NEWSನಮ್ಮರಾಜ್ಯರಾಜಕೀಯ

ತಾವೇ ಮುಂದಿನ ಸಿಎಂ ಅಂತಾ ಹೇಳೋ ಮಾತಿನಲ್ಲಿ ಏನು ಅರ್ಥ ಇಲ್ಲ: ರಾಮಸಾಸ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಪ್ರಸ್ತುತ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅಧಿಕಾರವನ್ನು ಗಮನಿಸಿದರೆ ಈ ಹಿಂದೆ ಇದ್ದ ಆಡಳಿತ ಈಗ ಇಲ್ಲ ಅಂತಾ ಎನಿಸುತ್ತದೆ ಎಂದು ಸ್ವತಃ ಬಿಜೆಪಿಯ ಹಿರಿಯ ಶಾಸಕ ರಾಮದಾಸ್​ ಹೇಳಿದ್ದಾರೆ.

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, 2008ರಲ್ಲಿ ಇದ್ದ ಆಡಳಿತ ಈಗ ಕಂಡು ಬರುತ್ತಿಲ್ಲ. ಹೀಗಾಗಿ ಅದು ಬದಲಾಗಬೇಕು. ಶಾಸಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರತಿಯೊಬ್ಬ ಶಾಸಕರ ವಿಶ್ವಾಸದೊಂದಿಗೆ ಆಡಳಿತ ನಡೆಸಬೇಕೆ ವಿನಃ ತಾವೇ ಮುಂದಿನ ಸಿಎಂ ಅಂತಾ ಹೇಳೋ ಮಾತಿನಲ್ಲಿ ಏನು ಅರ್ಥ ಇರುವುದಿಲ್ಲ. ಹೀಗಾಗಿ ಈ ಮಾತನ್ನು ಶಾಸಕರೇ ಹೇಳಿದರೆ ಮಾತ್ರ ನಾಯಕತ್ವದ ಬಗ್ಗೆ ಒಂದು ಅರ್ಥ ಬರುತ್ತದೆ. ಮುಖ್ಯಮಂತ್ರಿ ಗಳು ಈ ನಿಟ್ಟಿನಲ್ಲಿ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರತಿ ಬಾರಿ ಸಿಎಂ ಸ್ಥಾನ ಬದಲಾವಣೆ ಮಾತು ಕೇಳಿ ಬರುತ್ತದೆ. ಅದು ಶಾಸಕರೇ ಈ ಮಾತುಗಳನ್ನು ಆಡುತ್ತಾರೆ. ಈ ಸಂದರ್ಭದಲ್ಲಿ ಖುದ್ದು ಮುಖ್ಯಮಂತ್ರಿಗಳೇ ಈ ಬಗ್ಗೆ ಸ್ಪಷ್ಟನೆ ನೀಡುತ್ತಾರೆ. ಇಂತಹ ಸಂದರ್ಭದಲ್ಲಿ ಶಾಸಕರು ಸಿಎಂ ಬೆನ್ನಿಗೆ ನಿಲ್ಲುವಂತೆ ಆಗಬೇಕು. ಹಾಗೇ ಆಗಬೇಕಾದರೆ, ಶಾಸಕರ ಸಮಸ್ಯೆ ಆಲಿಸಿ, ಅವರ ಬೇಡಿಕೆ ಈಡೇರಿಸಬೇಕು. ಎಲ್ಲಾ ಶಾಸಕರನ್ನು ಗಣನೆಗೆ ತೆಗೆದುಕೊಳ್ಳಬೇಕು. ಬಿಎಸ್​ವೈ ನಡೆಗೆ ಶಾಸಕರು ಮೆಚ್ಚುವಂತೆ ಇರಬೇಕು. ಅದನ್ನು ಬಿಟ್ಟು ಈ ರೀತಿ ನಡೆದುಕೊಂಡರೆ ಹೇಗೆ ಎಂದು ಮುಖ್ಯಮಂತ್ರಿ ಕಾರ್ಯವೈಖರಿ ವಿರುದ್ಧ ಅಸಮಾಧಾನ ಹೊರಹಾಕಿದರು.

ಇನ್ನು ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಇರುತ್ತೇನೆ. ಇದರಲ್ಲಿ ಅನುಮಾನ ಬೇಡ ಎಂದು ಪದೇಪದೇ ಹೇಳುತ್ತಿದ್ದಾರೆ. ಅದನ್ನು ಶಾಸಕರ ಬಾಯಲ್ಲಿ ಬರುವಂತೆ ನೋಡಿಕೊಳ್ಳಬೇಕು. ಆ ಮೂಲಕ ಮುಖ್ಯಮಂತ್ರಿಗಳ ಸ್ಥಾನ ಬದಲಾವಣೆ ಆಗುವುದಿಲ್ಲ ಎಂಬುದನ್ನು ಖಾತ್ರಿ ಮಾಡಿಕೊಳ್ಳಬೇಕು ಎಂದು​ ತಿಳಿಸಿದರು.

ಮಧ್ಯವರ್ತಿಗಳ ಹಾವಳಿ ತಪ್ಪಿಸಿ
ಶಾಸಕರ ಕ್ಷೇತ್ರಗಳಿಗೆ ಅನುದಾನ ವಿಚಾರದಲ್ಲಿ ಕೆಲ ಸಚಿವರು ಮಧ್ಯವರ್ತಿಗಳು ಹೋದರೆ ಮಾತ್ರ ಅನುದಾನ ಬಿಡುಗಡೆ ಮಾಡುತ್ತಾರೆ. ಆದರೆ, ಶಾಸಕರು ಹೋದರೆ ಅನುದಾನ ಬಿಡುಗಡೆ ಮಾಡೋದಿಲ್ಲ. ಅವರ ಪತ್ರಕ್ಕೂ ಕಿಮ್ಮತ್ತು ಕೊಡುವುದಿಲ್ಲ. ಹೀಗಿರುವಾಗ ಶಾಸಕರು ಹೇಗೆ ಅನುದಾನ ತೆಗೆದುಕೊಳ್ಳುವುದು. ಇದನ್ನು ತಪ್ಪಿಸಿ, ಸಂಬಂಧಿಸಿದ ಸಚಿವರಿಗೆ ನಿರ್ದೇಶನ ನೀಡಿ ಎಂದು ಶಾಸಕರು ಒಕ್ಕೋರಲಿನಿಂದ ಸಭೆಯಲ್ಲಿ ಸಿಎಂಗೆ ಒತ್ತಾಯ ಮಾಡಿದರು.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ