕಾಂಗ್ರೆಸ್ ನಂಬರ್ ಒನ್ ಸ್ಥಾನದಲ್ಲಿದೆ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಎನ್‌ಡಿಎ ಜತೆ ಜೆಡಿಎಸ್ ಮೈತ್ರಿ ವಿಚಾರದ ಕುರಿತು ನಾನು ಮಾತನಾಡಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ನಾನು ಸಿಎಂ ಆಗಿದ್ದಾಗ ನಾಲ್ಕು ಸಮುದಾಯವನ್ನು ಮೀಸಲಾತಿಗೆ ಸಿಫಾರಸು ಮಾಡಿದ್ದೆ. ಈಶ್ವರಪ್ಪ ಸದ್ಯ ಕೇಂದ್ರ ಸರ್ಕಾರವನ್ನು ಕೇಳಲಿ. ಈಶ್ವರಪ್ಪ ಕುರುಬ ಸಮುದಾಯವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದು ಆರ್ಎಸ್ಎಸ್ ಹಾಗೂ ಈಶ್ವರಪ್ಪ ಕುತಂತ್ರ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿಯವರದ್ದೇ ಸರ್ಕಾರವಿದೆ. ಈಶ್ವರಪ್ಪ ಹೋರಾಟ ಮಾಡೋದು ಬಿಟ್ಟು ಮೀಸಲಾತಿ ಕೊಡಿಸಲಿ ಎಂದು ಸಿದ್ಧರಾಮಯ್ಯ ಹರಿಹಾಯ್ದಿದ್ದಾರೆ.
ಕೊರೊನಾ ವ್ಯಾಕ್ಸಿನ್ ಎಲ್ಲರೂ ತಗೋಬೇಕು. ಆದರೆ, ಅದು ಸೈಂಟಿಫಿಕ್ ಆಗಿ ಪ್ರೂವ್ ಆಗಬೇಕು. 80 ಪರ್ಸೆಂಟ್ ಗಿಂತ ಜಾಸ್ತಿ ಎಫೆಕ್ಟ್ ಇರಬೇಕು. ಆ ಬಗ್ಗೆ ರಿಯಾಕ್ಟ್ ಮಾಡೋಕೆ ನಾನು ಎಕ್ಸಪಟ್೯ ಅಲ್ಲ. ಹೆಚ್ಚಿನ ವಿಚಾರ ತಿಳಿದುಕೊಂಡು ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.
ಇನ್ನು ಸಿಎಂ ಅವರ ಸ್ಥಾನ ಯಾವಾಗ ಬದಲಾಗುತ್ತೋ ಗೊತ್ತಿಲ್ಲ. ಆದರೆ, ಅವರು ಸಿಎಂ ಸ್ಥಾನದಿಂದ ಇಳಿಯುವುದು ಖಚಿತ ಎಂದಿದ್ದಾರೆ. ಆದರೆ ಇತ್ತ ಯಡಿಯೂರಪ್ಪನವರೇ ನಮ್ಮ ಶಾಶ್ವತ ಸಿಎಂ ಎಂದು ಬಿಜೆಪಿ ರಾಜ್ಯ ನಾಯಕರು ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರು ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
Donbarata adtha iddira ella abhiruddi ilve illa.